Featured

ಉಡುಪಿ : ಪೋಷಣ್ ಪಕ್ವಾಡ ಅಭಿಯಾನ್ ಯೋಜನೆಯ ಆಯುಷ್  ಅರಿವು ಕಾರ್ಯಕ್ರಮ -Vishwanews24

ಉಡುಪಿ : ಪೋಷಣ್ ಪಕ್ವಾಡ ಅಭಿಯಾನ್ ಯೋಜನೆಯ ಆಯುಷ್  ಅರಿವು ಕಾರ್ಯಕ್ರಮ -Vishwanews24

ಉಡುಪಿ : ಅಪೌಷ್ಠಿಕತೆಯು ಮಕ್ಕಳು, ಗರ್ಭಿಣಿ, ಬಾಣಂತಿ, ಕಿಶೋರಾವಸ್ಥೆಯಲ್ಲಿ ಕಂಡು ಬರುತ್ತಿದ್ದು, ಈ ಅಪೌಷ್ಠಿಕತೆಯನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಭಾರತ ಸರ್ಕಾರವು ಹಲವು ಯೋಜನೆಗಳನ್ನು ತಂದಿದ್ದು, ಅಂಗನವಾಡಿ ಕೇಂದ್ರಗಳ ಮೂಲಕ ಪೌಷ್ಠಿಕ ಆಹಾರವನ್ನು ನೀಡುತ್ತಿವೆ ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ಚಂದ್ರಿಕಾ ಕೇಳ್ಕರ್ ತಿಳಿಸಿದರು.

ಅವರು ಇಂದು, ಹಿರಿಯಡ್ಕ ಕೆ.ಪಿ.ಎಸ್. ಪ್ರೌಢಶಾಲಾ ವಿಭಾಗದ ಚಂದಯ್ಯ ಹೆಗ್ಡೆ ಸಭಾಂಗಣದಲ್ಲಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಯುಷ್ ಇಲಾಖೆ, ತಾಲೂಕು ಪಂಚಾಯತ್ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಉಡುಪಿ ಹಾಗೂ ಕೆ.ಪಿ.ಎಸ್. ಪ್ರೌಢಶಾಲಾ ವಿಭಾಗ ಹಿರಿಯಡ್ಕ ಇವರ ಸಹಯೋಗದೊಂದಿಗೆ ನಡೆದ ಪೋಷಣ್ ಪಕ್ವಾಡ ಅಭಿಯಾನ್ ಯೋಜನೆಯ ಯೋಗಾಸನ ಮಾರ್ಗದರ್ಶನ ಶಿಬಿರ ಹಾಗೂ ಅಪೌಷ್ಠಿಕತೆ ಹೋಗಲಾಡಿಸುವಿಕೆ ಆಯುಷ್-ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದಿನ ಕಿಶೋರಿಯರು ಭವಿಷ್ಯದ ಉತ್ತಮ ಸಧೃಢ ತಾಯಂದಿರಾಗಲು ಹಾಗೂ ಬೌದ್ಧಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೌಷ್ಠಿಕ ಆಹಾರದ ಸೇವನೆಯೊಂದಿಗೆ ಉತ್ತಮ ಆರೋಗ್ಯಕರ ಅಭ್ಯಾಸಗಳಾದ ವ್ಯಾಯಾಮ, ಯೋಗ, ಧ್ಯಾನ ಬಹಳ ಅಗತ್ಯ ಎಂದು ತಿಳಿಸಿದರು. ಆಯುಷ್ ಇಲಾಖೆಯ ಅಧಿಕಾರಿ ಡಾ.ಅಲಕಾನಂದ ರಾವ್ ಮಾತನಾಡಿ, ಆಯುಷ್ ಅರಿವು ಹಾಗೂ ಯೋಗಾಸನ ಕಾರ್ಯಕ್ರಮವು ಮುಖ್ಯವಾಗಿ ಹದಿಹರೆಯದವರಿಗಾಗಿ ಆಯೋಜಿಸಿದ್ದು, ಹಸಿವಾದಾಗ ಜಂಕ್ ಆಹಾರವನ್ನು ಸೇವಿಸುವ ಬದಲು ಸ್ಥಳೀಯ ಲಭ್ಯ ಪೋಷಕಾಂಶಯುಕ್ತ ಆಹಾರ, ಋತುಮಾನಕ್ಕೆ ತಕ್ಕಂತ ಆಹಾರವನ್ನು ಸೇವಿಸುವಂತೆ ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಪಂಚಾಯತ್ ಅಧ್ಯಕ್ಷೆ ಸಂಧ್ಯಾ ಕಾಮತ್ ಮಾತನಾಡಿ, ಯೋಗಾಸನ ಮಾರ್ಗದರ್ಶನ ಶಿಬಿರ ಹಾಗೂ ಅಪೌಷ್ಠಿಕತೆ ಹೋಗಲಾಡಿಸುವಿಕೆ ಆಯುಷ್-ಅರಿವು ಕಾರ್ಯಕ್ರಮವು ಒಂದು ಉತ್ತಮ ಕಾರ್ಯಕ್ರಮವಾಗಿದ್ದು, ಅದರ ಸದುಪಯೋಗವನ್ನು ಎಲ್ಲಾ ಕಿಶೋರಿಯರು ಪಡೆದುಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳಾದ ಡಾ.ಪ್ರಕಾಶ್ ನಾಯಕ್ ಹಾಗೂ ಡಾ. ಶಿಲ್ಪ, ಕೆ.ಪಿ.ಎಸ್  ಶಾಲೆಯ ಮುಖ್ಯೋಪಾಧ್ಯಾಯರಾದ ಶಾರದಾ, ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ನಳಿನಾ ದೇವಿ ಎಮ್ ಆರ್,
ಶಾಲೆಯ ಭೋದಕ ವರ್ಗದವರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಹಿರಿಯ ಮೇಲ್ವಿಚಾರಕಿ ಶಾಂತಿ ಪ್ರಭು ನಿರೂಪಿಸಿ, ಮೇಲ್ವಿಚಾರಕಿ ಪೂರ್ಣಿಮಾ ವಂದಿಸಿದರು.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

4 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

6 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

6 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

7 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

7 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

7 hours ago