ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಮೇಳವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಆಶಾ ಕಾರ್ಯಕರ್ತೆಯರು ಪ್ರತಿ ಮನೆಗಳಿಗೆ ಭೇಟಿ ನೀಡಿ, 60 ವರ್ಷ ಮೇಲ್ಪಟ್ಟವರಲ್ಲಿ ಮುನ್ನೆಚ್ಚರಿಕಾ ಡೋಸ್ ಪಡೆಯಲು ಬಾಕಿ ಇರುವವರನ್ನು ಗುರುತಿಸಿ, ಬುಧವಾರ ನಡೆಯುವ ಲಸಿಕಾ ಮೇಳಕ್ಕೆ ಕಳುಹಿಸಬೇಕು. ಆಸ್ಪತ್ರೆಗೆ ಬರಲು ಸಾಧ್ಯವಾಗದ ಹಾಗೂ ಹಾಸಿಗೆ ಹಿಡಿದಿರುವ 60 ವರ್ಷ ಮೇಲ್ಪಟ್ಟವರಿದ್ದಲ್ಲಿ ಅವರಿಗೆ ಮೊಬೈಲ್ ಲಸಿಕಾ ಶಿಬಿರ ವ್ಯವಸ್ಥೆ ಮಾಡಿ, ಲಸಿಕೆ ನೀಡಬೇಕು.
ಪಂಚಾಯತ್ ವ್ಯಾಪ್ತಿಯಲ್ಲಿ ವೈದ್ಯಾಧಿಕಾರಿಗಳೊಂದಿಗೆ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮ ಕಾರ್ಯಪಡೆ ಸದಸ್ಯರ ಸಮಿತಿ ಸಭೆ ನಡೆಸಿ, 60 ವರ್ಷ ಮೇಲ್ಪಟ್ಟವರಲ್ಲಿ ಮುನ್ನೆಚ್ಚರಿಕಾ ಡೋಸ್ ಪಡೆಯಲು ಬಾಕಿ ಇರುವವರನ್ನು ಗುರುತಿಸಿ, ಲಸಿಕೆ ನೀಡಬೇಕು. ಅಗತ್ಯವಿದ್ದಲ್ಲಿ ಪಂಚಾಯತ್‌ನಲ್ಲಿಯೇ ಬುಧವಾರ ಲಸಿಕಾ ಮೇಳ ಶಿಬಿರವನ್ನು ಆಯೋಜಿಸಬೇಕು ಅಥವಾ ಪಂಚಾಯತ್ ಕಾರ್ಯಪಡೆ ಸದಸ್ಯರು , ಆಶಾ ಕಾರ್ಯಕರ್ತೆಯರು ಮತ್ತು ಸಮುದಾಯದ ಮುಖಂಡರುಗಳ ಮೂಲಕ ಮನವೊಲಿಸಿ, ಲಸಿಕೆ ನೀಡಬೇಕು. ನಗರ ವ್ಯಾಪ್ತಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು ಮತ್ತು ಸದಸ್ಯರೊಂದಿಗೆ ಸಭೆ ನಡೆಸಿ ಲಸಿಕೆ ನೀಡಲು ಕ್ರಮ ವಹಿಸಬೇಕು.
ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವತಿಯಿಂದ ಬುಧವಾರ ಲಸಿಕಾ ಮೇಳದ ಕುರಿತು ಮೈಕ್ ಮೂಲಕ ಪ್ರಚಾರ ನಡೆಸಿ, ಮುನ್ನೆಚ್ಚರಿಕಾ ಡೋಸ್ ಪಡೆಯುವಂತೆ ಕ್ರಮವಹಿಸಬೇಕು.
ಆರೋಗ್ಯ ಸಂಸ್ಥೆ ವ್ಯಾಪ್ತಿಯಲ್ಲಿರುವ ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರೆಲ್ಲರಿಗೂ ಮುನ್ನೆಚ್ಚರಿಕಾ ಡೋಸ್ ನೀಡಬೇಕು.
ಕುಂದಾಪುರದ ಆದರ್ಶ ಆಸ್ಪತ್ರೆ, ಚಿನ್ಮಯಿ ಆಸ್ಪತ್ರೆ ಹಾಗೂ ವಿನಯ ಆಸ್ಪತ್ರೆ ಮತ್ತು ಉಡುಪಿಯ ಆದರ್ಶ ಹಾಗೂ ಮಿತ್ರ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಲಸಿಕೆ ಲಭ್ಯವಿದ್ದು, 18 ರಿಂದ 59 ವರ್ಷದೊಳಗಿನನವರು ಸರಕಾರಿ ಮಾರ್ಗಸೂಚಿಯಂತೆ ಖಾಸಗಿ ಆಸ್ಪತ್ರೆಯಲ್ಲಿ ಪಾವತಿಸಿ, ಮುನ್ನೆಚ್ಚರಿಕಾ ಡೋಸ್ ಪಡೆಯಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…