Featured

ಉಡುಪಿ : ಪ್ರಾಕೃತಿಕ ವಿಕೋಪಗಳಿಂದ ಉಂಟಾಗುವ ಪ್ರಾಣಹಾನಿಯಿಂದ ರಕ್ಷಿಸಿಕೊಳ್ಳಲು ಜಿಲ್ಲಾಡಳಿತದ ಸಲಹೆ ಸೂಚನೆಗಳು – vishwanews24

ಉಡುಪಿ : ಪ್ರಾಕೃತಿಕ ವಿಕೋಪಗಳಿಂದ ಉಂಟಾಗುವ ಪ್ರಾಣಹಾನಿಯಿಂದ ರಕ್ಷಿಸಿಕೊಳ್ಳಲು ಜಿಲ್ಲಾಡಳಿತದ ಸಲಹೆ ಸೂಚನೆಗಳು

 ಉಡುಪಿ: ಪ್ರಕೃತಿ ವಿಕೋಪಗಳಿಂದಾಗಿ ಜಿಲ್ಲೆಯಲ್ಲಿನ ಸಾರ್ವಜನಿಕರ ಮತ್ತು ಜಾನುವಾರುಗಳ ಪ್ರಾಣಹಾನಿಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡAತೆ ಸಲಹೆ ಹಾಗೂ ಸೂಚನೆಗಳನ್ನು ನೀಡಿದೆ.

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು: ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗುವುದು ಸೂಕ್ತವಲ್ಲ. ಗುಡುಗು–ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ. ಸುರಕ್ಷಿತವಾದ ಕಟ್ಟಡಗಳಲ್ಲಿ ಅಶ್ರಯ ಪಡೆಯಬೇಕು. ಬೆಟ್ಟ ಗುಡ್ಡಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಆಶ್ರಯ ಪಡೆಯಬೇಕು. ನೀರಿನ ಮೂಲಗಳಾದ ಕೆರೆ, ತೋಡು ಮತ್ತು ನದಿಗಳಿಂದ ದೂರವಿರಬೇಕು.

 ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು ಉತ್ತಮ. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯಬೇಕು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅವಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳಬೇಕು. ಗುಡುಗು ಮತ್ತು ಸಿಡಿಲಿನ ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ, ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳಬೇಕು. ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನಚ್ಛರಿಕೆಗಳನ್ನು ಕಾಮನ್ ಅಲರ್ಟಿಂಗ್ ಪ್ರೋಟೋಕಾಲ್ ಮುಖಾಂತರ ಬರುವ ಮೆಸೇಜ್‌ಗಳನ್ನು ಗಮನಿಸಿ, ಸುರಕ್ಷಿತ ಎನಿಸಿದ್ದಲ್ಲಿ ಮಾತ್ರ ಹೊರಗೆ ತೆರಳಬೇಕು. ವಿದ್ಯುತ್, ಟೆಲಿಫೋನ್ ಕಂಬಗಳು ಅಥವಾ ಮರಗಳು ಮಿಂಚನ್ನು ಆಕರ್ಷಿಸುವುದರಿಂದ ಇವುಗಳ ಕೆಳಗೆ ಅಶ್ರಯ ಪಡೆಯಬಾರದು. ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರಬೇಕು. 

  ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್‌ಗಳನ್ನು ಬಳಸುವುದು ಸೂಕ್ತವಲ್ಲ. ಕಬ್ಬಿಣದ ಸರಳುಗಳಿಂದ ಕೂಡಿದ ಕೊಡೆ/ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಬೇಕು ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿAದ ದೂರವಿರಬೇಕು. ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸಬೇಕು. ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾPಕುವುದು ಸೂಕ್ತ. ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ವಿದ್ಯುತ್ ಹರಿಯುವ ಸಾಧ್ಯತೆ ಇರುವುದರಿಂದ, ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು, ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು. 

ಗುಡುಗು ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡಬೇಕು. ಈ ಸಮಯದಲ್ಲಿ ಮೋಟರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳಲ್ಲಿ ಸಂಚಾರವನ್ನು ಮಾಡಬಾರದು. ಆಟದ ಮೈದಾನ, ಉದ್ಯಾನವನಗಳು, ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ಆದಷ್ಟು ತಪ್ಪಿಸಬೇಕು. ದೋಣಿ ವಿಹಾರ ಅಥವಾ ಈಜುತ್ತಿದ್ದರೆ, ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಬೇಕು. ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರಬೇಕು. ಕೆಲವು ಸಲ ಮಿಂಚಿನ ಹೊಡೆತದಿಂದಾಗಿ ಕಾಡಿಚ್ಚು ಸಂಭವಿಸುವ ಸಾಧ್ಯತೆ ಇರುವುದರಿಂದ ಅರಣ್ಯ ಪ್ರದೇಶದಿಂದ ಹಾಗೂ ಗಿಡ–ಮರಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸಬೇಕು.  

 ತುರ್ತು ಸೇವೆಗೆ ಶುಲ್ಕ ರಹಿತ: 1077 ಅಥವಾ ದೂರವಾಣೀ ಸಂಖ್ಯೆ: 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago