ಉಡುಪಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರನ್ನು ಸ್ವಕ್ಷೇತ್ರದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಹಾಗೂ ಅಪ್ರಬುದ್ಧ ಬಾಲಿಶ ರಾಜಕಾರಣಿ ಹಾಗೂ ಚುನಾವಣೆಯಲ್ಲಿ ಸೋತ ವ್ಯಕ್ತಿ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್ ಹೇಳಿರುವುದು ಹಾಸ್ಯಾಸ್ಪದವಾಗಿದೆ ಎಂದು ಕೆಪಿಸಿಸಿ ಕೊ-ಆರ್ಡಿನೇಟರ್ ಅಲೆವೂರು ಹರೀಶ್ ಕಿಣಿ ಹೇಳಿದ್ದಾರೆ.
ಕುಯಿಲಾಡಿ ಅವರು ಎರಡು ಬಾರಿ ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧಿಸಿ ಸೋತವರು, ನಯನಾ ಗಣೇಶ್ ಅವರೂ ಜಿಲ್ಲಾ ಪಂಚಾಯತಿಗೆ ಸ್ಪರ್ಧಿಸಿ ಸೋತವರು. ಅಷ್ಟೇ ಏಕೆ ಇಂಧನ ಸಚಿವರಾಗಿ ಭಾರೀ ಅಭಿವೃದ್ಧಿ ಮಾಡಿದ್ದರು ಎಂದು ಇದೇ ಬಿಜೆಪಿ ನಾಯಕರು ಕೊಚ್ಚಿಕೊಳ್ಳುವ ಶೋಭಾ ಕರಂದ್ಲಾಜೆ ಅವರೂ ಕೆಜೆಪಿಯಿಂದ ಸ್ಪರ್ಧಿಸಿ ಸೋತವರೇ. ಹಾಗಾಗಿ ಯುವ ನಾಯಕ ಮಿಥುನ್ ರೈ ಅವರನ್ನು ಸೋತವರು ಎಂದು ಹೀಯಾಳಿಸುವುದು ಬಿಜೆಪಿ ನಾಯಕರು ಮೇಲೆ ನೋಡಿ ಉಗಿದಂತೆ ಆಗಿದೆ.
ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಗೋದಾನ, ಕೊರೊನಾ ಸಂದರ್ಭದಲ್ಲಿ ಸಾರ್ವಜನಿಕ ಸೇವೆ, ಪಿಲಿನಲಿಕೆ ಇತ್ಯಾದಿಗಳ ಮೂಲಕ ಮಿಥುನ್ ರೈ ಅವರು ಸಂಸ್ಕೃತಿ-ಸಂಸ್ಕಾರದ ರಕ್ಷಣೆಗೆ ನೀಡುತ್ತಿರುವ ಕೊಡುಗೆ ಅನನ್ಯ. ಮಿಥುನ್ ರೈ ಬಾಲಿಷ ನಾಯಕರಾದರೆ ಶೋಭಾ ವಿರುದ್ಧ ಅವರ ಒಂದೇ ಒಂದು ಹೇಳಿಕೆಗೆ ಮಂಡಲ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಬಿಜೆಪಿ ನಾಯಕರು ಪ್ರತಿ ಹೇಳಿಕೆ ನೀಡುತ್ತಿದ್ದಾರೆಂದರೆ, ಮಿಥುನ್ ಅವರ ವ್ಯಕ್ತಿತ್ವಕ್ಕೆ ಬಿಜೆಪಿಯವರು ಎಷ್ಟು ಮಹತ್ವ ನೀಡುತ್ತಾರೆಂದು ತಿಳಿಯುತ್ತದೆ. ಪ್ರತಿಪಕ್ಷದವರನ್ನು ಹಳಿಯುವ ಪ್ರಯತ್ನ ಬಿಟ್ಟು ಇನ್ನಾದರೂ ಸಂಸದೆ ಶೋಭಾ ಅಭಿವೃದ್ಧಿ ಕೆಲಸಗಳ ಮೂಲಕ ಮೋದಿ ಮುಖ ನೋಡಿ ಮತ ನೀಡಿದ ಜನರಿಗೆ ನ್ಯಾಯ ಒದಗಿಸಲಿ ಎಂದು ಹರೀಶ್ ಕಿಣಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಕಾರ್ಕಳ: ಅಪಾಯಕಾರಿ ಹೊಂಡ ತಪ್ಪಿಸಲು ಹೋದ ಕಾರಿಗೆ ಇನ್ನೊಂದು ಕಾರು ಡಿಕ್ಕಿ – ಎರಡೂ ಕಾರುಗಳು ಜಖಂ – Vishwanews24
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…