Featured

ಉಡುಪಿ ಪೇಜಾವರ ಶ್ರೀಗಳ ಬೆಂಗಾವಲು ವಾಹನ ಹಾಗೂ ಇಂಡಿಗೋ ಕಾರಿನ ನಡುವೆ ಡಿಕ್ಕಿ : ದಂಪತಿಗಳು ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಉಡುಪಿ ಪೇಜಾವರ ಶ್ರೀಗಳಿಗೆ ಭದ್ರತೆ ನೀಡುತ್ತಿದ್ದ ಬೆಂಗಾವಲು ವಾಹನ ಮತ್ತು ಇಂಡಿಗೋ ಕಾರಿನ ನಡುವೆ ಡಿಕ್ಕಿ ಸಂಭವಿಸಿ ದಂಪತಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕರಪನಹಳ್ಳಿ ಗೇಟ್ ಬಳಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ರಾಮಕೃಷ್ಣಯ್ಯ(75) ಸರ್ವಲೋಚನಾ(70) ಮೃತ ದಂಪತಿ.ಪೇಜಾವರ ಶ್ರೀಗಳು ಚಿಂತಾಮಣಿ ತಾಲೂಕಿನ ಕೋನಕುಂಟ್ಲು ಗ್ರಾಮದಲ್ಲಿ ನಡೆಯುತ್ತಿರುವ ಕಾನ್ವ ಸಮ್ಮೇಳನದಲ್ಲಿ ಭಾಗವಹಿಸಿಲು ಬೆಂಗಳೂರಿನಿಂದ ಚಿಂತಾಮಣಿ ಕಡೆಗೆ ಆಗಮಿಸುತ್ತಿದ್ದರು. ದಂಪತಿಯಿಂದ ಕಾರು ಬಲ ಭಾಗದಲ್ಲಿ ಬಂದಿದ್ದ ಕಾರಣ ಈ ಅಪಘಾತ ಸಂಭವಿಸಿದೆ.

ನಾಮಕರಣ‌ ಕಾರ್ಯಕ್ರಮದ ನಿಮಿತ್ತ ಜ್ಯುವೆಲ್ಲರಿ ಶಾಪ್ ಮಾಲೀಕರಾದ ರಾಮಕೃಷ್ಣಯ್ಯ ಹಾಗೂ ಅವರ ಕುಟುಂಬ ಚಿಂತಾಮಣಿ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ. ಅಲ್ಲದೆ ಅಪಘಾತದಲ್ಲಿ ರಾಮಕೃಷ್ಣಯ್ಯ ಅವರ ಸೊಸೆ ನಳಿನಿ(55) ಗಂಭೀರವಾಗಿ ಗಾಯಗೊಂಡಿದ್ದು ಕಾರು ಚಾಲಕ‌ ನಾಗೇಶ್ ಎಂಬವರ ಕಾಲುಗಳಿಗೂ ಗಂಭೀರ ಗಾಯಗಳಾಗಿವೆ.

ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago