Featured

ಉಡುಪಿ : ಪ್ರತೀ ಬುಧವಾರದಂದು ಲಸಿಕಾ ಮೇಳ – Vishwnaews24

ಉಡುಪಿ : ಪ್ರತೀ ಬುಧವಾರದಂದು ಲಸಿಕಾ ಮೇಳ – Vishwnaews24

ಉಡುಪಿ:  ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಮೇಳವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಆಶಾ ಕಾರ್ಯಕರ್ತೆಯರು ಪ್ರತಿ ಮನೆಗಳಿಗೆ ಭೇಟಿ ನೀಡಿ, 60 ವರ್ಷ ಮೇಲ್ಪಟ್ಟವರಲ್ಲಿ ಮುನ್ನೆಚ್ಚರಿಕಾ ಡೋಸ್ ಪಡೆಯಲು ಬಾಕಿ ಇರುವವರನ್ನು ಗುರುತಿಸಿ, ಬುಧವಾರ ನಡೆಯುವ ಲಸಿಕಾ ಮೇಳಕ್ಕೆ ಕಳುಹಿಸಬೇಕು. ಆಸ್ಪತ್ರೆಗೆ ಬರಲು ಸಾಧ್ಯವಾಗದ ಹಾಗೂ ಹಾಸಿಗೆ ಹಿಡಿದಿರುವ 60 ವರ್ಷ ಮೇಲ್ಪಟ್ಟವರಿದ್ದಲ್ಲಿ ಅವರಿಗೆ ಮೊಬೈಲ್ ಲಸಿಕಾ ಶಿಬಿರ ವ್ಯವಸ್ಥೆ ಮಾಡಿ, ಲಸಿಕೆ ನೀಡಬೇಕು.

ಪಂಚಾಯತ್ ವ್ಯಾಪ್ತಿಯಲ್ಲಿ ವೈದ್ಯಾಧಿಕಾರಿಗಳೊಂದಿಗೆ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮ ಕಾರ್ಯಪಡೆ ಸದಸ್ಯರ ಸಮಿತಿ ಸಭೆ ನಡೆಸಿ, 60 ವರ್ಷ ಮೇಲ್ಪಟ್ಟವರಲ್ಲಿ ಮುನ್ನೆಚ್ಚರಿಕಾ ಡೋಸ್ ಪಡೆಯಲು ಬಾಕಿ ಇರುವವರನ್ನು ಗುರುತಿಸಿ, ಲಸಿಕೆ ನೀಡಬೇಕು. ಅಗತ್ಯವಿದ್ದಲ್ಲಿ ಪಂಚಾಯತ್‌ನಲ್ಲಿಯೇ ಬುಧವಾರ ಲಸಿಕಾ ಮೇಳ ಶಿಬಿರವನ್ನು ಆಯೋಜಿಸಬೇಕು ಅಥವಾ ಪಂಚಾಯತ್ ಕಾರ್ಯಪಡೆ ಸದಸ್ಯರು , ಆಶಾ ಕಾರ್ಯಕರ್ತೆಯರು ಮತ್ತು ಸಮುದಾಯದ ಮುಖಂಡರುಗಳ ಮೂಲಕ ಮನವೊಲಿಸಿ, ಲಸಿಕೆ ನೀಡಬೇಕು. ನಗರ ವ್ಯಾಪ್ತಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು ಮತ್ತು ಸದಸ್ಯರೊಂದಿಗೆ ಸಭೆ ನಡೆಸಿ ಲಸಿಕೆ ನೀಡಲು ಕ್ರಮ ವಹಿಸಬೇಕು.

ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವತಿಯಿಂದ ಬುಧವಾರ ಲಸಿಕಾ ಮೇಳದ ಕುರಿತು ಮೈಕ್ ಮೂಲಕ ಪ್ರಚಾರ ನಡೆಸಿ, ಮುನ್ನೆಚ್ಚರಿಕಾ ಡೋಸ್ ಪಡೆಯುವಂತೆ ಕ್ರಮವಹಿಸಬೇಕು.

ಆರೋಗ್ಯ ಸಂಸ್ಥೆ ವ್ಯಾಪ್ತಿಯಲ್ಲಿರುವ ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರೆಲ್ಲರಿಗೂ ಮುನ್ನೆಚ್ಚರಿಕಾ ಡೋಸ್ ನೀಡಬೇಕು.

ಕುಂದಾಪುರದ ಆದರ್ಶ ಆಸ್ಪತ್ರೆ, ಚಿನ್ಮಯಿ ಆಸ್ಪತ್ರೆ ಹಾಗೂ ವಿನಯ ಆಸ್ಪತ್ರೆ ಮತ್ತು ಉಡುಪಿಯ ಆದರ್ಶ ಹಾಗೂ ಮಿತ್ರ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಲಸಿಕೆ ಲಭ್ಯವಿದ್ದು, 18 ರಿಂದ 59 ವರ್ಷದೊಳಗಿನನವರು ಸರಕಾರಿ ಮಾರ್ಗಸೂಚಿಯಂತೆ ಖಾಸಗಿ ಆಸ್ಪತ್ರೆಯಲ್ಲಿ ಪಾವತಿಸಿ, ಮುನ್ನೆಚ್ಚರಿಕಾ ಡೋಸ್ ಪಡೆಯಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago