Featured

ಉಡುಪಿ  :ಪ್ರತಿಭಟನೆ ಹೆಸರಿನಲ್ಲಿ ಭಾವಚಿತ್ರಕ್ಕೆ ಉಗುಳುವಂತಹ ಸಣ್ಣತನ ಒರ್ವ ಶಾಸಕರಾಗಿ ತೋರಿರುವುದು ನಿಜಕ್ಕೂ ಅಸಹ್ಯ : ಯಶ್‌ಪಾಲ್ ಸುವರ್ಣ ವಿರುದ್ಧ ರಮೇಶ್ ಕಾಂಚನ್  ಟೀಕೆ – Vishwanews24

ಉಡುಪಿ  :ಪ್ರತಿಭಟನೆ ಹೆಸರಿನಲ್ಲಿ ಭಾವಚಿತ್ರಕ್ಕೆ ಉಗುಳುವಂತಹ ಸಣ್ಣತನ ಒರ್ವ ಶಾಸಕರಾಗಿ ತೋರಿರುವುದು ನಿಜಕ್ಕೂ ಅಸಹ್ಯ : ಯಶ್‌ಪಾಲ್ ಸುವರ್ಣ ವಿರುದ್ಧ ರಮೇಶ್ ಕಾಂಚನ್  ಟೀಕೆ

ಉಡುಪಿ , : ಶಾಸಕರಾದ ಯಶ್‌ಪಾಲ್ ಸುವರ್ಣ ಅವರು ರಾಜಕೀಯದಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಲು ಬಾಕಿ ಇದ್ದು ಅವರು ತನ್ನ ಮಕ್ಕಳಾಟಿಕೆ ಸ್ವಭಾವವನ್ನು ಕೈಬಿಟ್ಟು ಉಡುಪಿ ಕ್ಷೇತ್ರದ ಜನರು ತನಗೆ ಮತ ನೀಡಿರುವುದು ಕ್ಷೇತ್ರದ ಅಭಿವೃದ್ಧಿ ಮಾಡಲು ಎನ್ನುವುದುನ್ನು ಅರಿತು ಅದರ ಕಡೆಗೆ ಗಮನ ಹರಿಸುವುದು ಉತ್ತಮ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ‌ಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಸಲಹೆ ನೀಡಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸಲು ಪ್ರತಿಯೊಬ್ಬರಿಗೂ ಅವಕಾಶವಿದೆ ಆದರೆ ಪ್ರತಿಭಟನೆಯ ಹೆಸರಿನಲ್ಲಿ ಪ್ರಚೋದನೆಗೆ ಅವಕಾಶ ನೀಡುವುದು ತಪ್ಪು. ಹಿರಿಯ ಸಾಮಾಜಿಕ ಕಾರ್ಯಕರ್ತರಾದ ಎಂ.ಜಿ ಹೆಗ್ಡೆ ಅವರ ಹೇಳಿಕೆಯನ್ನು ಪ್ರತಿಭಟಿಸುವ ಭರದಲ್ಲಿ ಅವರ ಭಾವಚಿತ್ರಕ್ಕೆ ಉಗುಳುವಂತಹ ಸಣ್ಣತನ ಒರ್ವ ಶಾಸಕರಾಗಿ ತೋರಿರುವುದು ನಿಜಕ್ಕೂ ಅಸಹ್ಯವಾದುದು ಎಂದು ಟೀಕಿಸಿದ್ದಾರೆ.

ಪ್ರತಿಯೊಬ್ಬರ ವಿಚಾರಧಾರೆಗಳು ಒಂದೇ ಆಗಿರಬೇಕು ಎನ್ನುವ ಮನಸ್ಥಿತಿ ಸರಿಯಲ್ಲ. ಇದು ಸಮಾಜಕ್ಕೆ ಮಾರಕವಾಗುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.ಶಾಸಕರು ತನ್ನ ಕ್ಷೇತ್ರದ ಪ್ರತಿಯೊಂದು ಧರ್ಮ, ಜಾತಿಯ ಜನರನ್ನು ಒಂದಾಗಿ ಕೊಂಡೊಯ್ಯುವ ಜವಾಬ್ದಾರಿಯನ್ನು ಹೊಂದಿದ್ದು ಎಂದಿಗೂ ಕೂಡ ಅವರ ವರ್ತನೆ ಬೇಲಿಯೇ ಎದ್ದು ಹೊಲ ಮೇಯುವ ರೀತಿ ಆಗಬಾರದು ಎನ್ನುವ ಕನಿಷ್ಠ ಜ್ಞಾನ ಅವರಿಗೆ ಇರಬೇಕು. ನಾಯಕನಾದವನು ಸಂಸ್ಕಾರಯುತ ಸಮಾಜ ನಿರ್ಮಾಣ ಮಾಡಬೇಕು, ಸಮಾಜಕ್ಕೆ ಮಾದರಿಯಾಗಬೇಕೇ ವಿನಃ ಅವರೇ ಪ್ರಚೋದನೆಗೆ ಅವಕಾಶ ನೀಡಿದರೆ ಇದರಿಂದ ಮುಂದೆ ನಮ್ಮ ಸಮಾಜದ ಯುವಜನತೆಯು ಹಿಂಸಾತ್ಮಕ ಹಾದಿಯನ್ನು ಹಿಡಿಯಲು ಅವಕಾಶ ಮಾಡಿಕೊಟ್ಟಂತಾಗುತ್ತದೆ.

ತಾನೊಬ್ಬ ಜವಾಬ್ದಾರಿಯುತ ಶಾಸಕ ಎನ್ನುವುದನ್ನು ಅರಿತು ಯಾವತ್ತೂ ಕೂಡ ಕೀಳು ಮಟ್ಟದ ವರ್ತನೆ ತೋರಲು ಹೋಗುವುದು ಸಮಾಜಕ್ಕೆ ಅಪಾಯಕಾರಿಯಾಗಿ ಪರಿಣಮಿಸಲಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿಯ ಕುರಿತು ಹೆಚ್ಚಿನ ಗಮನ ಹರಿಸಲಿ ಎನ್ನುವುದು ಜನತೆಯ ಆಶಯವಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…

1 hour ago

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ – vishwanews24

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…

1 hour ago

ಉಡುಪಿ ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟಕ್ಕೆ ಲೈಸನ್ಸ್ : ಅರ್ಜಿ ಸಲ್ಲಿಸಲು ಅ.26 ಕೊನೆಯ ದಿನ – vishwanews24

ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…

2 hours ago

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ – vishwanews24

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…

2 hours ago

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ – vishwanews24

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…

2 hours ago

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ – vishwanews24

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್…

2 hours ago