ಉಡುಪಿ : ಸುಮಾರು ಒಂದೂವರೆ ವರ್ಷಗಳ ನಂತರ ಜಿಲ್ಲೆಯಾದ್ಯಂತ ಇಂದು ಆರಂಭವಾದ ಅಂಗನವಾಡಿ ಕೇಂದ್ರಕ್ಕೆ
ಆಗಮಿಸಿದ, ಪುಟಾಣಿ ಮಕ್ಕಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಚಾಕೋಲೇಟ್, ಬಲೂನ್, ಗುಲಾಬಿ ಹೂ ನೀಡಿ ಪ್ರೀತಿಯಿಂದ
ಸ್ವಾಗತಿಸಿದರು.
ಉಡುಪಿ ನಗರಸಭಾ ವ್ಯಾಪ್ತಿಯ ಕಡಿಯಾಳಿ ಅಂಗನವಾಡಿ ಕೇಂದ್ರದಲ್ಲಿ ಬಲೂನು, ತಳಿರು ತೋರಣಗಳಿಂದ ಸಿದ್ಧಪಡಿಸಿದ್ದ ಅಂಗನವಾಡಿ
ಕೇಂದ್ರದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಭಾಗವಹಿಸಿದರು.
ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಆಗಮನಕ್ಕೆ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳು, ಸಿದ್ಧತೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ
ಜಿಲ್ಲಾಧಿಕಾರಿಗಳು, ಮಕ್ಕಳು ಮತ್ತು ಪೋಷಕರು ಕೇಂದ್ರಕ್ಕೆ ಉತ್ಸಾಹದಿಂದ ಆಗಮಿಸುತ್ತಿದ್ದು, ಸ್ಥಳೀಯರಿಂದ ಉತ್ತಮ ಸಹಕಾರ ದೊರೆತಿದ್ದು,
ಇಂದು ಜಿಲ್ಲೆಯ ಎಲ್ಲಾ 1191 ಅಂಗನವಾಡಿಗಳು ಆರಂಭಗೊAಡಿದ್ದು, ಎಲ್ಲಾ ಕೇಂದ್ರಗಳಲ್ಲಿ ಮಕ್ಕಳ ಸುರಕ್ಷತೆಗೆ ಗರಿಷ್ಠ ಸುರಕ್ಷಾ
ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪೋಷಕರು ಯಾವುದೇ ಆತಂಕವಿಲ್ಲದೇ ಪ್ರತಿದಿನ ತಮ್ಮ ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ
ಕಳುಹಿಸುವಂತೆ ಹೇಳಿದರು.
ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯೆ ಗೀತಾ ಶೇಟ್, ಬಾಲ ವಿಕಾಸ ಸಮಿತಿಯ ಸದಸ್ಯರು, ಪೋಷಕರು, ಸ್ಕೌಟ್ಸ್ ಮತ್ತು ಗೈಡ್ಸ್ ಸಿಬ್ಬಂದಿ,
ಆಶಾ ಕಾರ್ಯಕರ್ತೆಯರು ಮತ್ತಿತರರು ಭಾಗವಹಿಸಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಸುಮಲತಾ ವಂದಿಸಿದರು.
ಕಾಜಾರಾಗುತ್ತುನಲ್ಲಿ ಆರತಿ ಬೆಳಗಿ ಸ್ವಾಗತ : ಕಾಜಾರಗುತ್ತು ಅಂಗನವಾಡಿ ಕೇಂದ್ರಕ್ಕೆ ಆಗಮಿಸಿದ ಮಕ್ಕಳಿಗೆ ಆರತಿ ಬೆಳಗುವುದರ ಮೂಲಕ ಮತ್ತು
ಪುಷ್ಪವೃಷ್ಠಿ ಸುರಿಸುವುದರ ಮೂಲಕ ನಲ್ಮೆಯ ಸ್ವಾಗತ ಕೋರಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ
ಶೇಷಪ್ಪ, ಕೋಡಿಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಆಶಾ ಶೆಟ್ಟಿ, ಉಪಾಧ್ಯಕ್ಷ ಸದಾನಂದ ಪ್ರಭು, ಪಿಡಿಓ ರೇವತಿ, ಗ್ರಾ.ಪಂ.ನ ಸದಸ್ಯರು, ಬಾಲ ವಿಕಾಸ
ಸಮಿತಿ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…
ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ : ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…