Featured

ಉಡುಪಿ : ಪ್ರಮೋದ್‌ ಪಕ್ಷ ಸೇರ್ಪಡೆಯಾಗಲು ಯಾವುದೇ ರೀತಿಯ ಹುದ್ದೆಯ ಕಂಡೀಷನ್‌ ಹಾಕಿಲ್ಲ  : ಕುಯಿಲಾಡಿ – Vishwanews24

ಪಕ್ಷದ ಸಿದ್ದಾಂತವನ್ನು ನಂಬಿ ಬರುವವರಿಗೆ ಪಕ್ಷದ ಗೇಟ್‌ ಯಾವತ್ತೂ ಮುಚ್ಚಿಲ್ಲ..

ಅವರನ್ನು ಯಾವಾಗ ಪಕ್ಷಕ್ಕೆ ಸೇರ್ಪಡೆಗೊಳಿಸಬೇಕು ಎನ್ನುವುದರ ಕುರಿತು ರಾಜ್ಯ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ..

ಉಡುಪಿ: ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಬಿಜೆಪಿ ಸೇರ್ಪಡೆ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಅಭಿಪ್ರಾಯ ಸಂಗ್ರಹಿಸಿ ರಾಜ್ಯ ವರಿಷ್ಠರಿಗೆ ಸಲ್ಲಿಸಲಾಗಿದ್ದು ಇನ್ನು ಮುಂದಿನ ನಿರ್ಧಾರ ಅವರಿಗೆ ಬಿಟ್ಟಿದ್ದು, ಪ್ರಮೋದ್‌ ಪಕ್ಷ ಸೇರ್ಪಡೆಯಾಗಲು ಯಾವುದೇ ರೀತಿಯ ಹುದ್ದೆಯ ಕಂಡೀಷನ್‌ ಹಾಕಿಲ್ಲ ಎಂದು ಉಡುಪಿ ಜಿಲ್ಲ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಹೇಳಿದರು.

ಅವರು ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ ಪಕ್ಷದ ಸಿದ್ದಾಂತವನ್ನು ನಂಬಿ ಬರುವವರಿಗೆ ಪಕ್ಷದ ಗೇಟ್‌ ಯಾವತ್ತೂ ಮುಚ್ಚಿಲ್ಲ ಆದರೆ ಯಾವುದೇ ಹುದ್ದೆಯ ನಿರೀಕ್ಷೆಯಿಲ್ಲದೆ ಬರುವ ಇಂಗಿತವನ್ನು ಮಾಜಿ ಸಚಿವರು ವ್ಯಕ್ತಪಡಿಸಿದ್ದು ಒಂದು ಹಂತದ ಮಾತುಕತೆ ರಾಜ್ಯಾಧ್ಯಕ್ಷರು ಮತ್ತು ಜಿಲ್ಲಾ ನಾಯಕರು ಸೇರಿಕೊಂಡು ಮಾಡಿದ್ದು ಅವರನ್ನು ಯಾವಾಗ ಪಕ್ಷಕ್ಕೆ ಸೇರ್ಪಡೆಗೊಳಿಸಬೇಕು ಎನ್ನುವುದರ ಕುರಿತು ರಾಜ್ಯ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ.

ಪ್ರಮೋದ್‌ ಪಕ್ಷಕ್ಕೆ ಬರುವ ವಿಚಾರದಲ್ಲಿ ಕಾರ್ಯಕರ್ತರಲ್ಲಿ ಅಸಮಾಧಾನ ಇದ್ದರೆ ಅದಕ್ಕೆ ರಾಜ್ಯ ವರಿಷ್ಠರು ಸೂಕ್ತ ವ್ಯವಸ್ಥೆ ಮಾಡಲಿದ್ದಾರೆ. ಒಬ್ಬ ವ್ಯಕ್ತಿ ಪಕ್ಷಕ್ಕೆ ಬರುವ ಸಮಯದಲ್ಲಿ ವಿರೋಧಗಳು ಸಹಜ ಆದರೆ ಬಳಿಕ ಎಲ್ಲರೂ ಜೊತೆಯಾಗಿ ಕೆಲಸ ಮಾಡಬೇಕು ಇದು ಬಿಜೆಪಿ ಪಕ್ಷದ ಸಿದ್ದಾಂತವಾಗಿದೆ ಎಂದರು.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

2 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

2 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

3 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago