Featured

ಉಡುಪಿ: ಪೇಜಾವರ ಶ್ರೀಗಳನ್ನು ಟೀಕಿಸುವಂತ ಮಾತು ಹಂಸಲೇಖ ಅವರ ಬಾಯಿಯಿಂದ ಬರಬಾರದಿತ್ತು : ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ – Vishwanews24

ಉಡುಪಿ: ಪೇಜಾವರ ಶ್ರೀಗಳನ್ನು ಟೀಕಿಸುವಂತ ಮಾತು ಹಂಸಲೇಖ ಅವರ ಬಾಯಿಯಿಂದ ಬರಬಾರದಿತ್ತು : ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಪೇಜಾವರ ಶ್ರೀ ಜನರ ಹೃದಯದಲ್ಲಿ ಯಾವ ಕೃಷ್ಣನನ್ನು ಕಂಡಿದ್ದರೋ ಆ ಕೃಷ್ಣನೇ ಅದಕ್ಕೆ ಬೇಕಾದ ಪ್ರತಿಕಾರ ಮಾಡುತ್ತಾನೆ ..

ಉಡುಪಿ: ಪೇಜಾವರ ಶ್ರೀಗಳನ್ನು ಟೀಕಿಸುವಂತ ಮಾತು ಹಂಸಲೇಖ ಅವರ ಬಾಯಿಯಿಂದ ಬರಬಾರದಿತ್ತು ಸಮಾಜದ ಎಲ್ಲರ ಉದ್ಧಾರವನ್ನು ವಿಶ್ವೇಶತೀರ್ಥರು ಬಯಸಿದ್ದರು ಗುರುಗಳು ಜನರ ಹೃದಯದಲ್ಲಿ ಯಾವ ಕೃಷ್ಣನನ್ನು ಕಂಡಿದ್ದರೋ ಆ ಕೃಷ್ಣನೇ ಅದಕ್ಕೆ ಬೇಕಾದ ಪ್ರತಿಕಾರ ಮಾಡುತ್ತಾನೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಅವರು ಸೋಮವಾರ ಉಡುಪಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಪದ್ಮವಿಭೂಷಣ ಪ್ರಶಸ್ತಿ ಬಂದಿರುವುದು ನನ್ನ ಗುರುಗಳಿಗೆ ಹಾಗಾಗಿ ಹಂಸಲೇಖ ಅವರು ನನ್ನ ಗುರುಗಳನ್ನೇ ಟೀಕಿಸಿರಬೇಕು. ಇಂತಹ ಮಾತು ಹಂಸಲೇಖ ಬಾಯಿಂದ ಬರಬಾರದಿತ್ತು ಸಮಾಜ ಅವರನ್ನು ಎತ್ತರದಲ್ಲಿ ಇರಿಸಿ ಗೌರವಿಸುತ್ತದೆ. ಪ್ರಚಾರಕ್ಕೋಸ್ಕರ ಸಾಕಷ್ಟು ಮಂದಿ ಹೀಗೆ ಮಾಡುತ್ತಾರೆ ಹಂಸಲೇಖ ಅವರಿಗೆ ಇದರಿಂದ ಪ್ರಚಾರ ಬೇಕಾಗಿರಲಿಲ್ಲ ಎಂದರು.

ಶ್ರೀ ಕೃಷ್ಣನಿಗೆ ಅಗ್ರಪೂಜೆ ನೀಡುವಾಗ ಶಿಶುಪಾಲನೂ ಇದೇ ರೀತಿ ವಿರೋಧಿಸಿದ್ದ ಆದರೆ ಶಿಶುಪಾಲನಿಗೆ ಕೃಷ್ಣನೇ ತಕ್ಕಶಾಸ್ತಿ ಮಾಡಿದ್ದ. ನನ್ನ ಗುರುಗಳು ಸಮಾಜದ ಎಲ್ಲರ ಹೃದಯದಲ್ಲಿ ಕಷ್ಣನನ್ನು ಕಂಡವರು ಆದ್ದರಿಂದಲೇ ಅವರು ದಲಿತರ ಕೇರಿಗೂ ಹೋಗುತ್ತಿದ್ದರು. ನೆರೆಹಾವಳಿ ಭೂಕಂಪ ಆದಾಗಲೂ ಭೇಟಿ ನೀಡುತ್ತಿದ್ದರು.

ಸಮಾಜದ ಎಲ್ಲರ ಉದ್ಧಾರವನ್ನು ವಿಶ್ವೇಶತೀರ್ಥರು ಬಯಸಿದ್ದರು ಗುರುಗಳು ಜನರ ಹೃದಯದಲ್ಲಿ ಯಾವ ಕೃಷ್ಣನನ್ನು ಕಂಡಿದ್ದರೋ ಆ ಕೃಷ್ಣನೇ ಅದಕ್ಕೆ ಬೇಕಾದ ಪ್ರತಿಕಾರ ಮಾಡುತ್ತಾನೆ ಎಂದರು.

