Featured

ಉಡುಪಿ: ಪ.ಜಾತಿ ಮತ್ತು ಪ.ಪಂಗಡದ ಗಂಗಾ ಕಲ್ಯಾಣ ಫಲಾನುಭವಿಗಳಿಗೆ 1700 ಕೊಳವೆ ಬಾವಿ ನಿರ್ಮಾಣಕ್ಕೆ ನೇರ ಹಣ ಪಾವತಿ : ಸಚಿವ ಕೋಟ ಶ್ರೀನಿವಾಸ ಪೂಜಾರಿ – Vishwanews24

ಉಡುಪಿ: ಪ.ಜಾತಿ ಮತ್ತು ಪ.ಪಂಗಡದ ಗಂಗಾ ಕಲ್ಯಾಣ ಫಲಾನುಭವಿಗಳಿಗೆ 1700 ಕೊಳವೆ ಬಾವಿ ನಿರ್ಮಾಣಕ್ಕೆ ನೇರ ಹಣ ಪಾವತಿ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಸಮಾಜ ಕಲ್ಯಾಣ ಇಲಾಖೆ , ಅಂಬೇಡ್ಕರ್ ಅಭಿವೃಧ್ದಿ ನಿಗಮ ಸೇರಿದಂತೆ ೭ ವಿವಿಧ ನಿಗಮಗಳ ಮೂಲಕ ಗಂಗಾ ಕಲ್ಯಾಣ ಯೋಜನೆಯಡಿ ಒಟ್ಟು ೧೭೦೦೦ ಕೊಳವೆ ಬಾವಿಗಳನ್ನು ಕೊರೆಯಲು ಹಣವನ್ನು ರೈತರ ಖಾತೆಗೆ ನೇರವಾಗಿ ವರ್ಗಾಯಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.

ಅವರು ಅನಾರೋಗ್ಯದ ಕಾರಣ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು , ಅಲ್ಲಿದಂದಲೇ ಇಂದು ಸಮಾಜ ಕಲ್ಯಾಣ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಕುರಿತಂತೆ ವೀಡಿಯೋ ಕಾನ್ಫ್ರೆನ್ಸ್ ಮೂಲಕ ನಡೆಸಿದ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ.ಜಾತಿ ಮತು ಪಂಗಡದ ರೈತರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿಗಳನ್ನು ೨೦೨೨-೨೩ ನೇ ಸಾಲು ಸೇರಿದಂತೆ ಬಾಕಿ ಉಳಿದ ಹಿಂದಿನ ಸಾಲಿನಲ್ಲಿ ಆಯ್ಕೆಯಾದ ಒಟ್ಟು ೧೭೦೦೦ ಕ್ಕೂ ಹೆಚ್ಚು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ೧೧೧೫ ಕೋಟಿ ರೂ ಗಳನ್ನು ವರ್ಗಾವಣೆಗೊಳಿಸಲಾಗುತ್ತಿದೆ ಇದಕ್ಕೆ ಅಗತ್ಯವಿರುವ ಡಿಬಿಟಿ ತಂತ್ರಾAಶವನ್ನು ಇಲಾಖೆವತಿಯಿಂದ ಸಿದ್ದಪಡಿಸಿ ಇ ರೂಪಿ ಮೂಲಕ ಪಾವತಿಸಲಾಗುವುದು ಎಂದರು.

ಮಂಗಳೂರು : ಕುಕ್ಕೆ ಶ್ರೀ ಸುಬ್ರಹಣ್ಯ ಚಂಪಾ ಷಷ್ಠಿ ಮಹೋತ್ಸವ – ನ.28, 29ರಂದು ಮದ್ಯದಂಗಡಿ ಬಂದ್-ಡಿಸಿ ರವಿಕುಮಾರ್ ಆದೇಶ – Vishwanews24

ಫಲಾನುಭವಿಗಳು ಇಲಾಖೆವತಿಯಿಂದ ನೊಂದಾಯಿತ ಸಂಸ್ಥೆಗಳ ಮೂಲಕ ಕೊಳವೆ ಬಾವಿಗಳನ್ನು ಕೊರೆಸಲು ಹಾಗೂ ತಮಗೆ ಅನುಕೂಲವಾಗುವ ಪಂಪ್‌ಸೆಟ್ ಗಳನ್ನು ಖರೀದಿ ಮಾಡಬಹುದಾಗಿದ್ದು, ಇದರಿಂದಾಗಿ ಯೋಜನೆಯ ಅನುಷ್ಠಾನದ ವಿಳಂಬತೆಯನ್ನು ತಡೆಯಲು ಹಾಗೂ ಪಾರದರ್ಶಕತೆಗೆ ಒತ್ತು ನೀಡಿದಂತಾಗುತ್ತದೆ ಎಂದರು.

