Featured

ಉಡುಪಿ:  ಪ್ರಾಧಿಕಾರದಿಂದ ಅಂತಿಮ ಒಪ್ಪಿಗೆ ಸಿಕ್ಕ ಕೂಡಲೇ ರಾಜ್ಯದಲ್ಲಿ 2 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ : ಸಿಎಂ ಬೊಮ್ಮಾಯಿ  – ವಿಶ್ವನ್ಯೂಸ್24

ಉಡುಪಿ: ಪ್ರಾಧಿಕಾರದಿಂದ ಅಂತಿಮ ಒಪ್ಪಿಗೆ ಸಿಕ್ಕ ಕೂಡಲೇ ರಾಜ್ಯದಲ್ಲಿ 2 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ : ಸಿಎಂ ಬೊಮ್ಮಾಯಿ  – ವಿಶ್ವನ್ಯೂಸ್24

ಉಡುಪಿ: ರಾಜ್ಯದಲ್ಲಿ 2 ರಿಂದ 18 ವರ್ಷದೊಳಗಿನವರಿಗೆ ಕೋವಿಡ್ ಲಸಿಕೆ ಹಾಕಲು ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದಿಂದ ಅಂತಿಮ ಪ್ರಮಾಣಪತ್ರದ ನಿರೀಕ್ಷೆಯಲ್ಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬುಧವಾರ ಉಡುಪಿಯಲ್ಲಿ ಮಾತನಾಡಿದ ಅವರು, ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಲಸಿಕೆ ಹಾಕಲು ಕೇಂದ್ರದಿಂದ ಅನುಮತಿ ಸಿಕ್ಕ ಕೂಡಲೇ ಲಸಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದರು.

ಈಗಾಗಲೇ ರಾಜ್ಯದಲ್ಲಿ ಮೊದಲ ಡೋಸ್ ಲಸಿಕೆ ಹಾಕುವಲ್ಲಿ ಶೇ 82ರಷ್ಟು ಸಾಧನೆಯಾಗಿದ್ದು, ಎರಡನೇ ಡೋಸ್ ಲಸಿಕೆಯಲ್ಲಿ ಶೇ 36ರಿಂದ 37 ರಷ್ಟು ಗುರಿ ಮುಟ್ಟಲಾಗಿದೆ. ಡಿಸೆಂಬರ್ ಅಂತ್ಯಕ್ಕೆ ಶೇ 90ರಷ್ಟು ಮೊದಲ ಡೋಸ್ ಹಾಗೂ ಶೇ 70ರಷ್ಟು ಎರಡನೇ ಡೋಸ್ ಲಸಿಕೆ ಹಾಕಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಈಗಾಗಲೇ ಜಾರಿಯಲ್ಲಿದೆ. ಮತಾಂತರ ನಿಷೇಧ ಕಾಯ್ದೆಜಾರಿ ಬಗ್ಗೆ ಚಿಂತನೆ ನಡೆದಿದೆ. ಈ ಸಂಬಂಧ ಬೇರೆ ರಾಜ್ಯಗಳಲ್ಲಿರುವ ಮತಾಂತರ ನಿಷೇಧ ಕಾನೂನುಗಳನ್ನು ಅಧ್ಯಯನ ಮಾಡಿ, ಕಾಯ್ದೆ ಜಾರಿಗೆ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.

 

Vishwa News 24

Recent Posts

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

54 minutes ago

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ – vishwanews24

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…

1 hour ago

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು – vishwanews24

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್‌ಯುವಿ  ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…

1 hour ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…

1 hour ago

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…

2 hours ago

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago