Featured

ಉಡುಪಿ : ಪೇಜಾವರ ಶ್ರೀಗಳ ಅವಹೇಳನ ಸಹಿಸುವುದಿಲ್ಲ – ಪೆರ್ಣಂಕಿಲ ಶ್ರೀಶ ನಾಯಕ್ – vishwanews24

ಉಡುಪಿ : ಪೇಜಾವರ ಶ್ರೀಗಳ ಅವಹೇಳನ ಸಹಿಸುವುದಿಲ್ಲ – ಪೆರ್ಣಂಕಿಲ ಶ್ರೀಶ ನಾಯಕ್

ಅವಹೇಳನ ಮಾಡಿದವರ ಮೇಲೆ ಪೊಲೀಸರು ಸುಮುಟೋ ಕೇಸು ದಾಖಲಿಸಿ

ಉಡುಪಿ : ವಿಶ್ವಾದ್ಯಂತ ಕೋಟ್ಯಾಂತರ ಭಕ್ತಾಭಿಮಾನಿಗಳನ್ನು ಹೊಂದಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ, ತೀರಾ ಕೆಳಮಟ್ಟದಲ್ಲಿ ಅವಹೇಳನ ಮಾಡುವ ಘಟನೆಗಳು ನಡೆಯುತ್ತಿರುವ ಅತ್ಯಂತ ಖಂಡನೀಯವಾಗಿದೆ.

ಉಡುಪಿಯ ಅಷ್ಟ ಮಠಗಳ ಯತಿಗಳ ಪರಂಪರೆಯಲ್ಲಿ ಯಾರೂ ಸಂವಿಧಾನದ ವಿರುದ್ಧ ಮಾತನಾಡಿದ ಉದಾಹರಣೆಗಳಿಲ್ಲ, ಅದರಲ್ಲೂ ಪೇಜಾವರ ಮಠದ ಹಿರಿಯರಾಗಿದ್ದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರಂತೂ ಸಂವಿಧಾನದ ಮೇಲೆ ವಿಶೇಷ ಗೌರವವನ್ನು ಹೊಂದಿದ್ದರು, ಕಿರಿಯ ಶ್ರೀಗಳು ಕೂಡ ಅದನ್ನೆ ಪಾಲಿಸುತಿದ್ದಾರೆ ಹಾಗೂ ಇತರರೂ ಪಾಲಿಸುವಂತೆ ಹೇಳುತಿದ್ದರು.

ಅವರ ಶಿಷ್ಯೋತ್ತಮರಾದ ಶ್ರೀ ವಿಶ್ವಪ್ರಸನ್ನ ತೀರ್ಥರೂ ಈ ದೇಶದ ಸಂವಿಧಾನಕ್ಕನುಗುಣವಾಗಿ, ಸಂವಿಧಾನದ ಆಶಯದಂತೆ ಸಮಾಜೋದ್ಧಾರಕ್ಕಾಗಿ ಶ್ರಮಿಸುತಿದ್ದಾರೆ. ಆಯೋಧ್ಯೆ ಶ್ರೀ ರಾಮಮಂದಿರ ನಿರ್ಮಾಣದಲ್ಲಿನ ಶ್ರಮ, ಅಸಂಖ್ಯ ಗೋವುಗಳ ಸೇವೆ, ದಲಿತರಿಗೆ ಭಕ್ತಿ ಮಾರ್ಗದರ್ಶನ, ಅಶಕ್ತರಿಗೆ ಮನೆ ನಿರ್ಮಾಣ, ನಕ್ಸಲ್ ಪೀಡಿತ ಪ್ರದೇಶಗಳ ಜನರಿಗೆ ಸಾಂತ್ವಾನ, ಮಠಮಂದಿರಗಳ ಜೀರ್ಣೋದ್ಧಾರ ಇತ್ಯಾದಿ ಸತತ ಮತ್ತು ನಿರಂತರ ಯಶಸ್ವಿ ಸಾಧನೆಗಳನ್ನು ಸಹಿಸದ ಕೆಲವು ಫಡಪೋಶಿಗಳು ವಿಜಯಪುರದಲ್ಲಿ ಶ್ರೀಗಳ ವಿರುದ್ಧ ತೀರಾ ಅಸಂವಿಧಾನಿಕ, ಅಸಂಸದೀಯ, ಕಾನೂನು ಉಲ್ಲಂಘಿತ ಪದಗಳನ್ನು ಬಳಸಿ ಮಾತನಾಡಿರುವುದನ್ನು ಅವರ ಭಕ್ತಕೋಟಿ ಎಂದೂ ಸಹಿಸುವುದಿಲ್ಲ.

