Featured

ಉಡುಪಿ : ಪ್ರಾಕೃತಿಕ ವಿಕೋಪ ಸಮಸ್ಯೆ ಕುರಿತು ಜಿಲ್ಲಾಡಳಿತದ ವಾಟ್ಸ್ಆಪ್ ಸಂಖ್ಯೆಗೆ ಮಾಹಿತಿ ನೀಡಿ -Vishwanews24

ಉಡುಪಿ : ಪ್ರಾಕೃತಿಕ ವಿಕೋಪ ಸಮಸ್ಯೆ ಕುರಿತು ಜಿಲ್ಲಾಡಳಿತದ ವಾಟ್ಸ್ಆಪ್ ಸಂಖ್ಯೆಗೆ ಮಾಹಿತಿ ನೀಡಿ

ಉಡುಪಿ, : ಜಿಲ್ಲೆಯಲ್ಲಿ ಮಳೆಗಾಲದ ಸಮಯದಲ್ಲಿ ಉಂಟಾಗುವ ನೆರೆ ಪ್ರವಾಹ, ಮನೆ ಹಾನಿ, ಮೂಲಭೂತ ಸೌಕರ್ಯಗಳ ಹಾನಿ ಹಾಗೂ ಇನ್ನಿತರ ಯಾವುದೇ ಸಮಸ್ಯೆಗಳ ಬಗ್ಗೆ ಮಾಹಿತಿಯನ್ನು ಸಾರ್ವಜನಿಕರು ಛಾಯಾಚಿತ್ರದೊಂದಿಗೆ ಜಿಲ್ಲಾಡಳಿತದ ಗಮನಕ್ಕೆ ತಂದು, ಆ ಮೂಲಕ ಸಂಬAಧಪಟ್ಟ ಇಲಾಖೆಯ ಮುಖ್ಯಸ್ಥರ ಗಮನಕ್ಕೆ ತರುವುದರೊಂದಿಗೆ ಕ್ಷಿಪ್ರಗತಿಯಲ್ಲಿ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಜಿಲ್ಲಾಡಳಿತವು ದೂರವಾಣಿ ಸಂಖ್ಯೆಯೊoದಿಗೆ ವಾಟ್ಸ್ಅಪ್ ಸಂಖ್ಯೆಯನ್ನು 9880831516 ಆರಂಭಗೊಳಿಸಿದ್ದು, ಇದರ ಸದುಪಯೋಗವನ್ನು ಪಡೆಯುವುದರೊಂದಿಗೆ ಮಾನ್ಸೂನ್ ಸಂಧರ್ಭದಲ್ಲಿ ಎದುರಾಗುವ ಸಮಸ್ಯೆಗಳಿಗೆ ಸಕಾಲದಲ್ಲಿ ಪರಿಹಾರ ಕಾರ್ಯಕೈಗೊಳ್ಳಲು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸುವಂತೆ ಕೋರಿದೆ.

ಸಾರ್ವಜನಿಕರು ವಾಟ್ಸ್ಅಪ್ ಮೂಲಕ ಯಾವುದೇ ಸಮಸ್ಯೆಗಳಿಗೆ ಸಂಬAಧಿಸಿದ ವೀಡಿಯೋ, ಛಾಯಾಚಿತ್ರಗಳನ್ನು ಕಳುಹಿಸುವ ಸಂಧರ್ಭದಲ್ಲಿ ಸೂಕ್ತ ಜಿ.ಪಿ.ಎಸ್ ನೊಂದಿಗಿನ ಛಾಯಾಚಿತ್ರ/ ವೀಡಿಯೋ, ಘಟನೆ ನಡೆದ ಸ್ಧಳದ ಖಚಿತ ಮಾಹಿತಿ, ದಿನಾಂಕ ಹಾಗೂ ಸಮಯದೊಂದಿಗೆ, ಘಟಿಸಿರುವ ಸಮಸ್ಯೆಗಳ ಬಗ್ಗೆ ಚುಟುಕಾದ ವಿವರ ಹಾಗೂ ಯಾವ ಇಲಾಖೆಗಳಿಂದ, ಕ್ರಮ ಕೈಗೊಳ್ಳಬೇಕಾಗಿರುತ್ತದೆ ಎಂಬ ಮಾಹಿತಿಯನ್ನು ನಮೂದಿಸಿದ್ದಲ್ಲಿ ತಿಳಿಸಿರುವ ಸಮಸ್ಯೆಗಳ ಕುರಿತು, ವಿಳಂಬರಹಿತವಾಗಿ ಜರೂರಾದ ಕ್ರಮವಹಿಸಲು ಸಾಧ್ಯವಾಗುತ್ತದೆ.

ಪ್ರಸ್ತುತ ಮಳೆಗಾಲದ ಸಂಧರ್ಭದಲ್ಲಿ ಸಂಭವಿಸಬಹುದಾದ ಅವಘಡಗಳು, ಸಾರ್ವಜನಿಕರು ಎದುರಿಸುವ ತೊಂದರೆಗಳು, ಇತರ ಅನಾನುಕೂಲಗಳ ಕುರಿತು ಹಾಗೂ ಪ್ರಾಕೃತಿಕ ವಿಕೋಪಕ್ಕೆ ಸಂಬAಧಿಸಿದ ಯಾವುದೇ ಸಮಸ್ಯೆಗಳಿಗೆ ಪರಿಹಾರವನ್ನು ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರು ದೂರುಗಳನ್ನು ಸಲ್ಲಿಸಲು, ಮಾಹಿತಿಯನ್ನು ಪಡೆಯಲು ಅಥವಾ ಇನ್ನಾವುದೇ ರೀತಿಯಲ್ಲಿ ತುರ್ತು ಸಂಧರ್ಭದಲ್ಲಿ ಜಿಲ್ಲಾಡಳಿತದ ನೆರವನ್ನು ಪಡೆಯುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ದಿನದ 24 ಗಂಟೆಗಳ ಕಾಲ ಕಾರ್ಯಾಚರಿಸುವ ಟೋಲ್ ಫ್ರೀ ಸಂಖ್ಯೆ ( 24*7 ) ಕಂಟ್ರೋಲ್ ರೂಂ – 1077 ಹಾಗೂ ದೂರವಾಣಿ ಸಂಖ್ಯೆ : 0820-2574802 ಪ್ರಸ್ತುತ ಸಾರ್ವಜನಿಕರ ಸೇವೆಗೆ ಚಾಲ್ತಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

15 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

16 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

16 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

16 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

17 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago