Featured

ಉಡುಪಿ:  ಪುಷ್ಪಾನಂದ ಫೌಂಡೇಶನ್ ₹25 ಲಕ್ಷ ಪ್ರತಿಭಾ ಪುರಸ್ಕಾರ ವಿತರಣೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ:  ಪುಷ್ಪಾನಂದ ಫೌಂಡೇಶನ್ ₹25 ಲಕ್ಷ ಪ್ರತಿಭಾ ಪುರಸ್ಕಾರ ವಿತರಣೆ : ಯಶ್ಪಾಲ್ ಸುವರ್ಣ

ಉಡುಪಿ: ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ 2023-24ನೇ ಸಾಲಿನಲ್ಲಿ ಎಸ್. ಎಸ್. ಎಲ್. ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 85 ಕ್ಕಿಂತ ಹೆಚ್ಚು ಅಂಕಗಳಿಸಿದ 1450 ವಿದ್ಯಾರ್ಥಿಗಳಿಗೆ ₹25 ಲಕ್ಷ ವೆಚ್ಚದಲ್ಲಿ ಜನವರಿ 25 ಶನಿವಾರ ದಂದು ಪ್ರತಿಭಾ ಪುರಸ್ಕಾರ ವಿತರಣೆ ಮಾಡುವುದಾಗಿ ಪುಷ್ಪಾನಂದ ಫೌಂಡೇಶನ್ ಪ್ರವರ್ತಕರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಬ್ರಹ್ಮಾವರ ಭಾಗದ ವಿದ್ಯಾರ್ಥಿಗಳಿಗೆ ಶನಿವಾರ ಮಧ್ಯಾಹ್ನ 2.30ಕ್ಕೆ ಬ್ರಹ್ಮಾವರದ ಬಂಟರ ಭವನದ ಸಭಾಂಗಣ ಹಾಗೂ ಉಡುಪಿ ಭಾಗದ ವಿದ್ಯಾರ್ಥಿಗಳಿಗೆ ಮಧ್ಯಾಹ್ನ 4.00 ಗಂಟೆಗೆ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ.

ಶಾಸಕ ಯಶ್ ಪಾಲ್ ಸುವರ್ಣ ತಮ್ಮ ತಂದೆ ತಾಯಿಯ ಸ್ಮರಣಾರ್ಥವಾಗಿ ಸ್ಥಾಪಿಸಿದ ಪುಷ್ಪಾನಂದ ಫೌಂಡೇಶನ್ ಮೂಲಕ ಕಳೆದ ಹಲವು ವರ್ಷಗಳಿಂದ ಪ್ರತಿಭಾ ಪುರಸ್ಕಾರ ವಿತರಣೆ, ಮಕ್ಕಳ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆಯಂದು ಸಾವಿರಾರು ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಪೆನ್ ವಿತರಣೆ, ಯಕ್ಷ ಶಿಕ್ಷಣ ಟ್ರಸ್ಟ್ ಮೂಲಕ ಬಡ ವಿದ್ಯಾರ್ಥಿನಿಗೆ ಮನೆ ನಿರ್ಮಾಣ, ಶಾಲಾರಂಭದ ದಿನದಂದು ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಣೆ ಸಹಿತ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸೇವಾ ಕಾರ್ಯಗಳನ್ನು ನಡೆಸುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ – vishwanews24

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…

1 day ago

ಸಂಬಂಧಿಕರನ್ನು ಬೀಳ್ಕೊಡಲು ಬಂದ 12 ಮಂದಿ ವಂದೇ ಭಾರತ್‌ ರೈಲಲ್ಲಿ ಲಾಕ್‌ ; 36 ಸಾವಿರ ದಂಡ – vishwanews24

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…

1 day ago

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹ 20ರವರೆಗೆ ಕಡಿತ – vishwanews24

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…

1 day ago

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು -vishwanews24

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…

1 day ago

ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ – vishwanews24

ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ ಶಬರಿಮಲೆ: ಅಯ್ಯಪ್ಪ…

1 day ago

ಮಣಿಪಾಲದಲ್ಲಿ ಬೈಕ್ ಕಳವು ಪ್ರಕರಣ: ಆರೋಪಿ ಬಂಧನ – vishwanews24

ಮಣಿಪಾಲದಲ್ಲಿ ಬೈಕ್ ಕಳ್ಳತನ ಪ್ರಕರಣ: ಆರೋಪಿ ಬಂಧನ,  ದ್ವಿಚಕ್ರ ವಾಹನ ವಶಕ್ಕೆ ಉಡುಪಿ: ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ…

1 day ago