ಮನುಷ್ಯನ ಘನತೆಯನ್ನೇ ಅವಹೇಳನ ಮಾಡುವ ಇಂತಹ ಪದಗಳ ಬಳಕೆಯನ್ನು ಡಾ.ಬಿ.ಆರ್.ಅಂಬೇಡ್ಕರ್ ಇದ್ದಿದ್ದರೇ ಉಗ್ರವಾಗಿ ವಿರೋಧಿಸುತಿದ್ದರು, ಆದರೇ ಅವರ ಅನುಯಾಯಿಗಳು ಎಂದು ಹೇಳಿಕೊಳ್ಳುವವರು ಆಡಿರುವ ಈ ಅಸಂವಿಧಾನಿಕ ಪದಗಳು ಈ ದೇಶದ ಸಂವಿಧಾನವನ್ನು ರೂಪಿಸಿದ ಅಂಬೇಡ್ಕರ್ ಅವರಿಗೆ ಮಾಡಿರುವ ಘೋರ ಅವಮಾನವಲ್ಲದೇ ಬೇರೆನೂ ಅಲ್ಲ.

ಪೇಜಾವರ ಶ್ರೀಗಳು ತಾವು ಸಂವಿಧಾನದ ವಿರುದ್ಧ ಮಾತನಾಡಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ, ಆದರೂ ತುಚ್ಛವಾಗಿ ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸಮಸ್ತ ಹಿಂದೂ ಸಮಾಜ ಸಹಿಸುವುದಿಲ್ಲ.

ಆದ್ದರಿಂದ ಇನ್ನು ಮುಂದೆ ಪೇಜಾವರ ಶ್ರೀಗಳ ವಿರುದ್ಧವಾಗಲೀ ಹಿಂದೂ ಧರ್ಮದ ವಿರುದ್ಧವಾಗಲಿ ಸುಳ್ಳು ಆರೋಪಗಳನ್ನು ಹೊರಿಸುವುದಾಗಲಿ ಅವಹೇಳನ ಮಾಡುವುದಾಗಿ ಮಾಡಿದರೇ ಶ್ರೀಗಳ ಅಭಿಮಾನಿಗಳು ಸುಮ್ಮನಿರುವುದಿಲ್ಲ .

ಹಿಂದೂ ನಾಯಕ ಮೇಲೆ ಇಲ್ಲಸಲ್ಲದ ಕಾರಣಗಳಿಗೆ ಸುಮೋಟೋ ಕೇಸು ಹಾಕುವ ರಾಜ್ಯ ಸರ್ಕಾರ, ಪೊಲೀಸ್ ಇಲಾಖೆ, ಉಡುಪಿ ಎಸ್ಪಿ ಅವರು, ಪೇಜಾವರ ಶ್ರೀಗಳ ವಿರುದ್ಧ ಸಾರ್ವಜನಿಕವಾಗಿ ಶಾಂತಿಭಂಗವಾಗುವ ರೀತಿಯಲ್ಲಿ ಬೆದರಿಕೆ ರೀತಿಯಲ್ಲಿ ಮಾತುಗಳನ್ನಾಡುವವರ ಮೇಲೆಯೂ ಸುಮೋಟೋ ಕೇಸು ದಾಖಲಿಸಿ ತಮ್ಮ ಸಂವಿಧಾನಬದ್ದತೆಯನ್ನು ತೋರಿಸಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago