Featured

ಉಡುಪಿ : ಪುಷ್ಪಾನಂದ ಫೌಂಡೇಷನ್ ವತಿಯಿಂದ ಜಿಲ್ಲಾ ಮಟ್ಟದಲ್ಲಿ ವಿದ್ಯಾರ್ಥಿವೇತನ ವಿತರಣೆಗೆ ಚಿಂತನೆ : ಯಶ್‌ಪಾಲ್ ಸುವರ್ಣ – Vishwanews24

ಉಡುಪಿ : ಪುಷ್ಪಾನಂದ ಫೌಂಡೇಷನ್ ವತಿಯಿಂದ ಜಿಲ್ಲಾ ಮಟ್ಟದಲ್ಲಿ ವಿದ್ಯಾರ್ಥಿವೇತನ ವಿತರಣೆಗೆ ಚಿಂತನೆ : ಯಶ್‌ಪಾಲ್ ಸುವರ್ಣ

ಉಡುಪಿ: ವಿದ್ಯೆಗೆ ಪ್ರೋತ್ಸಾಹ ನೀಡುವುದರಿಂದ ಯುವಶಕ್ತಿಯನ್ನು ಬಲಿಷ್ಠಗೊಳಿಸಿ ಕ್ರೀಯಾಶೀಲ ಪೀಳಿಗೆಯನ್ನು ರೂಪಿಸಬಹುದಾಗಿದೆ. ಆ ನಿಟ್ಟಿನಲ್ಲಿ ಪುಷ್ಪಾನಂದ ಫೌಂಡೇಷನ್ ಜಾತಿ ಮತ ಬೇದವಿಲ್ಲದೆ ಕಾಪು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಒಂದೂವರೆ ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಯೋಜನೆ ಹಮ್ಮಿಕೊಂಡಿದ್ದು ಮುಂದಿನ ದಿನಗಳಲ್ಲಿ ಇದನ್ನು ಜಿಲ್ಲಾ ಮಟ್ಟಕ್ಕೂ ವಿಸ್ತರಿಸುವ ಉದ್ದೇಶವಿದೆ. ಇದರ ಪ್ರಯೋಜನ ಪಡೆದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ಮೂಲಕ ಫೌಂಡೇಷನ್ ಧ್ಯೇಯೋದ್ದೇಶದ ಈಡೇರಿಕೆಗೆ ಪ್ರಯತ್ನಿಸಬೇಕು ಎಂದು ಪುಷ್ಪಾನಂದ ಫೌಂಡೇಷನ್ ಉಡುಪಿ ಇದರ ಪ್ರವರ್ತಕ ಯಶ್‌ಪಾಲ್ ಸುವರ್ಣ ಹೇಳಿದರು.

ಕಟಪಾಡಿ ಜೆಸಿಐ ಭವನದಲ್ಲಿ ಭಾನುವಾರ ತಮ್ಮ ನೇತೃತ್ವದ ಪುಷ್ಪಾನಂದ ಫಂಡೇಷನ್ ಉಡುಪಿ ವತಿಯಿಂದ ಹಮ್ಮಿಕೊಂಡಿರುವ ವಿದ್ಯಾರ್ಥಿವೇತನ ವಿತರಣೆ ಯೋಜನೆಯ ಕಟಪಾಡಿ, ಕೋಟೆ ಮತ್ತು ಉದ್ಯಾವರ ಗ್ರಾ.ಪಂ ವ್ಯಾಪ್ತಿಯ 125 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.

ಇನ್ನಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ಸುಧಾಕರ್ ಡಿ. ಅಮೀನ್ ಪಾಂಗಾಳಗುಡ್ಡೆ, ಕಟಪಾಡಿ ವಿಜಯಾ ಇಂಡಸ್ಟಿçÃಸ್ ಮಾಲಕ ಕೆ ಸತ್ಯೇಂದ್ರ ಪೈ, ಕೋಟೆ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ನ್ಯಾಯವಾದಿ ಗಣೇಶ್ ಕುಮಾರ್ ಮಟ್ಟು, ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚದ ಅಧ್ಯಕ್ಷೆ ವೀಣಾ ಶೆಟ್ಟಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮೂರು ಗ್ರಾ.ಪಂ ವ್ಯಾಪ್ತಿಯ 125 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.

ತಾ.ಪಂ ಮಾಜಿ ಸದಸ್ಯ ರಾಜೇಶ್ ಅಂಬಾಡಿ, ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಜಿಲ್ಲಾ ಸಂಚಾಲಕ ವಿಜಯ ಕುಮಾರ್ ಉದ್ಯಾವರ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲ್‌ಕೃಷ್ಣ ರಾವ್ ಮಟ್ಟು, ಕಾಪು ಕ್ಷೇತ್ರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ, ಕಾಪು ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಸುಮಾ ಉದಯ ಶೆಟ್ಟಿ, ಉದ್ಯಾವರ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಸಾಲ್ಯಾನ್, ಉದ್ಯಾವರ ಗ್ರಾ.ಪಂ ಸದಸ್ಯ ಜಿತೇಂದ್ರ ಶೆಟ್ಟಿ ಉದ್ಯಾವರ ಉಪಸ್ಥಿತರಿದ್ದರು.

ಯಶ್‌ಪಾಲ್ ಸುವರ್ಣ ಅವರ ಆಪ್ತ ಕಾರ್ಯದರ್ಶಿ ಯತೀಶ್ ಕೋಟ್ಯಾನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

5 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

6 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

7 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

7 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

7 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

8 hours ago