Featured

ಉಡುಪಿ: ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ದೂರು ದಾಖಲು ಖಂಡನೀಯ : ಸುನಿಲ್ ಕುಮಾರ್ – vishwanews24

ಉಡುಪಿ: ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ದೂರು ದಾಖಲು ಖಂಡನೀಯ : ಸುನಿಲ್ ಕುಮಾರ್

ಉಡುಪಿ: ಬಿ.ಜಿ.ರಾಮಕೃಷ್ಣ ಎಂಬ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಕೊಟ್ಟಿದ್ದನ್ನು ಮತೀಯವಾದಿಗಳ ಒತ್ತಡಕ್ಕೆ ಮಣಿದು ವಾಪಾಸ್ ತೆಗೆದುಕೊಂಡ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿದ ಹನ್ನೊಂದು ಜನರ ಮೇಲೆ ಎಫ್ ಐಆರ್ ದಾಖಲಿಸಲು ಸರ್ಕಾರ ಸೂಚನೆ ನೀಡಿರುವುದು ಅತ್ಯಂತ ಖಂಡನೀಯ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕುವ ಕೃತ್ಯ.

ಪುಜಾಪ್ರಭುತ್ವದ ಮೌಲ್ಯ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದುವರೆಗೆ ಆಡಿದ ಮಾತುಗಳೆಲ್ಲವೂ ಕೇವಲ ತೋರಿಕೆ. ಈ ಎಲ್ಲ ಮಾತುಗಳು ಪ್ರತಿಪಕ್ಷದಲ್ಲಿ ಇದ್ದಾಗ ಮಾತ್ರ ಅವರಿಗೆ ಸುಲಭವಾಗಿ ಲಭಿಸುವ ಭಾಷಣದ ಸರಕೆಂಬುದು ಈಗ ದೃಢಪಟ್ಟಿದೆ. ಅಧಿಕಾರದಲ್ಲಿ ಇದ್ದಾಗ ಸಿದ್ದರಾಮಯ್ಯನವರಿಗೆ ಒಂದು ಪ್ರತಿಭಟನೆಯನ್ನೂ ಸಹಿಸಲಾಗದಂಥ ನಿರಂಕುಶ ಮನಃಸ್ಥಿತಿ ಆವರಿಸುತ್ತದೆ ಎಂಬುದಕ್ಕೆ ಈ ಘಟನೆಯೊಂದು ಉದಾಹರಣೆಯಾಗಿದೆ.

ಬಿ.ಜಿ.ರಾಮಕೃಷ್ಣ ಎಂಬ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಕೊಟ್ಟಿದ್ದನ್ನು ಮತೀಯವಾದಿಗಳ ಒತ್ತಡಕ್ಕೆ ಮಣಿದು ಸರ್ಕಾರ ವಾಪಾಸ್‌ ತೆಗೆದುಕೊಂಡಿತ್ತು.ಇದರ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಇದರಲ್ಲಿ ಭಾಗಿಯಾದ ಹನ್ನೊಂದು ಜನರ ಮೇಲೆ ಎಫ್ ಐಆರ್ ದಾಖಲಿಸಲು ಸರ್ಕಾರ ಸೂಚಿಸಿದೆ.ನಿಮ್ಮ ಸರ್ಕಾರ ಪ್ರತಿಭಟನೆ ನಡೆಸುವುದನ್ನೂ ಸಹಿಸದಷ್ಟು ಪುಜಾಪುಭುತ್ವ ವಿರೋಧಿ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ.ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಿಂದಲೂ ವಿಪಕ್ಷದ ಶಾಸಕರನ್ನು ಗುರಿಯಾಗಿಸಿಕೊಂಡು ನಡೆಸುತ್ತಿದ್ದ ದ್ವೇಷರಾಜಕಾರಣ ನಡೆಸಲಾಗುತ್ತಿತ್ತು. ಅದು ಈಗ ಮತ್ತೊಂದು ಮಜಲು ತಲುಪಿದೆ. ಈಗ ಹೋರಾಟಗಾರರನ್ನೂ ದಮನಿಸುವುದಕ್ಕೆ ಈ ಸರ್ಕಾರ ಮುಂದಾಗಿದೆ. ಸಿದ್ದರಾಮಯ್ಯನವರೇ ಅಧಿಕಾರ ಶಾಶ್ವತವಲ್ಲ, ದೌರ್ಜನ್ಯಕ್ಕೆ ಜನ ಬೆದರುವುದಿಲ್ಲ. ಜನತಾ ನ್ಯಾಯಾಲಯದಲ್ಲಿ ಸಾಕ್ಷಿ ನಾಶ ಸುಲಭವಲ್ಲ ಎಂಬುದು ನೆನಪಿರಲಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ ಸುನಿಲ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago