Featured

ಉಡುಪಿ : ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರ ಧ್ವಜಗಳ ಬಳಕೆ ನಿಷೇಧ – vishwanews24

ಉಡುಪಿ : ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರ ಧ್ವಜಗಳ ಬಳಕೆ ನಿಷೇಧ

ಉಡುಪಿ : ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿರುತ್ತದೆ.

ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಭಾರತ ಸರ್ಕಾರ ಇವರ ಅಧಿಸೂಚನೆಯಲ್ಲಿಯೂ ಸಹ ಏಕ ಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ಪ್ಲಾಸ್ಟಿಕ್ ಧ್ವಜಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇದಿಸಲಾಗಿರುತ್ತದೆ.

ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ನಿರ್ದೇಶನದಂತೆ ರಾಷ್ಟ್ರೀಯ ಯ ಗೌರವ ಕಾಯ್ದೆ, 1971 ಮತ್ತು ಭಾರತದ ಧ್ವಜ ಸಂಹಿತೆ 2002 ರಡಿ ಎಲ್ಲಾ ಸರ್ಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕರು ಪ್ರಮುಖ ರಾಷ್ಟ್ರೀಯ ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳ ಸಂದರ್ಭಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸಬಾರದು. ಪ್ಲಾಸ್ಟಿಕ್ ಬಾವುಟಗಳನ್ನು ಬಳಸುವ ಬದಲು ಕಾಗದ ಮತ್ತು ಬಟ್ಟೆಗಳಿಂದ ತಯಾರಿಸಿದ ಬಾವುಟಗಳನ್ನು ಬಳಸಬೇಕು ಹಾಗೂ ಸದರಿ ಕಾರ್ಯಕ್ರಮಗಳ ನಂತರ ಉಪಯೋಗಿಸಿದ ಧ್ವಜಗಳನ್ನು ಧ್ವಜದ ಘನತೆಗೆ ಅನುಗುಣವಾಗಿ ವಿಲೇವಾರಿ ಮಾಡಲು ಕ್ರಮಕೈಗೊಳ್ಳಬೇಕು.

ಈ ನಿರ್ದೇಶನವನ್ನು ಉಲ್ಲಂಘಿಸಿದವರ ವಿರುದ್ಧ ಅಪರಾಧದ ಸ್ವರೂಪಕ್ಕೆ ಅನುಗುಣವಾಗಿ ಪರಿಸರ (ಸಂರಕ್ಷಣೆ) ಕಾಯ್ದೆ, 1986 ರ ಸೆಕ್ಷನ್ 19 ರ ಅನ್ವಯ ಪ್ರದತ್ತವಾಗಿರುವ ಅಧಿಕಾರದಂತೆ ಉಲ್ಲಂಘಿಸಿದವರ ಮೇಲೆ ಆಯಾ ವ್ಯಾಪ್ತಿಯಲ್ಲಿ ಬರುವ ನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ಹೂಡಲು ಕರ್ನಾಟಕ ಸರ್ಕಾರದ ಅಧಿಸೂಚನೆ ಸಂಖ್ಯೆ: ಅಪಜೀ 17 ಇಪಿಸಿ 2012, ಬೆಂಗಳೂರು, ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago