ಉಡುಪಿ : ನಿನ್ನೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಿಡಿಗೇಡಿಗಳು ಮನೆಗಳ ಮೇಲೆ ಕಲ್ಲುತೂರಾಟ ಹಾಗೂ ಪೊಲೀಸರು ಹಾಗೂ ಜನರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಉಡುಪಿಯ ವಿಶ್ವಪ್ರಸನ್ನತೀರ್ಥ ಸ್ವಾಮಿಗಳು ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಬಾರಿ ಅಶಾಂತಿ ಸೃಷ್ಟಿ ಆದರೆ ಅದಕ್ಕೆ ಕೊನೆಯೇ ಇರುವುದಿಲ್ಲ. ಅದರಿಂದ ಕಾನೂನನ್ನು ಯಾರು ಕೈಗೆತ್ತಿಕೊಳ್ಳಬಾರದು. ಪೊಲೀಸರ ಮೇಲೆ ಹಲ್ಲೆಯಾದರೂ ಸರ್ಕಾರ ಏನು ಮಾಡುತ್ತಿದೆ? ಪೊಲೀಸರ ಮೇಲೆ ಕಲ್ಲೆಸೆಸುತ್ತಾರೆ ಅಂದರೆ ಭಯ ಇಲ್ಲ ಅಂತಾಯ್ತು ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿನ್ನೆ ಶಿವಮೊಗ್ಗದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 60 ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮುಂಜಾಗ್ರತಾ ಕ್ರಮವಾಗಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.
ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ ವೇಳೆ ದುಷ್ಕರ್ಮಿಗಳಿಂದ ಕಲ್ಲೆಸೆತ ಉಂಟಾಗಿದ್ದು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಗುಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮನಿ ಆದೇಶಿಸಿದ್ದಾರೆ. ಯಾರೋ ಕಿಡಿಗೇಡಿಗಳು ಮನೆಗಳು ಮತ್ತು ಪೊಲಿಸರ ಮೇಲೆ ಕಲ್ಲು ಎಸೆದಿದ್ದರು.ಇದರಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…