ಉಡುಪಿ: ಪುನುಗು ಬೆಕ್ಕು ಅಕ್ರಮ ಸಾಗಾಟ : ಇಬ್ಬರ ಬಂಧನ -Vishwanews24

ಉಡುಪಿ: ಪುನುಗು ಬೆಕ್ಕನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿದ ಪೊಲೀಸ್ ಅರಣ್ಯ ಸಂಚಾರಿ ದಳ ಪುತ್ತೂರು (ದ.ಕ.) ಇಲ್ಲಿನ ಅಧಿಕಾರಿ ಹಾಗೂ ಸಿಬ್ಬಂದಿಗಳು ಪುನುಗು ಬೆಕ್ಕು ಸಹಿತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬ್ರಹ್ಮಾವರ ತಾಲೂಕಿನ ಹಿಲಿಯಾಣ ಗ್ರಾಮದ ಹೈಕಾಡಿ ಎಂಬಲ್ಲಿ ಈ ಘಟನೆ ನಡೆದಿದೆ.

ಕುಂದಾಪುರ ವೆಸ್ಟ್ ಬ್ಲಾಕ್ ರಸ್ತೆ ದತ್ತಾತ್ರೇಯ ನಗರದ ನಿವಾಸಿ ಅಸ್ಗರ್ ಅಲಿ (22), ಹಾಗೂ ಬಿದ್ಕಲಕಟ್ಟೆ ನಿವಾಸಿ ಶರತ್ (23) ಬಂಧಿತ ಆರೋಪಿಗಳಾಗಿದ್ದು ಇವರಿಂದ ಜೀವಂತ ಪುನುಗು ಬೆಕ್ಕು, ಪಂಜರ, ಮಾರುತಿ ಇಕೋ ಕಾರು ಮೊಬೈಲ್ ಫೋನುಗಳನ್ನು ವಶಕ್ಕೆ ಪಡೆಯಲಾಗಿದೆ.

ಪುತ್ತೂರಿನ ಪೊಲೀಸ್ ಅರಣ್ಯ ಸಂಚಾರಿ ದಳದ (ಡಬ್ಲ್ಯೂ.ಎಲ್.ಪಿ) ಪೊಲೀಸ್ ಉಪನಿರೀಕ್ಷಕ ಜಯ ಕೆ. ಅವರು ಕಚೇರಿಯಲಿದ್ದ ವೇಳೆ ಜೀವಂತ ಪುನುಗು ಬೆಕ್ಕಣ್ಣು ಮಾರಾಟದ ಸಲುವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ವರ್ತಮಾನ ಬಂದಿದ್ದು ಅದರಂತೆಯೇ ಸಿಬ್ಬಂದಿಗಳ ಜೊತೆ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಸುಂದರ್ ಶೆಟ್ಟಿ, ಉದಯ್, ರಾಮಕೃಷ್ಣ ಮೊದಲಾದವರು ಇದ್ದರು. ಈ ಪ್ರಕರಣವು ವನ್ಯ ಜೀವಿ ಅರಣ್ಯ ಸಂರಕ್ಷಣಾ ಕಾಯ್ದೆಗೆ ಸಂಬಂಧಿಸಿದ ಪ್ರಕರಣವಾದ್ದರಿಂದ ಆರೋಪಿಗಳನ್ನು ಮತ್ತು ಸ್ವತ್ತುಗಳನ್ನು ಮುಂದಿನ ತನಿಖೆ ಬಗ್ಗೆ ನ್ಯಾಯಾಲಯದ ಅನುಮತಿ ಪಡೆದು ಶಂಕರನಾರಾಯಣ ವಲಯ ಅರಣ್ಯಾಧಿಕಾರಿಗಳಿಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

2 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

2 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

2 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

3 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

4 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

4 hours ago