ಈಗಾಗಲೇ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಪಟ್ಟಿಯನ್ನು ಜಿಲ್ಲೆಗೆ ವರ್ಗಾಯಿಸಲಾಗಿದ್ದು, ಸಮಿತಿಯು ಅರ್ಹ ಫಲಾನುಭವಿಗಳನ್ನು ನವೆಂಬರ್ ಆಂತ್ಯದ ಒಳಗೆ ಆಯ್ಕೆ ಮಾಡಲಿದೆ ಎಂದರು.

ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಬೆಳಗಾವಿ, ಕಲಬುರುಗಿ, ಧಾರವಾಡ, ದ.ಕನ್ನಡ ಮೈಸೂರು ಜಿಲ್ಲಾ ಕೇಂದ್ರಗಳಲ್ಲಿ ವಿದ್ಯಾರ್ಥಿನಿಲಯಗಳಿಗೆ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚಿದ್ದು ವಿದ್ಯಾರ್ಥಿನಿಲಯಗಳ ಕೊರತೆ ಹಿನ್ನಲೆಯಲ್ಲಿ ದೀನ ದಯಾಳ್ ಉಪಾಧ್ಯಾಯ ಸೌಹಾರ್ದತಾ ವಿದ್ಯಾರ್ಥಿ ನಿಲಯಗಳನ್ನು ಬಾಡಿಗೆ ಕಟ್ಟಡಗಳಲ್ಲಿ ಈಗಾಗಲೇ ಪ್ರಾರಂಭಿಸಲಾಗಿದೆ. ಇವುಗಳಿಗೆ ಪ.ಜಾತಿ., ಪ.ಪಂಗಡ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತ ಒಳಗೊಂಡ ಎಲ್ಲಾ ಸಮುದಾಯಗಳಿಗೆ ಅವಕಾಶ ಕಲ್ಪಿಸಿದೆ ಇದಕ್ಕೆ ಅಗತ್ಯವಿರುವ ಸ್ವಂತ ಕಟ್ಟಡ ನಿರ್ಮಾಣವನ್ನು ಶೀಘ್ರದಲ್ಲಿಯೇ ನಿರ್ಮಿಸಲಾಗುವುದು ಎಂದರು.

ಉಳ್ಳಾಲ: ಯಕ್ಷಗಾನದ ಯುವ ಭಾಗವತ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣು – Vishwanews24

ಸ0ವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್ ಅವರು ಕರ್ನಾಟಕಕ್ಕೆ ಭೇಟಿ ನೀಡಿರುವ ಹಲವು ಸ್ಥಳಗಳನ್ನು ಗುರುತಿಸಿ ಅಭಿವೃದ್ದಿಪಡಿಸಲು ಸರ್ಕಾರ ಈಗಾಗಲೇ ಘೋಷಿಸಿದ್ದು,ಅವರು ಭೇಟಿ ನೀಡಿರುವ ಸ್ಥಳಗಳಾದ ಬೆಳಗಾವಿ ,ನಿಪ್ಪಾಣಿ, ಚಿಕ್ಕೋಡಿ, ವಿಜಯಪುರ, ಬೆಂಗಳೂರಿನ ಸದಾಶಿವ ನಗರ ಹಾಗೂ ಫೇಜರ್ ಟೌನ್ , ಹೊಳೆನರಸೀಪುರದ ರೈಲ್ವೆ ನಿಲ್ದಾಣ, ಹಾಸನ , ಕೋಲಾರದ ಕೆ.ಜಿಎಫ್, ಕಲಬುರ್ಗಿಯ ಚಿತ್ತಾಪುರ ತಾಲೂಕಿನ ವಾಡಿ ರೈಲ್ವೆ ನಿಲ್ದಾಣ ಹಾಗೂ ಧಾರವಾಢ ನಗರಗಳನ್ನು ಗುರುತಿಸಿ ಅಭಿವೃದ್ದಿಪಡಿಸಲು ೨೦ ಕೋಟಿ ರೂ ಗಳನ್ನು ಆಯಾ ಜಿಲ್ಲಾಧಿಕಾರಿಗಳಿಗೆ ವರ್ಗಾಯಿಸಲಾಗಿದ್ದು,ಹೆಚ್ಚುವರಿ ಅನುದಾನದ ಅಗತ್ಯವಿದ್ದಲ್ಲಿ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದರು.

