ಉಡುಪಿ: ಪ್ರಯಾಣಿಕರು ಮಾಸ್ಕ್ ಧರಿಸದೆ ಪ್ರಯಾಣಿಸಿದಲ್ಲಿ ಬಸ್ಸುಗಳ ಪರವಾನಿಗೆ ರದ್ದು, ಮಾಲಿಕರ ವಿರುದ್ದ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ ಜಗದೀಶ್ -Vishwanews24

Featured, ಉಡುಪಿ

ಉಡುಪಿ: ಬಸ್ಸುಗಳಲ್ಲಿ ಪ್ರಯಾಣಿಕರು ಮಾಸ್ಕ್ ಧರಿಸದೆ ಪ್ರಯಾಣಿಸಿದಲ್ಲಿ ಬಸ್ಸುಗಳ ಪರವಾನಿಗೆ ರದ್ದು, ಮಾಲಿಕರ ವಿರುದ್ದ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ ಜಗದೀಶ್ -Vishwanews24

ಉಡುಪಿ: ಬಸ್ಸುಗಳಲ್ಲಿ ಪ್ರಯಾಣಿಕರು ಮಾಸ್ಕ್ ಧರಿಸದೆ ಪ್ರಯಾಣಿಸಿದಲ್ಲಿ – ಪರವಾನಿಗೆ ರದ್ದು, ಮಾಲಿಕರ ವಿರುದ್ದ ಪ್ರಕರಣ ದಾಖಲು
ಉಡುಪಿ: ಕೋವಿಡ್ -19 ಸೋಂಕಿನ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬಸ್ಸುಗಳಲ್ಲಿ ಮಾಸ್ಕ್ ಧರಿಸದೆ ಪ್ರಯಾಣಿಕರು ಕಂಡು ಬಂದಲ್ಲಿ ಬಸ್ಸುಗಳ ಪರವಾನಿಗೆ ರದ್ದು ಮಾಡಲು ಮತ್ತು ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ತಡೆಗೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಮಾರ್ಚ್ 15 ರಂದು ಮುಖ್ಯ ಮಂತ್ರಿ ಇವರ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದದಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್ -19 ಸೋಂಕಿನ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಪಾಡದಿರುವುದು ಹಾಗೂ ಮಾಸ್ಕ್ ಧರಿಸದಿರುವುದು ಹೆಚ್ಚುತ್ತಿದ್ದು, ಕೋವಿಡ್-19ರ ನಿಯಂತ್ರಣದಲ್ಲಿ ಹಿನ್ನಡೆಯಾಗುತ್ತಿರುವುದರ ಬಗ್ಗೆ ಎಚ್ಚರಿಕೆ ನೀಡಿರುತ್ತಾರೆ.ಈ ಬಗ್ಗೆ ಈಗಾಗಲೇ ಉಲ್ಲೇಖ(2)ರಂತ ನಿದೇಶನ ನೀಡಲಾಗಿರುತ್ತದೆ.

ಇದನ್ನೂ ಓದಿ : ಉಡುಪಿ : ಹೋಟೆಲ್ ದುರ್ಗಾ ಇಂಟರ್‌ನ್ಯಾಷನಲ್‌ನಲ್ಲಿ ವೇಶ್ಯಾವಾಟಿಕೆ ದಂಧೆ ; ಮೂವರ ಬಂಧನ -Vishwanews24

ಬಸ್ಸುಗಳಲ್ಲಿ ಡ್ರೈವರ್ ಕಂಡೆಕ್ಟರ್ ಗಳು ಹಾಗೂ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ,ಮಾಸ್ಕ್ ಧರಿಸದೇ ಇರುವ ಪ್ರಯಾಣಿಕರಿಗೆ ಬಸ್ ಗಳಲ್ಲಿ ಪ್ರವೇಶ ನೀಡಬಾರದಾಗಿಯೂ ಹಾಗೂ ಮಾಸ್ಕ್ ಧರಿಸದಿರುವುದು ಕಂಡು ಬಂದಲ್ಲಿ ಬಸ್ಸುಗಳ ಪರವಾನಿಗೆಯನ್ನು ರದ್ದು ಮಾಡಲು ಹಾಗೂ ಸಂಬಂಧಪಟ್ಟ ಬಸ್ಸಿನ ಮಾಲಿಕರ ಮೇಲೆ ಪ್ರಕರಣ ದಾಖಲಿಸಲು ಕ್ರಮ ವಹಿಸುವುದು ಅನಿವಾರ್ಯವಾದಿತು ಎಂದು ಸಂಬಂಧಪಟ್ಟವರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಇದನ್ನೂ ಓದಿ : ಕುಸ್ತಿ ಪಂದ್ಯದಲ್ಲಿ ಸೋಲು ; ಮನನೊಂದು ಕುಸ್ತಿಪಟು ರಿತಿಕಾ ಫೋಗಟ್ ಆತ್ಮಹತ್ಯೆಗೆ ಶರಣು -Vishwanews24