ಉಡುಪಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ಡಿಎಆರ್ ಪುರುಷ ಮತ್ತು ತೃತೀಯ ಲಿಂಗ ಪುರುಷ) -3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಜನವರಿ 28 ರಂದು ಬೆಳಗ್ಗೆ 11 ರಿಂದ 12.30 ರ ವರೆಗೆ ರಾಜ್ಯದಾದ್ಯಂತ ನಡೆಯಲಿದ್ದು,
ಪರೀಕ್ಷಗೆ ಹಾಜರಾಗುವ ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ಗಳನ್ನು ಕಡ್ಡಾಯವಾಗಿ ಧರಿಸಬೇಕು.
ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ಗಳನ್ನು ಧರಿಸಬಹುದಾಗಿದ್ದು,
ಜಿಪ್ ಪ್ಯಾಕೆಟ್‌ಗಳು, ದೊಡ್ಡ ಬಟನ್‌ಗಳು ಇರುವ ಶರ್ಟ್ಗಳನ್ನು ಹಾಗೂ ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‌ಗಳನ್ನು ಧರಿಸುವಂತಿಲ್ಲ.
ಪರೀಕ್ಷಾ ಕೇಂದ್ರದ ಒಳಗೆ ಶೂಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು ಧರಿಸಬೇಕು.
ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದು ನಿಷೇಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…