ಉಡುಪಿ: ಕೊನೆಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿ ಮತ್ತು ಬಿಜೆಪಿ ನಾಯಕರ ಒಳ್ಳೆಯ ವಿಚಾರಗಳನ್ನು ಸ್ವೀಕಾರ ಮಾಡಲು ಪ್ರಾರಂಭಿಸಿರುವುದು ಸಂತೋಷದ ವಿಚಾರ. ಪ್ರಮೋದ್ ಬಿಜೆಪಿ ಸೇರುವುದರ ಬಗ್ಗೆ ನಮ್ಮ ವಿರೋಧವಿಲ್ಲ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸ್ಪಷ್ಟಪಡಿಸಿದರು.
ಅವರು ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಮೋದ್ ಮಧ್ವರಾಜ್ ಅವರು ಇತ್ತೀಚೆಗೆ ಮೋದಿಯವರನ್ನು ಹೊಗಳಿದ ವಿಚಾರ ತಿಳಿಯಿತು. ಕೊನೆಗೂ ಅವರು ಬಿಜೆಪಿ ಮತ್ತು ಅದರ ನಾಯಕರ ಒಳ್ಳೆಯ ವಿಚಾರಗಳನ್ನು ಸ್ವೀಕಾರ ಮಾಡಿದ್ದಾರೆ. ಅವರು ಬಿಜೆಪಿಗೆ ಬರುವ ವಿಚಾರವನ್ನು ಅವರು ತೀರ್ಮಾನ ಮಾಡಬೇಕು ಆದರೆ ಅವರು ಬರಬೇಕೋ ಬೇಡವೋ ಎನ್ನುವುದರ ಕುರಿತು ನಮ್ಮ ನಾಯಕರು ಮತ್ತು ಕಾರ್ಯಕರ್ತರು ಆಲೋಚನೆ ಮಾಡುತ್ತಾರೆ.
ಬಿಜೆಪಿ ಸೇಪಡೆಯ ಕುರಿತು ಈ ಹಿಂದೆ ಎರಡು ಮೂರು ಬಾರಿ ನಮಗೆ ಕಹಿ ಅನುಭವ ಆಗಿದೆ. ದನ ಬಂದರೆ ಕರು ಬರುತ್ತೆ ಎಂದರು. ನಮಗೆ ಅವರ ಮಾನಸಿಕತೆ ಏನಿದೆ ಎನ್ನುವುದು ತಿಳಿದಿಲ್ಲ. ಅವರು ಬರುವುದಾದರೆ ನಮ್ಮ ಪಕ್ಷದ ಸಿದ್ದಾಂತಗಳನ್ನು ಒಪ್ಪಿಕೊಂಡು ಬಂದರೆ ಸ್ವಾಗತ ಇದೆ. ಆದರೆ ಪ್ರತಿ ಭಾರಿ ಅವರ ಮಾನಸಿಕತೆ ಬದಲಾವಣೆ ಆದರೆ ಅದನ್ನು ನಾವು ಒಪ್ಪಿಕೊಳ್ಳುವುದು ಸಾಧ್ಯವಿಲ್ಲ. ಹಾಗಂತ ಅವರನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇಲ್ಲಿನ ಸ್ಥಳೀಯ ಹಂತದ ನಾಯಕರು ಮತ್ತು ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿ ವರಿಷ್ಠರು ಕೂಡ ನಿರ್ಧಾರ ಮಾಡಬೇಕಾಗಿದೆ ಎಂದು ಅವರು ಹೇಳಿದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…