Featured

ಉಡುಪಿ: ಪೆರಾರ ಮುಂಡಬೆಟ್ಟುಗುತ್ತು ಅಕ್ಷಯ ಆರ್.ಶೆಟ್ಟಿ ಅವರ “ದೆಂಗ” ತುಳು ಕಾದಂಬರಿಗೆ ಪಣಿಯಾಡಿ ಪ್ರಶಸ್ತಿ-2021

ಉಡುಪಿ: ಪೆರಾರ ಮುಂಡಬೆಟ್ಟುಗುತ್ತು ಅಕ್ಷಯ ಆರ್.ಶೆಟ್ಟಿ ಅವರ “ದೆಂಗ” ತುಳು ಕಾದಂಬರಿಗೆ ಪಣಿಯಾಡಿ ಪ್ರಶಸ್ತಿ-2021

ಉಡುಪಿ: ತುಳುಕೂಟ ಉಡುಪಿ (ರಿ.) ವತಿಯಿಂದ ನೀಡಲಾಗುವ ೨೦೨೦-೨೦೨೧ನೇ ಸಾಲಿನ ಪ್ರತಿಷ್ಠಿತ ಎಸ್.ಯು.ಪಣಿಯಾಡಿ ಸ್ಮಾರಕ ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿಗೆ ಮಂಗಳೂರು ಸಹ್ಯಾದ್ರಿ ಇಂಜಿನಿಯರ್ ಹಾಗೂ ಮ್ಯಾನೇಜ್‌ಮೆಂಟ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ, ಪೆರಾರ ಮುಂಡಬೆಟ್ಟುಗುತ್ತು ಅಕ್ಷಯ ಆರ್.ಶೆಟ್ಟಿ ಅವರ ದೆಂಗ ಕಾದಂಬರಿ ಆಯ್ಕೆಯಾಗಿದೆ.

ತುಳು ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಹಿರಿಯ ಸಾಹಿತಿ ದಿ.ಎಸ್.ಯು.ಪಣಿಯಾಡಿ ಅವರು ಸ್ವಾತಂತ್ರö್ಯ ಹೋರಾಟಗಾರ ರಾಗಿಯೂ ಗುರುತಿಸಿಕೊಂಡವರು. ಇವರ ಸವಿನೆನಪಿಗಾಗಿ ಉಡುಪಿ ತುಳುಕೂಟವು ಕಳೆದ ೨೭ ವರ್ಷಗಳಿಂದ ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ, ಕೃತಿ ಬಿಡುಗಡೆ ಸಮಾರಂಭವನ್ನು ಯಶಸ್ವಿಯಾಗಿ ಆಯೋಜಿಸುತ್ತಾ ಬಂದಿದೆ. ಈ ಮೂಲಕ ತುಳು ಸಾಹಿತ್ಯ ಕ್ಷೇತ್ರಕ್ಕೆ ಅನೇಕ ಯುವ ಕಾದಂಬರಿಕಾರರÀನ್ನು ಪರಿಚಯಿಸಲಾಗಿದೆ. ಮಾತ್ರವಲ್ಲದೆ ಪ್ರಶಸ್ತಿ ವಿಜೇತ ೩೩ ತುಳು ಕಾದಂಬರಿಗಳನ್ನು ಉಡುಪಿ ತುಳುಕೂಟ ಪ್ರಕಟಿಸುವ ಮೂಲಕ ತುಳು ಭಾಷಾ ಕೃತಿಗಳ ಬೆಳೆವಣಿಗೆಗೆ ವಿಶೇಷ ಕೊಡುಗೆ ನೀಡಿದೆೆ.

ತುಳುಕೂಟ ಉಡುಪಿ (ರಿ.) ಇದರ ಪಣಿಯಾಡಿ ಕಾದಂಬರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನೂತನ ದೆಂಗ ತುಳು ಕಾದಂಬರಿ ಕೃತಿ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಈ ಬಾರಿ ಕಾದಂಬರಿ ಸ್ಪರ್ಧೆಗೆ ವಿವಿದೆಢೆಗಳಿಂದ ಒಟ್ಟು ಏಳು ಹಸ್ತಪ್ರತಿಗಳು ಬಂದಿದ್ದು, ಸ್ಪರ್ಧೆಯ ತೀರ್ಪುಗಾರರಾಗಿ ವಿಮರ್ಶಕ ಪ್ರೊ. ಮುರಳೀಧರ ಉಪಾಧ್ಯ ಹಿರಿಯಡ್ಕ, ಜಾನಕಿ ಬ್ರಹ್ಮಾವರ, ಸಕು ಪಾಂಗಾಳ, ಉಪನ್ಯಾಸಕಿ ಡಾ.ನಿಕೇತನ ಸಹಕರಿಸಿದ್ದರು ಎಂದು ತುಳುಕೂಟ ಉಡುಪಿ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಕಾದಂಬರಿ ಪ್ರಶಸ್ತಿ ಸಂಚಾಲಕಿ ತಾರಾ ಉಮೇಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಗಂಗಾಧರ್ ಕಿದಿಯೂರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

2 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

8 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

10 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

10 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

11 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

11 hours ago