ನಮ್ಮ ಉದ್ದೇಶ ಪ್ರಾಮಾಣಿಕವಾಗಿದೆ, ಯಾರೋ ಏನೋ ಅಂದ ಮಾತ್ರಕ್ಕೆ ನಮ್ಮ ಕೆಲಸ ನಿಲ್ಲಿಸುವುದಿಲ್ಲ ಯಾರ ಹೊಗಳಿಕೆಗೂ ನಾವು ಈ ಕೆಲಸವನ್ನು ಮಾಡಿದ್ದಲ್ಲ. ದಲಿತರ ಜೊತೆ ನಾವು ಇದ್ದೇವೆ, ದಲಿತರು ನಮ್ಮಿಂದ ಹೊರತಲ್ಲ ಈ ಐಕ್ಯ ಸಂದೇಶ ನೀಡುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ. ಗುರುಗಳ ಅಭಿಮಾನದಿಂದ ಯಾರಾದರೂ ಪ್ರತಿಭಟಿಸಿದರೆ ಅದು ಅವರವರ ವೈಯಕ್ತಿಕ ವಿಚಾರ ಆದರೆ ನಾವಂತೂ ಯಾವುದೇ ಪ್ರತಿಭಟನೆ ನಡೆಸುವುದಿಲ್ಲ ಎಂದರು.

ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಂಸಲೇಖ ಅವರು ಪೇಜಾವರ ಸ್ವಾಮಿಗಳು ದಲಿತರ ಮನೆಗೆ ವಾಸ್ತವ್ಯಕ್ಕೆ ಹೋಗಿದ್ದಾರೆ ಅಂತ ಸ್ಟೇಟ್‌ಮೆಂಟ್ ಬಂದಿದೆ. ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋಗಿ ಅಲ್ಲಿ ಕುಳಿತು ಕೊಳ್ಳಬಹುದಷ್ಟೇ, ಅವರು ಕೋಳಿ ಕೊಟ್ಟರೆ ತಿನ್ನೋಕೆ ಆಗುತ್ತದೆಯೇ..? ಕೋಳಿ ಬೇಡ, ಕುರಿ ರಕ್ತದ ಫ್ರೈ ಮಾಡಿಕೊಟ್ಟರೆ ತಿಂತಾರಾ..? ಲಿವರ್ ಫ್ರೈ ತಿಂತಾರಾ, ಆಗತ್ತಾ..? ಅಂದರೆ, ದಲಿತರ ಮನೆಗೆ ಬಲಿತರು ಹೋಗೋದು ಏನ್ ದೊಡ್ಡ ವಿಷ್ಯಾ ಅಂತ ನಂಗ್ ಅನ್ನಿಸ್ತು ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಅಂತ ಶುರು ಮಾಡಿದ್ರು. ಈಗ ಎಲ್ಲರೂ ಗ್ರಾಮ ವಾಸ್ತವ್ಯ ಶುರು ಮಾಡಿದ್ದಾರೆ..’ ಎಂದು ಹೇಳಿದ್ದರು.

‘ಬಿಳಿಗಿರಿ ರಂಗಯ್ಯ ಸೋಲಿಗರ ಮನೆಯ ಹೆಣ್ಣಿನೊಂದಿಗೆ ರಮಿಸಿದರೆ, ಅದರಲ್ಲಿ ಏನ್ ದೊಡ್ಡ ವಿಷ್ಯ ಇದೆ? ಅದೇ ಸೋಲಿಗರ ಹೆಣ್ಣು ಮಗಳನ್ನು ಕರೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿ ಇಟ್ಟು ಗೌರವಿಸಿದ್ದರೆ, ಅದು ಬಿಳಿಗಿರಿ ರಂಗಯ್ಯನ ತಾಕತ್ತು. ಸೂರ್ಯ ಉದಯಿಸುವುದಕ್ಕಿಂತ ಮುಂಚೆ ಸೋಲಿಗರ ಮನೆಗೆ ಬಂದು ಆ ಹೆಣ್ಣು ಮಗಳೊಂದಿಗೆ ಬಿಳಿಗಿರಿ ರಂಗಯ್ಯ ಸಂಸಾರ ನಡೆಸಿ ಬೆಳಕು ಹರಿಯುವುದರೊಳಗೆ ಹೋಗಿ ಕಲ್ಲಾಗುತ್ತಾನಂತೆ! ಅದೇನು ದೊಡ್ಡ ವಿಷಯ, ಅದೊಂದು ನಾಟಕ, ಬೂಟಾಟಿಕೆ. ದಲಿತರ ಮನೆಗೆ ಬಲಿತರು ಹೋಗುವುದು ಅದೇನು ದೊಡ್ಡ ವಿಷಯವೇ..? ದಲಿತರನ್ನು ಬಲಿತರು ತಮ್ಮ ಮನೆಗಳಿಗೆ ಕರೆದುಕೊಂಡು ಹೋಗಬೇಕು. ಅವರ ಮನೆಯಲ್ಲಿ ಊಟ ಹಾಕಬೇಕು, ದಲಿತರ ಮುಟ್ಟಿದ ಲೋಟಗಳನ್ನು ನಾವು ತೊಳೆಯುತ್ತೀವಿ ಎಂದು ಬಲಿತರು ಹೇಳಬೇಕು’ ಎಂದು ಹಂಸಲೇಖ ಹೇಳಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago