Featured

ಉಡುಪಿ: ಪ್ರಧಾನಿ ಮೋದಿ ಸ್ವಾಗತಕ್ಕೆ ಭರದ ಸಿದ್ಧತೆ ; ಕಾರ್ಯಕ್ರಮಕ್ಕೆ ಬಿಗಿ ಭದ್ರತೆ – vishwanews24

ಉಡುಪಿ: ಪ್ರಧಾನಿ ಮೋದಿ ಸ್ವಾಗತಕ್ಕೆ ಭರದ ಸಿದ್ಧತೆ ; ಕಾರ್ಯಕ್ರಮಕ್ಕೆ ಬಿಗಿ ಭದ್ರತೆ

ಉಡುಪಿ: ಪ್ರಧಾನಿ ಮೋದಿ ಅವರು ಇದೇ ನವೆಂಬರ್​​ 28 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಐತಿಹಾಸಿಕ ಉಡುಪಿ ಶ್ರೀ ಕೃಷ್ಣಮಠಕ್ಕೆ ಪ್ರಧಾನಿ ಮೋದಿ ಅವರು ಭೇಟಿ ನೀಡಲಿದ್ದು, ಶ್ರೀ ಕೃಷ್ಣನ ದರ್ಶನ ಮಾಡಿ ಆಶೀರ್ವಾದ ಪಡೆಯಲಿದ್ದಾರೆ.

ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರ ಸ್ವಾಗತಕ್ಕೆ ಉಡುಪಿಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಪ್ರಧಾನಿ ಮಂತ್ರಿಯವರ ಕಚೇರಿಯಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದ್ದು, ಕಾರ್ಯಕ್ರಮದ ಸಂಪೂರ್ಣ ಸಿದ್ಧತೆ ನೋಡಿಕೊಳ್ಳುವುದು ಸೇರಿದಂತೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಬೃಹತ್​ ಗೀತೋತ್ಸವ ಅಂಗವಾಗಿ ನವೆಂಬರ್​ 28 ರಂದು ನಡೆಯಲಿರುವ ಲಕ್ಷ ಕಂಠ ಪಾರಾಯಣದಲ್ಲಿ ಪ್ರಧಾನಿ ಮೋದಿ ಅವರು ಭಾಗಿಯಾಗಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರು ಭಗವದ್ಗೀತೆಯ 10 ಶ್ಲೋಕಗಳನ್ನು ಪಠಿಸಲಿದ್ದಾರೆ. ಈ ಧಾರ್ಮಿಕ ಉತ್ಸವದಲ್ಲಿ ಒಂದು ಲಕ್ಷ ಭಕ್ತರು ಭಾಗವಹಿಸಲಿದ್ದು, ಒಂದೇ ಸಮಯದಲ್ಲಿ ಭಗವದ್ಗೀತೆಯ ಶ್ಲೋಕಗಳನ್ನ ಪಠಿಸಲಿದ್ದಾರೆ.

ಪ್ರಧಾನಿ ಮೋದಿ ಅವರ ಭೇಟಿಗೆ ಭದ್ರತಾ ವ್ಯವಸ್ಥೆ ಕಟ್ಟು ನಿಟ್ಟಾಗಿದ್ದು, ಮಠದ ಆವರಣದಲ್ಲಿ ಭಕ್ತರ ಸುರಕ್ಷತೆಗಾಗಿ ವಿಶೇಷ ಪಾಸ್ ವ್ಯವಸ್ಥೆ ಜಾರಿಗೆ ಮಾಡಲಾಗಿದೆ. ಮಠ ಪ್ರವೇಶದ ಮಾರ್ಗಗಳಲ್ಲಿ ನಿಗದಿತ ನಿಯಮಗಳನ್ನು ಪಾಲಿಸಬೇಕೆಂದು ಆಡಳಿತ ಮಂಡಳಿ ತಿಳಿಸಿದೆ. ಇನ್ನು, ಪ್ರಧಾನಿ ಮೋದಿ ಅವರು ಭಾಗಿಯಾಗಲಿರುವ ಲಕ್ಷ ಕಂಠ ಪಠಣ ಕಾರ್ಯಕ್ರಮಕ್ಕಾಗಿ ಜರ್ಮನ್ ತಂತ್ರಜ್ಞಾನದ ಪೆಂಡಾಲ್ ಅಳವಡಿಸಲಾಗಿದೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago