ಉಡುಪಿ

ಉಡುಪಿ : ಪ್ರಧಾನಿ ಮೋದಿ ರಾಜತಾಂತ್ರಿಕ ನಿಲುವಿನಿಂದ ಭಾರತದ ಯೋಗಾಭ್ಯಾಸಕ್ಕೆ ಅಂತಾರಾಷ್ಟ್ರೀಯ ಮಾನ್ಯತೆ : ಶಾಸಕ ಕೆ. ರಘುಪತಿ ಭಟ್ -Vishwanews24

ಉಡುಪಿ : ಪ್ರಧಾನಿ ಮೋದಿ ರಾಜತಾಂತ್ರಿಕ ನಿಲುವಿನಿಂದ ಭಾರತದ ಯೋಗಾಭ್ಯಾಸಕ್ಕೆ ಅಂತಾರಾಷ್ಟ್ರೀಯ ಮಾನ್ಯತೆ : ಶಾಸಕ ಕೆ. ರಘುಪತಿ ಭಟ್ -Vishwanews24

ಉಡುಪಿ : ಯೋಗಾಭ್ಯಾಸವು ನಮ್ಮ ಭವ್ಯ ಪರಂಪರೆಯ ಸಂಕೇತವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ರಾಜತಾಂತ್ರಿಕ ನಿಲುವಿನಿಂದ ಭಾರತದ ಯೋಗಾಭ್ಯಾಸ ಇಂದು ಅಂತಾರಾಷ್ಟ್ರೀಯ ಮಾನ್ಯತೆ ಪಡೆದಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಹೇಳಿದರು.

ಅವರು ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಅಂಬಲಪಾಡಿ ಹೋಟೆಲ್ ಕಾರ್ತಿಕ್ ಎಸ್ಟೇಟ್ ಸಭಾಂಗಣದಲ್ಲಿ ಜೂನ್ 21ರಂದು ಆಯೋಜಿಸಿದ ಸಾಮೂಹಿಕ ಯೋಗ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ಯೋಗದಿಂದ ಉತ್ತಮ ಆರೋಗ್ಯ ಹಾಗೂ ಮಾನಸಿಕ ಸ್ಥಿಮಿತ ಕಾಯ್ದುಕೊಳ್ಳಲು ಸಾಧ್ಯ. ಇಂದಿನ ದಿನಗಳಲ್ಲಿ ವಿಶ್ವದಾದ್ಯಂತ ಪ್ರತಿಯೊಬ್ಬರು ಯೋಗಾಭ್ಯಾಸದ ಕಡೆ ಆಕರ್ಷಿತರಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಅವರು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಯೋಗ ಶಿಬಿರವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಬಿಜೆಪಿ ಉಡುಪಿ ನಗರ ಅಧ್ಯಕ್ಷ ಮಹೇಶ್ ಠಾಕೂರ್, ವಿಶ್ವ ಯೋಗ ದಿನಾಚರಣೆಯ ಜಿಲ್ಲಾ ಸಂಯೋಜಕರಾದ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಡಾ! ವಿಜಯೇಂದ್ರ ವಸಂತ್, ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಸೃಷ್ಠಿ ಫೌಂಡೇಶನ್ ಸಂಸ್ಥಾಪಕಿ, ಯೋಗ ಶಿಕ್ಷಕಿ ಡಾ! ಮಂಜರಿಚಂದ್ರ ಪುಷ್ಪರಾಜ್ ಯೋಗ ತರಬೇತಿ ನೀಡಿದರು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

6 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

12 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

13 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

13 hours ago