ಮಂಗಳೂರು: ಕೆಲವು ದಿನಗಳಿಂದ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದ್ದ ಸಂದೇಶವೊಂದಕ್ಕೆ ಇದೀಗ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯೆ ನೀಡಿದ್ದು, ವಿವಾದಕ್ಕೆ ತೆರೆ ಎಳೆದಿದ್ದಾರೆ. ಉಡುಪಿ ಪುರಭವನದಲ್ಲಿ ನಡೆಯುವ ಬಿಲ್ಲವ – ಮುಸ್ಲಿಂ ಸಮಾವೇಶದಲ್ಲಿ ತಾನು ಭಾಗವಹಿಸುವುದಿಲ್ಲ ಎನ್ನುವ ಮೂಲಕ ಹಲವು ದಿನಗಳಿಂದ ನಡೆಯುತ್ತಿದ್ದ ಚರ್ಚೆಗೆ ಬ್ರೇಕ್ ಹಾಕಿದ್ದಾರೆ.
ಉಡುಪಿ ಪುರಭವನದಲ್ಲಿ ನಡೆಯುವ ಬಿಲ್ಲವ – ಮುಸ್ಲಿಂ ಸಮಾವೇಶದಲ್ಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಭಾಗವಹಿಸಲಿದ್ದಾರೆ ಎಂಬ ಬಗ್ಗೆ ಸಂದೇಶಗಳು ಹರಿದಾಡುತ್ತಿದ್ದವು. ಅಲ್ಲದೆ ಈ ಬಗ್ಗೆ ಸಾಕಷ್ಟು ಚರ್ಚೆಗಳು ಕೂಡ ನಡೆಯುತ್ತಿತ್ತು. ಆದರೆ ಇದೀಗ ಈ ವಿಚಾರಕ್ಕೆ ತೆರೆಬಿದ್ದಿದೆ. ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ತಾನು ಆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ. ಅಲ್ಲದೆ ಆ ಕಾರ್ಯಕ್ರಮಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
ಈ ಹಿಂದೆಯೇ ನಿರ್ಧಾರವಾದಂತೆ ಜನವರಿ 11ರಂದು ತಾನು ಶಿವಮೊಗ್ಗ ಜಿಲ್ಲೆಯ ಪ್ರವಾಸದಲ್ಲಿದ್ದು, ಇಲಾಖಾ ಪ್ರಗತಿ ಪರಿಶೀಲನೆ ಮತ್ತು ಅರ್ಚಕರ ಸಮಾವೇಶ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…