ಉಡುಪಿ: ಪುತ್ರನಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಮನನೊಂದ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವಾದ ಕಳತ್ತೂರು ಗ್ರಾಮದ ಜ್ಯೋತಿ ನಗರ ಎಂಬಲ್ಲಿ ನಡೆದಿದೆ.
ಸುಂದರಮೂಲ್ಯ (60) ಮನನೊಂದು ಆತ್ಮಹತ್ಯೆ ಮಾಡಿಕೊಂಡವರು. ಇವರು ಬಿಪಿ, ಶುಗರ್ ಖಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಚಿಕಿತ್ಸೆಯಲ್ಲಿದ್ದರು. ಈ ನಡುವೆ ಇವರು ಪುತ್ರ ಶ್ವಾಸಕೋಶಕ್ಕೆ ಸಂಬಂಧಿಸಿದ ಖಾಯಿಲೆಯಿಂದ ಬಳಲುತ್ತಿದ್ದರು.
ಮಣಿಪಾಲದ ಕೆಎಮ್ ಸಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಅವರಲ್ಲಿ ಕೊರೋನಾ ಸೊಂಕು ಧೃಡಪಟ್ಟಿದೆ. ವಿಚಾರ ತಿಳಿದ ಅವರ ತಂದೆ ಸುಂದರ ಮೂಲ್ಯ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ರಾತ್ರಿ ವೇಳೆಯಲ್ಲಿ ವಿಷ ಪದಾರ್ಥ ಸೇವಿಸಿದ್ದರು. ಬಳಿಕ ಅವರನ್ನು ಉಡುಪಿಯ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…