Featured

ಉಡುಪಿ ಪ್ರವಾಸಿ ಮಂದಿರದ ವಿದ್ಯುತ್ ಬಿಲ್ ಬಾಕಿ; ಪವರ್ ಕಟ್ ಮಾಡಿದ ಮೆಸ್ಕಾಂ – vishwanews24

ಉಡುಪಿ ಪ್ರವಾಸಿ ಮಂದಿರದ ವಿದ್ಯುತ್ ಬಿಲ್ ಬಾಕಿ; ಪವರ್ ಕಟ್ ಮಾಡಿದ ಮೆಸ್ಕಾಂ

ರಾಜ್ಯ ಸರಕಾರ ದಿವಾಳಿಯಾಗಿದೆ : ಯತ್ಪಾಲ್‌ ಸುವರ್ಣ ಆಕ್ರೋಶ

ಉಡುಪಿ: ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಮೆಸ್ಕಾಂ ಅಧಿಕಾರಿಗಳು ಉಡುಪಿ ಹಳೆ ಪ್ರವಾಸಿ ಮಂದಿರದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ.

ಉಡುಪಿ ಶಾಸಕರ ಮಧ್ಯಪ್ರವೇಶದ ಬಳಿಕ ತಾತ್ಕಾಲಿಕ ಪುನರ್‌ ಸಂಪರ್ಕ ನೀಡಿದ ಪ್ರಸಂಗ ನಡೆದಿದ್ದು, ರಾಜ್ಯ ಸರಕಾರ ದಿವಾಳಿಯಾಗಿದೆ ಎಂದು ಶಾಸಕ ಯತ್ಪಾಲ್‌ ಸುವರ್ಣ ಕಿಡಿಕಾರಿದ್ದಾರೆ.

ಬನ್ನಂಜೆಯಲ್ಲಿರುವ ಹಳೆ ಪ್ರವಾಸಿ ಮಂದಿರದ ವಿದ್ಯುತ್‌ ಬಿಲ್ ಬಾಕಿ ಇದ್ದು, ಬಿಲ್ ಪಾವತಿಸದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಮೆಸ್ಕಾಂ ತನ್ನ ನಿಯಮ ಪಾಲನೆ ಮಾಡಿತ್ತು. ಪ್ರವಾಸಿ ಮಂದಿರದಲ್ಲಿ ಇಬ್ಬರು ಪ್ರವಾಸಿಗರಿದ್ದು, ಕತ್ತಲೆಯಲ್ಲಿ ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಉಂಟಾಯಿತು.

ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಉಡುಪಿ ಶಾಸಕ ಯತ್ಪಾಲ್‌ ಸುವರ್ಣ, ಪ್ರವಾಸಿ ಮಂದಿರದ ಸಿಬ್ಬಂದಿಯಿಂದ ಮಾಹಿತಿ ಪಡೆದು ಜಿಲ್ಲಾಧಿಕಾರಿಗೆ ಕರೆ ಮಾಡಿ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ಬಳಿಕ ಮೆಸ್ಕಾಂ ಅಧಿಕಾರಿಗಳು ಆಗಮಿಸಿ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಶಾಸಕ ಯತ್ಪಾಲ್‌ ಸುವರ್ಣ ಬರೆದುಕೊಂಡಿದ್ದು, ಪಡುಬಿದ್ರೆ ಗ್ರಾಮ ಪಂಚಾಯತ್ ಕಚೇರಿ, ತೆಂಕನಿಡಿಯೂರು ಸರಕಾರಿ ಶಾಲೆಯ ವಿದ್ಯುತ್‌ ಕಡಿತಗೊಳಿಸಲು ಮೆಸ್ಕಾಂ ಮುಂದಾಗಿದೆ. ಸರಕಾರಿ ಕಚೇರಿಯ ವಿದ್ಯುತ್ ಬಿಲ್ ಕಟ್ಟಲೂ ಸರಕಾರದ ಬೊಕ್ಕಸದಲ್ಲಿ ಹಣವಿಲ್ಲವೆ? ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನಕ್ಕೆ ಇದಕ್ಕಿಂತ ನಿದರ್ಶನ ಬೇಕೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

9 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

9 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

10 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

10 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

11 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

11 hours ago