Featured

ಉಡುಪಿ : ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಸರಕಾರದ ದಿಟ್ಟ ಕ್ರಮ : ಕುಯಿಲಾಡಿ ಸುರೇಶ್ ನಾಯಕ್ -Vishwanews24

ಉಡುಪಿ : ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಸರಕಾರದ ದಿಟ್ಟ ಕ್ರಮ : ಕುಯಿಲಾಡಿ ಸುರೇಶ್ ನಾಯಕ್ -Vishwanews24

ಉಡುಪಿ: ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಗೋಹತ್ಯೆ ನಿಷೇಧ ಕಾನೂನಿಗೆ ಪೂರಕವಾಗಿ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ಸ್ಥಾಪನೆಗೆ ಒತ್ತು ನೀಡಿ ಅನುದಾನವನ್ನು ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದ ದಿಟ್ಟ ಕ್ರಮ ಅಭಿನಂದನೀಯ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ ಸ್ಥಾಪಿಸಲು ಅಕ್ಟೋಬರ್ 2, 2021ರ ಗಡುವನ್ನು ವಿಧಿಸಿರುವ ರಾಜ್ಯ ಸರಕಾರ ಪ್ರತೀ ಜಿಲ್ಲೆಗೆ ರೂ.24 ಲಕ್ಷಗಳ ಅನುದಾನ ಮಂಜೂರು ಮಾಡಿ ಆದೇಶ ಹೊರಡಿಸಿರುವುದು ಸ್ವಾಗತಾರ್ಹ ಎಂದು ಅವರು ಹೇಳಿದ್ದಾರೆ.

ಗೋಶಾಲೆಗಳಿಗೆ ಜೈವಿಕ ಬೇಲಿ ನಿರ್ಮಾಣ, ದನದ ಕೊಟ್ಟಿಗೆ ರಚನೆ, ಕೃಷಿ ಹೊಂಡಗಳನ್ನು ನಿರ್ಮಿಸುವುದು ಮತ್ತು ಮೇವು ಬೆಳೆಯಲು ಈ ಅನುದಾನವನ್ನು ಬಳಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿರುವ ರಾಜ್ಯ ಸರಕಾರ ಸ್ಥಳೀಯ ಖಾಸಗಿ ಟ್ರಸ್ಟ್ ಗಳೊಂದಿಗೆ ಸಂಬಂಧ ಹೊಂದುವ ಅವಕಾಶದ ಬಗ್ಗೆಯೂ ಸೂಕ್ತ ನಿರ್ದೇಶನ ನೀಡಿರುವುದು ರಾಜ್ಯದಾದ್ಯಂತ ಗೋಶಾಲೆಗಳ ಉನ್ನತೀಕರಣಕ್ಕೆ ನಾಂದಿ ಹಾಡಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

7 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

8 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

8 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

8 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

12 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

12 hours ago