ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ತೈಲ ಬೆಲೆ ಏರಿಕೆ ವಿರೋಧಿಸಿ ನಡೆಯುತ್ತಿರುವ ಸರಣಿ ಪ್ರತಿಭಟನೆಯ ಪ್ರಯುಕ್ತ ನಗರದ ಸಿಟಿ ಬಸ್ ನಿಲ್ದಾಣದ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಮಾತನಾಡಿ ಧರ್ಮದ ಹೆಸರಿನಲ್ಲಿ ಬಿಜೆಪಿ ಪಕ್ಷವು ಜನರನ್ನು ವಿಭಜಿಸಿ ಕೆಲವರನ್ನು ಅಂಧ ಭಕ್ತರನ್ನಾಗಿಸಿ ಪೆಟ್ರೋಲ್ ಡಿಸೇಲ್ ಅಡುಗೆ ಅನಿಲ ದರ ಗಗನಕ್ಕೆರಿಸಿದರೂ ಭಕ್ತರು ಇನ್ನೂ ಮೋದಿ ಭಜನೆಯಲ್ಲಿದ್ದಾರೆ. ಪೆಟ್ರೋಲ್ ಮೂಲ ಬೆಲೆ 35 ರೂ ಉಳಿದ ರೂ 65 ಕೇಂದ್ರ ಮತ್ತು ರಾಜ್ಯ ಸರಕಾರಗಳ ತೆರಿಗೆಯನ್ನು ಜನರ ಮೇಲೆ ಹೇರುತ್ತಿದೆ. ಎಂದರು.
ಉಡುಪಿ ನಗರಸಭೆಯ ಪ್ರತಿಪಕ್ಷ ನಾಯಕ ರಮೇಶ್ ಕಾಂಚನ್ ಮಾತನಾಡಿ ವಿದ್ಯಾರ್ಥಿಗಳಿಗೆ ಶಾಲೆ, ಕಾಲೇಜುಗಳಲ್ಲಿ ಫೀಸ್ ಕಟ್ಟಲು ಒತ್ತಾಯಿಸುತ್ತಿದ್ದಾರೆ ಈ ಬಗ್ಗೆ ರಾಜ್ಯ ಸರಕಾರ ಸೂಕ್ತ ಮಾರ್ಗದರ್ಶನ ನೀಡಬೇಕು. ಅಧಿಕಾರಕ್ಕೆ ಬರುವ ಮುನ್ನ ಬಡವ ಶ್ರೀಮಂತರೆನ್ನುವ ಭೇಧಭಾವ ಮಾಡದೇ ಆಡಳಿತ ನಡೆಸುವ ಭರವಸೆ ನೀಡಿದ್ದ ಬಿಜೆಪಿ ಈಗ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ, ದಿನಸಿ ಸಾಮಾಗ್ರಿಗಳ ಸತತ ಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ವಂಚಿಸಿ ವಚನ ಭ್ರಷ್ಟವಾಗಿದೆ ಎಂದರು.
ಪ್ರತಿಭಟನೆಯಲ್ಲಿ ಯತೀಶ್ ಕರ್ಕೇರಾ, ಹಮದ್, ಶರತ್ ಶೆಟ್ಟಿ, ತಾರಾನಾಥ ಸುವರ್ಣ, ಶೇಖರ ಶೆಟ್ಟಿ, ಸುಹಾಸ್ ಶೇಟ್, ನವೀನ್ ಸುವರ್ಣ ಬನ್ನಂಜೆ, ಪ್ರಜ್ವಲ್ ಅಂಚನ್, ಪ್ರದೀಪ್ ಅಂಚನ್, ಗಣೇಶ್ ದೇವಾಡಿಗ, ಸಾಯಿರಾಜ್ ಕೋಟ್ಯಾನ್, ಪ್ರಶಾಂತ್ ಶಿರಿಬೀಡು ಹಾಗೂ ಇತರರು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…