ಉಡುಪಿ, : ಸುಮಾರು 3 ಕೋಟಿಯಷ್ಟು ಹಣ ಜಿಲ್ಲಾಡಳಿತದ ಖಾತೆ ಯಲ್ಲಿದ್ದು ಇನ್ನು ಕೂಡಾ 10 ಕೋಟಿ ರೂ.ಯಷ್ಟು ಹಣವನ್ನು ಪ್ರಾಕೃತಿಕ ವಿಕೋಪದಿಂದ ಉಂಟಾದ ಹಾನಿಗೆ ತುರ್ತು ಕಾಮಗಾರಿಗಾಗಿ ಎನ್‌ಡಿಆರ್‌ಎಫ್ ಅಡಿಯಲ್ಲಿ ಮೂರು ದಿನಗಳಲ್ಲಿ ಬಿಡುಗಡೆ ಮಾಡಲಿದ್ದೇವೆ ಎಂದು ಗೃಹ ಸಚಿವ ಹಾಗು ಉಡುಪಿ ಉಸ್ತುವಾರಿ ಬಸವರಾಜು ಬೊಮ್ಮಾಯಿ ಅವರು ಹೇಳಿದರು.
ಮಂಗಳವಾರ ಪಡುಬಿದ್ರಿ ಬೀಚ್‌ನಲ್ಲಿ ಕಡಲ್ಕೊರೆತವನ್ನು ಪರಿಶೀಲಿಸಿದ ಅವರು ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನಡೆಸಿದ ವಿಡಿಯೋ ಕಾನ್ಫೆರೆನ್ಸ್ ಮೂಲಕ ರಾಜ್ಯದ ಮುಖ್ಯ ಸಮಸ್ಯೆಯಾದ ಕಡಲ್ಕೊರೆತ ಹಾಗೂ ಭೂ ಕುಸಿತದ ಬಗ್ಗೆ ತಿಳಿಸಲಾಗಿದೆ.
ಉಡುಪಿಯ ಕೆಲವು ಭಾಗಗಳು, ಕುಂದಾಪುರ ಬೈಂದೂರಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ತೀವ್ರ ಹಾನಿ ಉಂಟಾಗಿದ್ದು ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರಲ್ಲಿ ಚರ್ಚಿಸಲಾಗಿದೆ. ಸುಮಾರು ೩ ಕೋಟಿಯಷ್ಟು ಹಣ ಜಿಲ್ಲಾಡಳಿತದ ಖಾತೆ ಯಲ್ಲಿದ್ದು ಇನ್ನು ಕೂಡಾ ೧೦ ಕೋಟಿ ರೂ. ಯಷ್ಟು ಹಣವನ್ನು ಪ್ರಾಕೃತಿಕ ವಿಕೋಪದಿಂದ ಉಂಟಾದ ಹಾನಿಗೆ ತುರ್ತು ಕಾಮಗಾರಿಗಾಗಿ ಎನ್‌ಡಿಆರ್‌ಎಫ್ ಅಡಿಯಲ್ಲಿ ಮೂರು ದಿನಗಳಲ್ಲಿ ಬಿಡುಗಡೆ ಮಾಡಲಿದ್ದೇವೆ ಎಂದು ಹೇಳಿದ್ದಾರೆ.
ಪಡುಬಿದ್ರಿ ಬೀಚ್‌ನಲ್ಲಿ ಕಡಲ್ಕೊರೆತವನ್ನು ಪರಿಶೀಲನೆ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ ಜಗದೀಶ್, ಎಸ್‌ಪಿ ವಿಷ್ಣುವರ್ಧನ್, ಜಿ. ಪಂ. ಸಿಇಓ ಪ್ರೀತಿ ಗೆಹ್ಲೋಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಜಿ.ಪಂ. ಸದಸ್ಯೆ ಗೀತಾಂಜಲಿ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಕುಯ್ಲಾಡಿ ಸುರೇಶ್ ನಾಯಕ್, ಜಿ ಪಂಚಾಯತ್ ಅಧ್ಯಕ್ಷ ದಿನಕರ್ ಬಾಬು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…