Featured

ಉಡುಪಿ : ಪೋಷಣ್ ಅಭಿಯಾನ ಯೋಜನೆಯಿಂದ ಅಪೌಷ್ಟಿಕತೆ ದೂರ : ಸಿಇಓ ಡಾ.ನವೀನ್ ಭಟ್ -Vishwanews24

ಉಡುಪಿ : ಪೋಷಣ್ ಅಭಿಯಾನ ಯೋಜನೆಯಿಂದ ಅಪೌಷ್ಟಿಕತೆ ದೂರ : ಸಿಇಓ ಡಾ.ನವೀನ್ ಭಟ್ -Vishwanews24

ಉಡುಪಿ: ಅಂಗನವಾಡಿ ಕೇಂದ್ರಗಳಲ್ಲಿ ಗುರುತಿಸಲ್ಪಟ್ಟ ತೀವ್ರ ಅಪೌಷ್ಠಿಕ ಹಾಗೂ ಸಾಧಾರಣ ಅಪೌಷ್ಠಿಕ ಮಕ್ಕಳನ್ನು ಪಂಚಾಯತ್ ಮಟ್ಟದಲ್ಲಿ ದತ್ತು ಪಡೆದು ಅವರ ಪೌಷ್ಠಿಕತೆ ಮಟ್ಟವನ್ನು ಹೆಚ್ಚಿಸುವಲ್ಲಿ ಸಹಕರಿಸಿದಾಗ ಪೋಷಣ್ ಅಭಿಯಾನ ಯೋಜನೆಯ ಮುಖ್ಯ ಉದ್ದೇಶವಾದ ಅಪೌಷ್ಠಿಕತೆಯನ್ನು ಹೋಗಲಾಡಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಹೇಳಿದರು.

ಅವರು ಬುಧವಾರ, ಬಡಗಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಉಡುಪಿ ಹಾಗೂ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಇವರ ಸಹಯೋಗದೊಂದಿಗೆ ನಡೆದ ಪೋಷಣ್ ಅಭಿಯಾನ್ ಯೋಜನೆಯ ಪೋಷಣ್ ಪಕ್ವಾಡ ಕಾರ್ಯಕ್ರಮ ಉದ್ಘಾಟಿಸಿ, ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು.

ಇದನ್ನೂ ಓದಿ : ಉಡುಪಿ : ಜಿಲ್ಲೆಯಲ್ಲಿ ದುಡಿಯೋಣ ಬಾ ಅಭಿಯಾನ: ದಿನಕರ ಬಾಬು -Vishwanews24

ಸರಕಾರ ಮಕ್ಕಳಲ್ಲಿ ಪೌಷ್ಟಿಕಾಂಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅನೇಕ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅಂಗನವಾಡಿಗಳ ಮೂಲಕ ತಲುಪಿಸುತ್ತಿದೆ. ಇದು ಪ್ರತಿಶತಃ 100 ರಷ್ಟು ಅನುಷ್ಟಾನವಾದಾಗ ಅಪೌಷ್ಟಿಕತೆಯನ್ನು ದೂರ ಮಾಡಲು ಸಾಧ್ಯವಾಗುತ್ತದೆ ಎಂದರು.      ತೋಟಗಾರಿಕೆ ಇಲಾಖೆಯ ಸಹಕಾರದೊಂದಿಗೆ ಪೌಷ್ಠಿಕ ಕೈತೋಟಗಳನ್ನು ಅಭಿವೃದ್ಧಿ ಪಡಿಸುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್ ಶೇಷಪ್ಪ, ಬಡಗಬೆಟ್ಟು ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷೆ ನಿರುಪಮಾ ಎಸ್ ಹೆಗ್ಡೆ, ಎನ್.ಆರ್.ಎಲ್.ಎಮ್ ಯೋಜನಾ ನಿರ್ದೇಶಕ ಬಾಬು, ಎನ್.ಆರ್.ಎಲ್.ಎಮ್ ಉಪ ಯೋಜನಾ ನಿರ್ದೇಶಕ ಗುರುದತ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿದ್ದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಕೇಶವ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಇದನ್ನೂ ಓದಿ : ಉಡುಪಿ : ಸ್ವಚ್ಛತೆಯಲ್ಲಿ ಜಿಲ್ಲೆಯು ಅಗ್ರಸ್ಥಾನ ಕಾಯ್ದುಕೊಳ್ಳಲು ವಿದ್ಯಾರ್ಥಿಗಳ ಶ್ರಮ ಅಗತ್ಯ : ಜಿ.ಪಂ. ಅಧ್ಯಕ್ಷ ದಿನಕರ ಬಾಬು -Vishwanews24

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

2 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

2 hours ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

2 hours ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

2 hours ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

2 hours ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

17 hours ago