ಪ.ಜಾತಿ ಮತ್ತು ಪಂಗಡದ ಮಠಗಳ ಅಭಿವೃಧ್ದಿಗೆ ಮುಖ್ಯಮಂತ್ರಿಗಳು ಈಗಾಗಲೇ ವಿಶೇಷ ನೆರವನ್ನು ಘೋಷಿಸಿದ್ದು , ರಾಜ್ಯದ ೧೨ ಮಠಗಳಿಗೆ ೨೨ ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ, ಈ ಮಠಗಳ ಆಭಿವೃದ್ಧಿ ಕಾರ್ಯಗಳನ್ನು ಶೀಘ್ರದಲ್ಲಿ ಕೈಗೊಳ್ಳಬೇಕು ಎಂದು ತಿಳಿಸಿದರು.
ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವಂತೆ ಐ.ಐ.ಎಂ.ಬಿ ಮೂಲಕ ೩೦೦ ಮಹಿಳಾ ಪದವೀಧರರಿಗೆ ಉದ್ಯಮ ಶೀಲತಾ ತರಬೇತಿ ನೀಡಲಾಗುತ್ತಿದೆ. ಇದರಿಂದ ಅವರು ಸ್ವಂತ ಉದ್ಯಮ ಕೈಗೊಳ್ಳಲು ಅನುಕೂಲವಾಗಲಿದೆ ಎಂದರು.

ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ೧೪ ಲಕ್ಷ ವಿದ್ಯಾರ್ಥಿಗಳಿಗೆ ೬೧೫.೫ ಕೋಟಿ ವಿದ್ಯಾರ್ಥಿವೇತನ ಮಂಜೂರು ಮಾಡಲಾಗಿದೆ ಎಂದ ಅವರು ಮಹಿಳೆಯರಲ್ಲಿ ಉದ್ಯಮ ಶೀಲತೆಯನ್ನು ಉತ್ತೇಜಿಸಲು ಇಲಾಖಾ ಕಾರ್ಯಕ್ರಮದಡಿಯಲ್ಲಿ ಎಲ್ಲಾ ಅಭಿವೃದ್ದಿ ನಿಗಮಗಳ ಸ್ವಯಂ ಉದ್ಯೋಗ ಹಾಗೂ ಇತರೆ ಕಾರ್ಯಕ್ರಮಗಳ ಗುರಿಯಲ್ಲಿ ಶೇ.೨೫ ರಷ್ಟು ಪ.ಜಾತಿ ಮತ್ತು ಪಂಗಡದ ಮಹಿಳೆಯರಿಗೆ ಕಾಯ್ದಿರಿಸಲಾಗಿದೆ ಎಂದರು.
ಇಲಾಖೆ ವ್ಯಾಪ್ತಿಯ ವಿವಿಧ ಅಭಿವೃಧ್ದಿ ನಿಗಮಗಳ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಪ್ರಸಕ್ತ ಆಯವ್ಯಯದಲ್ಲಿ ೫೮೦ ಕೋಟಿ ಅನುದಾನವನ್ನು ಒದಗಿಸಲಾಗಿತ್ತು ಇದರ ಜೊತೆಗೆ ಹೆಚ್ಚುವರಿಯಾಗಿ ಪೂರಕ ೪೧೦ ಕೋಟಿ ಅನುದಾನವನ್ನು ಒದಗಿಸಲಾಗಿದೆ ಒಟ್ಟಾರೆ ೯೯೦ ಕೋಟಿ ರೂ ನೀಡಲಾಗಿದೆ ಎಂದರು.

ಉಡುಪಿ: ಸಮುದ್ರ ತೀರದಲ್ಲಿ ಡಾಲ್ಫಿನ್ ಜಾತಿಯ ಮೀನಿನ ಕಳೇಬರ ಪತ್ತೆ – Vishwanews24

ವಸತಿರಹಿತ ಪ.ಜಾತಿ ಮತ್ತು ಪಂಗಡದ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರಿಗೆ ರಾಜೀವ್ ಗಾಂಧೀ ವಸತಿ ನಿಗಮದ ಮೂಲಕ ಆದ್ಯತೆಯ ಮೇಲೆ ಮನೆ ನಿರ್ಮಾಣಕ್ಕೆ ೪೨೭೭ ಅರ್ಜಿಗಳನ್ನು ಜಿಲ್ಲಾ ಮಟ್ಟದ ಸಮಿತಿಗಳು ಆಯ್ಕೆ ಮಾಡಿದ್ದು, ಈ ಎಲ್ಲಾ ಫಲಾನುಭವಿಗಳಿಗೆ ಶೀಘ್ರದಲ್ಲಿ ಮನೆ ಮಂಜೂರಾತಿ ಪತ್ರ ನೀಡಲಾಗುವುದು ಎಂದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್, ಆಯುಕ್ತ ರಾಕೇಶ್, ಹಿಂದುಗಳಿದ ವರ್ಗಗಳ ಅಭಿವೃದ್ದಿ ಇಲಾಖೆ ಆಯುಕ್ತ ದಯಾನಂದ್ ಹಾಗೂ ೭ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಉಪಸ್ಥಿತರಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago