Featured

ಉಡುಪಿ : ಪ್ರಿಯಾಂಕರನ್ನು ಬಂಧ ಮುಕ್ತ ಗೊಳಿಸದಿದ್ದರೆ ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಉಗ್ರ ಹೋರಾಟ – Vishwanews24

ಉಡುಪಿ : ಪ್ರಿಯಾಂಕರನ್ನು ಬಂಧ ಮುಕ್ತ ಗೊಳಿಸದಿದ್ದರೆ ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಉಗ್ರ ಹೋರಾಟ – Vishwanews24

ಉಡುಪಿ: ಕೇಂದ್ರ ಸರಕಾರದ ರೈತ ವಿರೋಧಿ 3 ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕಳೆದ ಸುಮಾರು 425 ದಿನಗಳಿಂದ ಅಹಿಂಸಾತ್ಮಕ ಪ್ರತಿಭಟನೆ ಮಾಡುತ್ತಿದ್ದರೂ ಕೇಂದ್ರ ಸರಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸಿಲ್ಲ.

ಈ ನಡುವೆ ರೈತರು ಉತ್ತರ ಪ್ರದೇಶದ ಲಖೀಮ್ ಪುರ ಖೇರಿಯಲ್ಲಿ ರೈತ ಪ್ರತಿಭಟನೆ ವೇಳೆ, ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಅಶೀಶ್ ಮಿಶ್ರಾ ರೈತರ ಮೇಲೆಯೇ ಕಾರು ಚಲಾಯಿಸಿ ನಾಲ್ವರು ರೈತರು ಮೃತಪಟ್ಟಿದ್ದು, ಮೃತ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲು ತೆರಳಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಯವರನ್ನು ಸರಕಾರ ಬಂಧಿಸಿರುವುದು ಖಂಡನೀಯ.

ಉತ್ತರ ಪ್ರದೇಶ ಸರಕಾರ ಪ್ರಿಯಾಂಕರನ್ನು ಕೂಡಲೇ ಬಂಧಮುಕ್ತ ಗೊಳಿಸದಿದ್ದರೆ ಜಿಲ್ಲಾ ಕಾಂಗ್ರೆಸ್‌ನಿಂದ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲು, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು ಅವರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಮಂಗಳೂರು : ನರ್ಸಿಂಗ್ ವಿಧ್ಯಾರ್ಥಿನಿ ಆತ್ಮಹತ್ಯೆ – Vishwanews24

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ವೆರೋನಿಕಾ ಕರ್ನೇಲಿಯೋ, ನವೀನ್‌ಚಂದ್ರ ಜೆ. ಶೆಟ್ಟಿ, ಶ್ಯಾಮಲ ಭಂಡಾರಿ, ಅಲೆವೂರು ಹರೀಶ್ ಕಿಣಿ, ಡಾ ಸುನಿತಾ ಶೆಟ್ಟಿ, ಮಂಜುನಾಥ ಪೂಜಾರಿ, ಸದಾಶಿವ ದೇವಾಡಿಗ, ದಿನಕರ್ ಹೇರೂರು, ಶಂಕರ್ ಕುಂದರ್, ಸಂಪಿಗಹಾಡಿ ಸಂಜೀವ ಶೆಟ್ಟಿ, ನೀರೆ ಕೃಷ್ಣ ಶೆಟ್ಟಿ, ಬಿಪಿನ್‌ಚಂದ್ರ ಪಾಲ್, ಭಾಸ್ಕರ್ ರಾವ್ ಕಿದಿಯೂರು, ದೇವಾನಂದ ಶೆಟ್ಟಿ, ದೇವಕಿ ಸಣ್ಣಯ್ಯ, ಕೀರ್ತಿ ಶೆಟ್ಟಿ, ಹಬೀಬ್ ಆಲಿ, ಕಿಶೋರ್ ಎರ್ಮಾಳ್, ಗೀತಾ ವಾಗ್ಳೆ, ಜ್ಯೋತಿ ಹೆಬ್ಬಾರ್, ರೋಶನಿ ಒಲಿವರ್, ಶಶಿಧರ ಶೆಟ್ಟಿ ಎಲ್ಲೂರು, ಬಿ. ಭುಜಂಗ ಶೆಟ್ಟಿ. ಡೆರಿಕ್ ಡಿಸೋಜಾ, ಅಖಿಲೇಶ್ ಕೋಟ್ಯಾನ್, ಉದ್ಯಾವರ ನಾಗೇಶ್ ಕುಮಾರ್, ಹರೀಶ್ ಶೆಟ್ಟಿ ಪಾಂಗಾಳ, ಜಯರಾಮ್ ನಾಯ್ಕ್, ರೋಶನ್ ಶೆಟ್ಟಿ, ಲೂಯಿಸ್ ಲೋಬೊ, ಗಣೇಶ್ ಪೂಜಾರಿ, ಮೀನಾಕ್ಷಿ ಮಾಧವ ಬನ್ನಂಜೆ, ಯತೀಶ್ ಕರ್ಕೇರಾ, ಸೂರ್ಯ ಸಾಲ್ಯಾನ್, ಶಾಂತಿ ಪಿರೇರಾ, ಚಂದ್ರಾವತಿ ಭಂಡಾರಿ, ಸುಗಂಧಿ ಶೇಖರ್, ಅನಿತಾ ಡಿ’ಸೋಜಾ, ಸೀಮಾ ಮಾರ್ಗರೇಟ್, ನತಾಲಿಯಾ ಮಾರ್ಟಿಸ್, ಹಮದ್, ಲಕ್ಷೀಶ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

3 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

3 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

3 days ago