Featured

ಉಡುಪಿ:  ಪ್ರವೀಣ್ ನೆಟ್ಟಾರು ಪತ್ನಿಗೆ ಉದ್ಯೋಗ ನೀಡುವ ಮೂಲಕ ಮಾನವೀಯತೆ ಮೆರೆದ ನಮ್ಮ ಮುಖ್ಯಮಂತ್ರಿ : ರಮೇಶ್ ಕಾಂಚನ್ – Vishwanews24

ಉಡುಪಿ:  ಪ್ರವೀಣ್ ನೆಟ್ಟಾರು ಪತ್ನಿಗೆ ಉದ್ಯೋಗ ನೀಡುವ ಮೂಲಕ ಮಾನವೀಯತೆ ಮೆರೆದ ನಮ್ಮ ಮುಖ್ಯಮಂತ್ರಿ : ರಮೇಶ್ ಕಾಂಚನ್

ಉಡುಪಿ: ಕಳೆದ ವರ್ಷ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಅಂದಿನ ಬಿಜೆಪಿ ಸರಕಾರ ಅನುಕಂಪದ ಆಧಾರದಲ್ಲಿ ನೌಕರಿ ನೀಡಿದ್ದು ಸರಕಾರ ಬದಲಾದ ಹಿನ್ನಲೆಯಲ್ಲಿ ಕೆಲಸ ಕಳೆದುಕೊಂಡಿದ್ದಾರೆ ಎಂದು ವಾದಿಸುವ ಬಿಜೆಪಿಗರು ಯಾಕೆ ಅವರ ನೌಕರಿಯನ್ನು ಖಾಯಂ ಮಾಡಿರಲಿಲ್ಲ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪ್ರಶ್ನಿಸಿದ್ದಾರೆ.

ಸರಕಾರ ಬದಲಾದ ಬೆನ್ನಲ್ಲೇ ಹಿಂದಿನ ಸರಕಾರ ಮಾಡಿರುವ ಎಲ್ಲ ತಾತ್ಕಾಲಿಕ ನೇಮಕಾತಿಗಳನ್ನು ರದ್ದುಗೊಳಿಸಲಾಗಿದೆ. ನೂತನ ಸರಕಾರದ ಈ ಆದೇಶದಿಂದ ಅನುಕಂಪದ ಆಧಾರದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಪತ್ನಿಯು ನೌಕರಿ ಕಳೆದುಕೊಂಡಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಅದೇಷ್ಟೋ ಹಿಂದೂ ಯುವಕರ ಕೊಲೆ ನಡೆದಾಗ ಅವರ ಬಗ್ಗೆ ತಲೆ ಕೆಡಿಸದೆ ಕನಿಷ್ಠ ಪರಿಹಾರ ಕೂಡ ನೀಡದೆ ಇರುವ ಬಿಜೆಪಿಗರು ಪ್ರವೀಣ್ ನೆಟ್ಟಾರ್ ಪತ್ನಿಗೆ ತಾತ್ಕಲಿಕ ನೆಲೆಯಲ್ಲಿ ಉದ್ಯೋಗ ನೀಡಿ ಕೈ ತೊಳೆದುಕೊಂಡಿದ್ದಾರೆ. ಇದರಿಂದ ಪ್ರವೀಣ್ ನೆಟ್ಟಾರ್ ಬಗ್ಗೆ ಇರುವ ಬಿಜೆಪಿಯ ಕಾಳಜಿಯ ನಿಜರೂಪ ಬಯಲಾಗಿದೆ. ಆದರೆ ಮಾನವೀಯ ಗುಣದ ಸಿದ್ದರಾಮಯ್ಯ ಮತ್ತೆ ಪ್ರವೀಣ್ ನೆಟ್ಟಾರು ಪತ್ನಿಗೆ ಉದ್ಯೋಗ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಬಗ್ಗೆ ಸಹಿಸಲಾಗದೆ ಜನರಲ್ಲಿ ಗೊಂದಲ ಮೂಡಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಬಿಜೆಪಿ ಕೂಡ ಹಿಂದೆ ಹಲವಾರು ಯೋಜನೆಗಳನ್ನು ಘೋಷಣೆ ಮಾಡಿದ್ದು ಇಂದಿಗೂ ಕೇವಲ ಘೋಷಣೆಯಾಗಿಯೇ ಉಳಿದಿದೆ. ಅದ್ಯಾವುದೂ ಕೂಡ ಅನುಷ್ಠಾನಕ್ಕೆ ಬಂದಿಲ್ಲ ಎನ್ನುವುದನ್ನು ರಾಜ್ಯ ಹಾಗೂ ಜಿಲ್ಲೆಯ ಜನರು ಮರೆತಿಲ್ಲ. ಈಗಷ್ಠೇ ಪೂರ್ಣಪ್ರಮಾಣದ ಸಚಿವ ಸಂಪುಟ ರಚನೆಯಾಗಿದ್ದು ಅದಕ್ಕೂ ಮೊದಲೇ ಬಿಜೆಪಿಗರು ಗ್ಯಾರಂಟಿ ಕಾರ್ಡಿನ ವಿರುದ್ದ ಹೋರಾಟಕ್ಕೆ ಹೊರಟಿಸಿರುವುದು ವಿಪರ್ಯಾಸ ಎನ್ನಬಹುದು.

ತಾವು ಹಿಂದೆ ತಿರುಗಿ ನೋಡಿ ತಾವು ಚುನಾವಣೆ ಸಂದರ್ಭದಲ್ಲಿ ಘೋಷಿಸಿದ ಭರವಸೆಯನ್ನು ನೋಡಿದರೆ ಎಲ್ಲವೂ ಅರ್ಥವಾಗುತ್ತದೆ. ತಮ್ಮ ಅವಧಿಯ ಘೋಷಣೆಗಳನ್ನು ಬಾಕಿ ಇಟ್ಟುಕೊಂಡು ಕಾಂಗ್ರೆಸ್ ಪಕ್ಷದ ಗ್ಯಾರಂಟಿಯ ಬಗ್ಗೆ ಮಾತನಾಡಲು ತಮಗೆ ಯಾವುದೇ ನೈತಿಕತೆಯೂ ಇಲ್ಲ. ತಾವು ತಕ್ಷಣವೇ ಜನರಲ್ಲಿ ಗೊಂದಲ ಸೃಷ್ಟಿಸುವುದ್ದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷಕ್ಕೆ ಕೂಡ ಹೋರಾಟದ ಕಿಚ್ಚು ಇದ್ದು ಮುಂದೆ ಬಿಜೆಪಿಯು ಘೋಷಣೆ ಮಾಡಿದ ಭರವಸೆಗಳನ್ನು ಈಡೇರಿಸಲು ಹೋರಾಟ ಮಾಡಬೇಕಾದ ಪರಿಸ್ಥಿತಿ ಬಂದೀತು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

35 minutes ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

40 minutes ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

1 hour ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

1 hour ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

1 hour ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago