ಉಡುಪಿ

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ – vishwanews24

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ

ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ ನಡೆದ ವಿದೇಶಿ ಮಹಿಳೆಯ ಅತ್ಯಾಚಾರ ಪ್ರಕರಣದ ಹಿನ್ನಲೆಯಲ್ಲಿ, ಉಡುಪಿ ಜಿಲ್ಲೆಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು 32 ಅಕ್ರಮ ಹೋಂಸ್ಟೇಗಳನ್ನು ಪತ್ತೆ ಹಚ್ಚಿದ್ದಾರೆ.

ಪೊಲೀಸ್ ಮಹಾ ನಿರೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರ (ಕಾನೂನು ಸುವ್ಯವಸ್ಥೆ) ನಿರ್ದೇಶನದಂತೆ ನಡೆದ ಈ ಕಾರ್ಯಾಚರಣೆಯಲ್ಲಿ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 3, ಮಲ್ಪೆ ಠಾಣೆಯಲ್ಲಿ 15, ಮಣಿಪಾಲದಲ್ಲಿ 2, ಕೋಟ ಠಾಣೆಯಲ್ಲಿ 7 ಹಾಗೂ ಪಡುಬಿದ್ರೆ ಠಾಣಾ ವ್ಯಾಪ್ತಿಯಲ್ಲಿ 5 ಅಕ್ರಮ ಹೋಂಸ್ಟೇಗಳು ಪತ್ತೆಯಾಗಿವೆ.

ಇದನ್ನೂ ಓದಿ :

 

ಪತ್ತೆಯಾದ ಹೋಂಸ್ಟೇಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಗೆ ವರದಿ ಸಲ್ಲಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಇದೇ ವೇಳೆ ಹೋಂಸ್ಟೇ ಹಾಗೂ ರೆಸಾರ್ಟ್ ಮಾಲಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಪರವಾನಿಗೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಎಚ್ಚರಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಪರವಾನಿಗೆ ರದ್ದುಪಡಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ವಿದೇಶಿ ಪ್ರವಾಸಿಗರು ಆಗಮಿಸಿದಲ್ಲಿ, ಅವರ ವಿವರಗಳನ್ನು Form-C ಮೂಲಕ FRRO ಆನ್‌ಲೈನ್‌ನಲ್ಲಿ ಅಪ್ಲೋಡ್ ಮಾಡುವುದು ಹಾಗೂ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ. ಜೊತೆಗೆ, ಹೋಂಸ್ಟೇ/ರೆಸಾರ್ಟ್‌ಗಳಲ್ಲಿ ವಾಸಿಸುವ ವಿದೇಶಿಯರ ಭದ್ರತೆ ಕುರಿತು ಹೆಚ್ಚಿನ ನಿಗಾವಹಿಸಲು ಸೂಚಿಸಲಾಗಿದೆ.

ಇದನ್ನೂ ಓದಿ :

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

15 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

16 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

16 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

16 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

20 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

20 hours ago