Featured

ಉಡುಪಿ:  ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಈಶ್ವರ್ ಮಲ್ಪೆ ಕುಟುಂಬಕ್ಕೆ ರೂ.1 ಲಕ್ಷದ ಚೆಕ್ ಹಸ್ತಾಂತರ – vishwanews24

ಉಡುಪಿ:  ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಈಶ್ವರ್ ಮಲ್ಪೆ ಕುಟುಂಬಕ್ಕೆ ರೂ.1 ಲಕ್ಷದ ಚೆಕ್ ಹಸ್ತಾಂತರ

ಉಡುಪಿ: ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ, ಹಲವು ಕ್ಲಿಷ್ಟಕರ ಸಂದರ್ಭದಲ್ಲಿ ಜಲ ಅವಘಡದಲ್ಲಿ ಮೃತಪಟ್ಟ ಮೃತದೇಹಗಳನ್ನು ನೀರಿನಿಂದ ಮೇಲೆತ್ತಿದ ಅಪದ್ಭಾಂದವ, ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷದ ಚೆಕ್ ನ್ನು ಅರುಣ್ ಕುಮಾರ್ ಪುತ್ತಿಲ ಈಶ್ವರ್ ಮಲ್ಪೆ ಮತ್ತು ಗೀತಾ ದಂಪತಿಗಳಿಗೆ ಅವರ ಮಲ್ಪೆಯ ಮನೆಯಲ್ಲಿ ವಿತರಿಸಿದರು.

ತನ್ನ ಮಕ್ಕಳು ವಿಶೇಷ ಚೇತನರಾಗಿ ತೀವ್ರ ಅನಾರೋಗ್ಯದಿಂದಿದ್ದರೂ ಮನೆಯ ಪರಿಸ್ಥಿತಿಯನ್ನು ಲೆಕ್ಕಿಸದೆ ಪ್ರಾಕೃತಿಕ ವಿಕೋಪದ ಕಠಿಣ ಸಂದರ್ಭದಲ್ಲಿ ಜೀವದ ಹಂಗು ತೊರೆದು ಉಚಿತವಾಗಿ ರಕ್ಷಣೆಗೆ ಧಾವಿಸುವ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಯವರ ಸೇವೆಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ.

 

ಉತ್ತರ ಕನ್ನಡ ಜಿಲ್ಲೆಯ ಶೀರೂರು ಗುಡ್ಡ ಕುಸಿತದ ರಕ್ಷಣಾ ಕಾರ್ಯದಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತದ ಮನವಿಯ ಮೇರೆಗೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿ ನಾಪತ್ತೆಯಾಗಿದ್ದ ಚಾಲಕ ಅರ್ಜುನ್ ಲಾರಿಯನ್ನು ಗುರುತಿಸುವಲ್ಲಿಯೂ ಈಶ್ವರ್ ಮಲ್ಪೆ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಕೊನೆಗೆ ಅವರನ್ನು ಅಧಿಕಾರಿಗಳು ಮತ್ತು ಸರ್ಕಾರ ಕಡೆಗಣನೆ ಮಾಡಿರುವುದು ಸಮಾಜದಲ್ಲಿ ತೀವ್ರ ಬೇಸರವನ್ನು ಉಂಟು ಮಾಡಿದೆ.

ಮನೆಯಲ್ಲಿ ಬಡತನವಿದ್ದರೂ ಮಾನವೀಯತೆಯಲ್ಲಿ ಅಗರ್ಭ ಶ್ರೀಮಂತರಾಗಿರುವ ಈಶ್ವರ್ ಮಲ್ಪೆಯವರ ಸೇವೆ ಇನ್ನಷ್ಟು ಬೇಕೆಂಬ ಹಂಬಲದಿಂದ ಪ್ರತಿಯೊಬ್ಬನೂ ಈಶ್ವರ್ ಮಲ್ಪೆಯವರಿಗೆ ಬೆಂಬಲವಾಗಿ ನಿಲ್ಲಬೇಕೆಂದು ಈ ಸಂದರ್ಭದಲ್ಲಿ ಅರುಣ್ ಕುಮಾರ್ ಪುತ್ತಿಲ ಹೇಳಿದರು.

ಈಶ್ವರ್ ಮಲ್ಪೆಯವರಿಗೆ ಕೇವಲ ಶ್ಲಾಘನೆ ಸಾಕಾಗುವುದಿಲ್ಲ. ಸುಮಾರು 200 ರಷ್ಟು ಜೀವಗಳನ್ನು ನೀರಿನಿಂದ ಮೇಲೆತ್ತಿದ ಈ ಸಾಧಕನ ಹೆಸರಲ್ಲಿ ಸರ್ಕಾರ ‘ಅಪದ್ಭಾಂದವ ಈಶ್ವರ್ ಮಲ್ಪೆ ತುರ್ತು ಸೇವಾ ಘಟಕ’ ಸ್ಥಾಪಿಸಿ ಅದರ ಮೂಲಕ ರಾಜ್ಯದೆಲ್ಲೆಡೆ ತರಬೇತಿ ಪಡೆದ ಒಂದು ತುರ್ತು ಸೇವಾ ತಂಡ ರಚನೆಯಾಗು ವಂತೆ ಸರ್ಕಾರ ಇವರಿಗೆ ಸವಲತ್ತು ನೀಡಬೇಕು ಮತ್ತು ಈಶ್ವರ್ ಮಲ್ಪೆಯ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾಡುವಂತೆ ಅರುಣ್ ಕುಮಾರ್ ಪುತ್ತಿಲ ಒತ್ತಾಯಿಸಿದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

9 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

9 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

10 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

10 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

11 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

11 hours ago