ಉಡುಪಿ: ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಮೆಸ್ಕಾಂ ಅಧಿಕಾರಿಗಳು ಉಡುಪಿ ಹಳೆ ಪ್ರವಾಸಿ ಮಂದಿರದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ.
ಉಡುಪಿ ಶಾಸಕರ ಮಧ್ಯಪ್ರವೇಶದ ಬಳಿಕ ತಾತ್ಕಾಲಿಕ ಪುನರ್ ಸಂಪರ್ಕ ನೀಡಿದ ಪ್ರಸಂಗ ನಡೆದಿದ್ದು, ರಾಜ್ಯ ಸರಕಾರ ದಿವಾಳಿಯಾಗಿದೆ ಎಂದು ಶಾಸಕ ಯತ್ಪಾಲ್ ಸುವರ್ಣ ಕಿಡಿಕಾರಿದ್ದಾರೆ.
ಬನ್ನಂಜೆಯಲ್ಲಿರುವ ಹಳೆ ಪ್ರವಾಸಿ ಮಂದಿರದ ವಿದ್ಯುತ್ ಬಿಲ್ ಬಾಕಿ ಇದ್ದು, ಬಿಲ್ ಪಾವತಿಸದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಮೆಸ್ಕಾಂ ತನ್ನ ನಿಯಮ ಪಾಲನೆ ಮಾಡಿತ್ತು. ಪ್ರವಾಸಿ ಮಂದಿರದಲ್ಲಿ ಇಬ್ಬರು ಪ್ರವಾಸಿಗರಿದ್ದು, ಕತ್ತಲೆಯಲ್ಲಿ ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಉಂಟಾಯಿತು.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಉಡುಪಿ ಶಾಸಕ ಯತ್ಪಾಲ್ ಸುವರ್ಣ, ಪ್ರವಾಸಿ ಮಂದಿರದ ಸಿಬ್ಬಂದಿಯಿಂದ ಮಾಹಿತಿ ಪಡೆದು ಜಿಲ್ಲಾಧಿಕಾರಿಗೆ ಕರೆ ಮಾಡಿ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ಬಳಿಕ ಮೆಸ್ಕಾಂ ಅಧಿಕಾರಿಗಳು ಆಗಮಿಸಿ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಶಾಸಕ ಯತ್ಪಾಲ್ ಸುವರ್ಣ ಬರೆದುಕೊಂಡಿದ್ದು, ಪಡುಬಿದ್ರೆ ಗ್ರಾಮ ಪಂಚಾಯತ್ ಕಚೇರಿ, ತೆಂಕನಿಡಿಯೂರು ಸರಕಾರಿ ಶಾಲೆಯ ವಿದ್ಯುತ್ ಕಡಿತಗೊಳಿಸಲು ಮೆಸ್ಕಾಂ ಮುಂದಾಗಿದೆ. ಸರಕಾರಿ ಕಚೇರಿಯ ವಿದ್ಯುತ್ ಬಿಲ್ ಕಟ್ಟಲೂ ಸರಕಾರದ ಬೊಕ್ಕಸದಲ್ಲಿ ಹಣವಿಲ್ಲವೆ? ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನಕ್ಕೆ ಇದಕ್ಕಿಂತ ನಿದರ್ಶನ ಬೇಕೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…