ಚಿಕ್ಕಬಳ್ಳಾಪುರ: ಉಡುಪಿ ಪೇಜಾವರ ಶ್ರೀಗಳಿಗೆ ಭದ್ರತೆ ನೀಡುತ್ತಿದ್ದ ಬೆಂಗಾವಲು ವಾಹನ ಮತ್ತು ಇಂಡಿಗೋ ಕಾರಿನ ನಡುವೆ ಡಿಕ್ಕಿ ಸಂಭವಿಸಿ ದಂಪತಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕರಪನಹಳ್ಳಿ ಗೇಟ್ ಬಳಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ರಾಮಕೃಷ್ಣಯ್ಯ(75) ಸರ್ವಲೋಚನಾ(70) ಮೃತ ದಂಪತಿ.
ನಾಮಕರಣ ಕಾರ್ಯಕ್ರಮದ ನಿಮಿತ್ತ ಜ್ಯುವೆಲ್ಲರಿ ಶಾಪ್ ಮಾಲೀಕರಾದ ರಾಮಕೃಷ್ಣಯ್ಯ ಹಾಗೂ ಅವರ ಕುಟುಂಬ ಚಿಂತಾಮಣಿ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ. ಅಲ್ಲದೆ ಅಪಘಾತದಲ್ಲಿ ರಾಮಕೃಷ್ಣಯ್ಯ ಅವರ ಸೊಸೆ ನಳಿನಿ(55) ಗಂಭೀರವಾಗಿ ಗಾಯಗೊಂಡಿದ್ದು ಕಾರು ಚಾಲಕ ನಾಗೇಶ್ ಎಂಬವರ ಕಾಲುಗಳಿಗೂ ಗಂಭೀರ ಗಾಯಗಳಾಗಿವೆ.
ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…