ಉಡುಪಿ: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಯ ಮತ್ಸ್ಯ ವಾಹಿನಿ ಯೋಜನೆಯಡಿ ತಾಜಾ ಮೀನು ಮಾರಾಟಕ್ಕಾಗಿ ಹಾಗೂ ಮೀನು ಉತ್ಪನ್ನಗಳ ಮಾರಾಟಕ್ಕಾಗಿ ಇ-ತ್ರಿಚಕ್ರ ವಾಹನಗಳನ್ನು ಗುತ್ತಿಗೆ ಪರವಾನಗಿ ಆಧಾರದಲ್ಲಿ ಮೇಲೆ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಮೀನುಗಾರಿಕೆ ಅಭಿವೃದ್ಧಿ ನಿಗಮದ ಫ್ರಾಂಚೈಸಿಗಳು ಮೀನು ಮಾರಾಟ ಜಾಲವನ್ನು ವಿಸ್ತರಿಸಲು ಬಯಸಿದ್ದಲ್ಲಿ, ಸರ್ಕಾರದ ವಿವಿಧ ಕೌಶಲ್ಯ ಅಭಿವೃದ್ಧಿ ಯೋಜನೆಗಳಡಿ ತರಬೇತಿ ಪಡೆದವರು, ಮೀನುಗಾರಿಕೆ ಇಲಾಖೆಯಿಂದ ಅನುಮೋದಿತ ಮೀನುಗಾರರ ಉತ್ಪಾದಕ ಸಂಸ್ಥೆಗಳು, ಮೀನು ಮಾರಾಟ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಮೀನುಗಾರಿಕೆ ಸಹಕಾರ ಸಂಘ/ ಒಕ್ಕೂಟಗಳು, ಮಹಿಳಾ ಸ್ವ-ಸಹಾಯ ಗುಂಪುಗಳು ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತರಿರುವ ನಿರುದ್ಯೋಗ ಯುವಕ, ಯುವತಿಯರು ಹಾಗೂ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…