Featured

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ- vishwanews24

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ನ್ಯಾಯ ಕೇಳಲು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರ ಸೋಗಿನಲ್ಲಿ ಬಂದವರು ಲಾಠಿಚಾರ್ಜ್ ನಡೆಸಿ ದೌರ್ಜನ್ಯ ಎಸಗಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಆರೋಪಿಸಿದರು.

ನಗರದ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡಿಸಿದ್ದಾರೆ. ಆದರೆ ಅವರನ್ನು ಬಂಧಿಸುವ ಮೂಲಕ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದಲ್ಲಿ ಜನರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

ಯುವಜನರನ್ನು ಬಳಸಿಕೊಂಡು ಸುಳ್ಳು ಅಪಪ್ರಚಾರ ನಡೆಸಿ ಯುಪಿಎ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿದ ಬಿಜೆಪಿ, ಈಗ ಅದೇ ಯುವಜನತೆ ಪ್ರಶ್ನೆ ಕೇಳಲು ಮುಂದಾದಾಗ ವಿದ್ಯಾರ್ಥಿಗಳನ್ನೇ ದೇಶದ್ರೋಹಿಗಳಂತೆ ಬಿಂಬಿಸುವ ಪ್ರಯತ್ನ ನಡೆಸುತ್ತಿದೆ ಎಂದು ದೂರಿದರು.

ಕಳೆದ 12 ವರ್ಷಗಳಲ್ಲಿ ನೂರಾರು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಕೇಂದ್ರ ಸರಕಾರದಿಂದ ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪ್ರಧಾನಿ ಮೋದಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago