ಉಡುಪಿ : ಪುರಭವನದಲ್ಲಿ ನಡೆಯುವ ಮುಸ್ಲಿಂ ಬಿಲ್ಲವ ಸಮಾವೇಶದಲ್ಲಿ ಭಾಗವಹಿಸುವುದಿಲ್ಲ: ಕೋಟ ಶ್ರೀನಿವಾಸ್ ಪೂಜಾರಿ – Vishwanews24

ಮಂಗಳೂರು: ಕೆಲವು ದಿನಗಳಿಂದ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದ್ದ ಸಂದೇಶವೊಂದಕ್ಕೆ ಇದೀಗ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯೆ ನೀಡಿದ್ದು, ವಿವಾದಕ್ಕೆ ತೆರೆ ಎಳೆದಿದ್ದಾರೆ. ಉಡುಪಿ ಪುರಭವನದಲ್ಲಿ ನಡೆಯುವ ಬಿಲ್ಲವ – ಮುಸ್ಲಿಂ ಸಮಾವೇಶದಲ್ಲಿ ತಾನು ಭಾಗವಹಿಸುವುದಿಲ್ಲ ಎನ್ನುವ ಮೂಲಕ ಹಲವು ದಿನಗಳಿಂದ ನಡೆಯುತ್ತಿದ್ದ ಚರ್ಚೆಗೆ ಬ್ರೇಕ್ ಹಾಕಿದ್ದಾರೆ.

ಉಡುಪಿ ಪುರಭವನದಲ್ಲಿ ನಡೆಯುವ ಬಿಲ್ಲವ – ಮುಸ್ಲಿಂ ಸಮಾವೇಶದಲ್ಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಭಾಗವಹಿಸಲಿದ್ದಾರೆ ಎಂಬ ಬಗ್ಗೆ ಸಂದೇಶಗಳು ಹರಿದಾಡುತ್ತಿದ್ದವು. ಅಲ್ಲದೆ ಈ ಬಗ್ಗೆ ಸಾಕಷ್ಟು ಚರ್ಚೆಗಳು ಕೂಡ ನಡೆಯುತ್ತಿತ್ತು. ಆದರೆ ಇದೀಗ ಈ ವಿಚಾರಕ್ಕೆ ತೆರೆಬಿದ್ದಿದೆ. ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ತಾನು ಆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ. ಅಲ್ಲದೆ ಆ ಕಾರ್ಯಕ್ರಮಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.

ಈ ಹಿಂದೆಯೇ ನಿರ್ಧಾರವಾದಂತೆ ಜನವರಿ 11ರಂದು ತಾನು ಶಿವಮೊಗ್ಗ ಜಿಲ್ಲೆಯ ಪ್ರವಾಸದಲ್ಲಿದ್ದು, ಇಲಾಖಾ ಪ್ರಗತಿ ಪರಿಶೀಲನೆ ಮತ್ತು ಅರ್ಚಕರ‌ ಸಮಾವೇಶ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ ಎಂದು ಹೇಳಿದರು.

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

7 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

7 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago