ಉಡುಪಿ: ಗೋಮಾತೆಯೊಂದು ದೇವಸ್ಥಾನದಲ್ಲಿ ನಡೆಯುವ ಪೂಜೆಯ ವೇಳೆ ಜನರ ಜೊತೆ ದೇವರಿಗೆ ತಲೆ ತಗ್ಗಿಸಿ ಪ್ರಾರ್ಥನೆ ಸಲ್ಲಿಸುವ ಪ್ರಸಂಗವೊಂದು ಅಚ್ಚರಿಗೆ ಕಾರಣವಾಗಿದೆ.
ಉಡುಪಿಯ ಪ್ರಸಿದ್ಧ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದಲ್ಲಿ ಹಸುವೊಂದು ನಿತ್ಯವೂ ಪೂಜೆ ಸಲ್ಲಿಸುತ್ತಿದೆ. ಈ ಗೋಮಾತೆ ನಿತ್ಯವೂ ಬ್ರಾಹ್ಮಿ ಮುಹೂರ್ತದಲ್ಲಿ ನಡೆಯುವ ಪೂಜೆಯ ಸಂದರ್ಭ ಶ್ರೀ ನಾಗ ದೇವರ ಕಟ್ಟೆಯ ಎದುರಿನ ಮೆಟ್ಟಿಲಿನ ಮಧ್ಯದಲ್ಲಿ ಶಿರಬಾಗಿ ನಮಿಸಿ ನಿಲ್ಲುತ್ತದೆ.
ಕಳೆದ ಹಲವು ದಿನಗಳಿಂದಲೂ ನಡೆಯುತ್ತಿರುವ ಈ ವಿದ್ಯಮಾನ ನೋಡಿದ ದೇಗುಲಕ್ಕೆ ಆಗಮಿಸುವ ಭಕ್ತರು ಬೆರಗಾಗಿದ್ದಾರೆ. ಪ್ರತಿ ದಿನ ಮುಂಜಾನೆ ದೇವಳದ ಶ್ರೀನಾಗ ದೇವರ ಕಟ್ಟೆಯ ಎದುರು ಬಂದು ನಿಲ್ಲುವ ಈ ಗೋವು ಅಪರಾಹ್ನದ ದೇಗುಲದಲ್ಲಿ ನಡೆಯುವ ಮಹಾಪೂಜೆಯವರೆಗು ಕೂಡ ನಿಂತ ಸ್ಥಳವನ್ನು ಬಿಟ್ಟು ತೆರಳದೇ ಇರುವುದು ಭಕ್ತರ ಆಶ್ಚರ್ಯಕ್ಕೆ ಕಾರಣವಾಗಿದೆ.
ಈ ಅಚ್ಚರಿಯ ಘಟನೆಯ ಬಗ್ಗೆ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದ ಭಕ್ತ ದಿವಾಕರ್ ಮಾತನಾಡಿ, ಕೆಲವು ಮೂಕಪ್ರಾಣಿಗಳು ಮನುಷ್ಯರು ಮಾಡುವುದನ್ನು ಅನುಕರಣೆ ಮಾಡುತ್ತವೆ. ಆದರೆ ಗೋವು ಆ ಜಾತಿಗೆ ಸೇರಿಲ್ಲ. ಗೋವು ಅನುಕರಣೆ ಮಾಡುವ ನಿದರ್ಶನ ನನ್ನ ಅನುಭವದ ಪ್ರಕಾರ ಇದೇ ಮೊದಲು. ಕುಂಭಾಸಿ ಸಿದ್ಧಿವಿನಾಯಕ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ದೇವರು. ಪ್ರತಿದಿನ ಇಲ್ಲಿ ದನ ದೇವರಿಗೆ ಭಕ್ತಿಯನ್ನು ಅರ್ಪಿಸುತ್ತಿದೆ. ಇದರಿಂದ ಕುಂಭಾಸಿ ಗಣಪತಿ ಮೂಕಪ್ರಾಣಿಗಳಿಗೂ ಒಲಿದಿದ್ದಾನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…