Featured

ಉಡುಪಿ : ಪೊಲೀಸ್ ಕಲ್ಯಾಣ ಮತ್ತು ಧ್ವಜ ದಿನಾಚರಣೆ -Vishwanews24

ಉಡುಪಿ : ಪೊಲೀಸ್ ಕಲ್ಯಾಣ ಮತ್ತು ಧ್ವಜ ದಿನಾಚರಣೆ -Vishwanews24

ಉಡುಪಿ: ನಿವೃತ್ತ ಪೊಲೀಸರಿಗೆ ಜಿಲ್ಲೆಯ ಪ್ರಮುಖ ಆಸ್ಪತ್ರೆಗಳಲ್ಲಿ ಆರೋಗ್ಯ ಭಾಗ್ಯ ಯೋಜನೆಯ ಪ್ರಯೋಜನ ಲಭಿಸುವಂತೆ ಆಗಬೇಕು ಎಂದು ಸಶಸ್ತ್ರ ಮೀಸಲು ಪಡೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಎ ಚಂದ್ರ ಶೇಖರ್ ಅವರು ಆಗ್ರಹಿಸಿದರು.

ಅವರು ಶುಕ್ರವಾರ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಕಲ್ಯಾಣ ಮತ್ತು ಧ್ವಜ ದಿನಾಚರಣೆಯಲ್ಲಿ ಭಾಗವಹಿಸಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.

ನಿವೃತ್ತ ಪೊಲೀಸರಿಗೆ ಆರೋಗ್ಯ ಭಾಗ್ಯ ಯೋಜನೆಯಲ್ಲಿ ಕೆಲವೊಂದು ನಿಗದಿತ ಆಸ್ಪತ್ರೆಗಳಲ್ಲಿ ಮಾತ್ರ ಚಿಕಿತ್ಸೆ ದೊರೆಯುತ್ತಿದ್ದು ಪ್ರಮುಖ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಬೇಕು ಎಂದಲ್ಲಿ ಅದು ಸಾಧ್ಯವಾಗುವುದಿಲ್ಲ ಈ ನಿಟ್ಟಿನಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳು ಗಮನ ಹರಿಸುವಂತೆ ಮನವಿ ಮಾಡಿದರು. ಪೊಲೀಸರು ಸದಾ ಕೆಲಸದಲ್ಲಿಯೇ ಇದ್ದು ಅವರಿಗೆ ಸಮಾಜದಲ್ಲಿ ಹೆಚ್ಚಿನ ಜವಾಬ್ದಾರಿ ಇದ್ದು ಒತ್ತಡದ ಸಮಯದಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಹೇಳಿದರು.

ರಮೇಶ್‌ ಜಾರಕಿಹೊಳಿ ಬೆಳಗಾವಿ ಲೋಕಸಭೆ ಉಪಚುನಾವಣೆ ಪ್ರಚಾರಕ್ಕೆ ಬರುತ್ತಾರೆ : ಜಗದೀಶ್ ಶೆಟ್ಟರ್ -Vishwanews24

ಕಾರ್ಯಕ್ರಮದಲ್ಲಿ ಸ್ವಾಗತ ಮತ್ತು ಪ್ರಸ್ತಾವನೆ ಮಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಅವರು ಮಾತನಾಡಿ ಪೊಲೀಸ್ ಕಲ್ಯಾಣ ನಿಧಿಯ ಮೂಲಕ ನಿವೃತ್ತ ಪೊಲೀಸ್ ಅಧಿಕಾರಿಗಳ ಆರೋಗ್ಯಕ್ಕೆ ಸಹಾಯ ಮಾಡುತ್ತ ಬಂದಿದ್ದು 2020-21 ನೇ ಸಾಲಿನಲ್ಲಿ ಒಟ್ಟು ರೂ. 4,64,000 ಹಣವನ್ನು ವ್ಯಯಿಸಲಾಗಿದೆ ಎಂದರು.

ಇದೇ ವೇಳೆ ಜಿಲ್ಲೆಯಲ್ಲಿ ಕೋವಿಡ್ ಸಮಸ್ಯೆ ಕಡಿಮೆಯಾಗಿದೆ ಎಂದು ನಿರ್ಲಕ್ಷ ವಹಿಸದೆ ಪ್ರತಿಯೊಬ್ಬ ಅಧಿಕಾರಿಗಳು ಮತ್ತು ನಿವೃತ್ತ ಪೊಲೀಸರು ಕಡ್ಡಾಯವಾಗಿ ಕೋವಿಡ್ ಲಸಿಕೆಯನ್ನು ಪಡೆಯುವಂತೆ ಮನವಿ ಮಾಡಿದರು.

ಬಿಸಿ ಪಾಟೀಲ್‍ ಅವರಿಗೆ ಮನೆಯಲ್ಲಿಯೇ ಕೊರೊನಾ ಲಸಿಕೆಗೆ ನೀಡಿದ ಆರೋಗ್ಯಾಧಿಕಾರಿ ಅಮಾನತು -Vishwanews24

ಇದೇ ವೇಳೆ ಪೊಲೀಸ್ ಧ್ವಜವನ್ನು ಬಿಡುಗಡೆ ಮಾಡಿ ಬಳಿಕ ಮಾರಾಟ ಮಾಡಲಾಯಿತು. 7 ಪೊಲೀಸ್ ತಂಡಗಳು ಆಕರ್ಷಕ ಪಥ ಸಂಚಲನ ನಡೆಸಿ ಎಲ್ಲರ ಗಮನ ಸೆಳೆದವು. ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಸಿಬಂದಿಯವರಿಗೆ ಕಲ್ಯಾಣ ನಿಧಿಯ ಚೆಕ್ಕನ್ನು ಈ ವೇಳೆ ವಿತರಿಸಲಾಯಿತು.

ಕಾರ್ಯಕ್ರಮಲ್ಲಿ ಉಡುಪಿ ಡಿವೈಎಸ್ಪಿ ಸದಾನಂದ ನಾಯಕ್, ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್, ಕಾರ್ಕಳ ಡಿವೈಎಸ್ಪಿ ಭರತ್ ರೆಡ್ಡಿ, ಡಿಎಆರ್ ಡಿವೈಎಸ್ಪಿ ರಾಘವೇಂದ್ರ, ನಿವೃತ್ತ ಪೊಲೀಸ್ ಅಧಿಕಾರಗಳ ಸಂಘದ ಡಾ. ಪ್ರಭುದೇವ ಮಾನೆ ಹಾಗೂ ಇತರ ಪೊಲೀಸ್ ಅಧಿಕಾರಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು ಮತ್ತು ಸಿಬಂದಿ, ಉಪಸ್ಥಿತರಿದ್ದರು.

ಬ್ರಹ್ಮಾವರ ವೃತ್ತ ನಿರೀಕ್ಷಕರಾದ ಅನಂತ ಪದ್ಮನಾಭ ಅವರು ವಂದಿಸಿ, ಉಡುಪಿ ವೃತ್ತ ನಿರೀಕ್ಷರಾದ ಮಂಜುನಾಥ್ ಅವರು ಕಾರ್ಯಕ್ರಮ ನಿರೂಪಿಸಿದರು.

ಮಂಗಳೂರು: ಬಬ್ಬುಸ್ವಾಮಿ ದೈವಸ್ಥಾನಕ್ಕೆ ಅಪವಿತ್ರ ಪ್ರಕರಣದ ಆರೋಪಿಗಳ ಉನ್ನತ ತನಿಖೆಗೆ ವಿಹೆಚ್ ಪಿ ಆಗ್ರಹ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

11 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

20 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

20 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

20 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

20 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago