ಉಡುಪಿ: ಪರ್ಯಾಯ ಶಿರೂರು ಮಠ ಶ್ರೀಕೃಷ್ಣ ಮಠದ ವತಿಯಿಂದ ಫೆ. 15ರಂದು ಶ್ರೀಕೃಷ್ಣ ಮಠದಲ್ಲಿ ವೈಭವದ ಶಿವರಾತ್ರಿ ಮಹೋತ್ಸವದ ಆಚರಣೆ ನಡೆಯಲಿದೆ ಎಂದು ಪರ್ಯಾಯ ಶಿರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ಹೇಳಿದ್ದಾರೆ.
ಶಿರೂರು ಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶ್ರೀಗಳು ಮಾತನಾಡಿ, ಫೆ. 15, ಸಂಜೆ 6 ಗಂಟೆಯಿಂದ ಫೆ. 16ರ ಬೆಳಿಗ್ಗೆ 6 ಗಂಟೆಯ ತನಕ ಅಖಂಡ ಶಿವರಾತ್ರಿ ಉತ್ಸವ ನಡೆಯಲಿದೆ. ನಿರಂತರ ಪೂಜೆ, ಪಾರಾಯಣ, ಉಪನ್ಯಾಸ, ಭಜನೆ ಕಾರ್ಯಕ್ರಮಗಳು ಜರುಗಲಿವೆ ಎಂದರು.
ಇದನ್ನೂ ಓದಿ:
ವಿಷ್ಣುಸಹಸ್ರನಾಮ, ಪಾರಾಯಾಣಾದಿ, ಶಿವಪಂಚಾಕ್ಷರಿ ಮಂತ್ರ ಜಪವನ್ನು ಹಮ್ಮಿಕೊಳ್ಳಲಾಗಿದೆ. ಫೆ. 15ರ ಸಂಜೆ 5.45 ಕ್ಕೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 6 ಗಂಟೆಯಿಂದ 6.30 ರ ವರೆಗೆ ಪರ್ಯಾಯ ಶ್ರೀಗಳು ಸಂದೇಶ ನೀಡಲಿದ್ದಾರೆ. ಸಂಜೆ 6.30 ರಿಂದ 7 ಗಂಟೆಗೆ ಪ್ರವಚನ, ರಾತ್ರಿ 7 ಗಂಟೆಯಿಂದ ರಾತ್ರಿ 9.30 ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ರಾತ್ರಿ 9.30 ರಿಂದ 10 ಗಂಟೆವರೆಗೆ ಪೂಜೆ, ರಾತ್ರಿ 10 ಗಂಟೆಯಿಂದ 11 ಗಂಟೆಗೆ ಪ್ರವಚನ, ರಾತ್ರಿ 11 ಗಂಟೆಯಿAದ 11 ಗಂಟೆಯಿಂದ ರಾತ್ರಿ 12.30 ರುದ್ರ ಪಾರಾಯಣ, ವಿಷ್ಣು ಸಹಸ್ರನಾಮ ಪಾರಾಯಣ ಪೂಜೆ, ರಾತ್ರಿ 12.30 ರಿಂದ 2.30 ರಿಂದ ಕುಳಿತು ಭಜನೆ ಪೂಜೆ, ರಾತ್ರಿ 2.30 ರಿಂದ 4 ಗಂಟೆವರೆಗೆ ಕುಣಿತ ಭಜನೆ, ರಾತ್ರಿ 4 ಗಂಟೆಯಿಂದ 5.30 ರ ವರೆಗೆ ರುದ್ರ ಪಾರಾಯಣ, ವಿಷ್ಣು ಸಹಸ್ರನಾಮ ಪಾರಾಯಣ ಪೂಜೆ ನಡೆಯಲಿದೆ ಎಂದು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಶ್ರೀ ಮಠದ ದಿವಾನರಾದ ಡಾ. ಉದಯ ಕುಮಾರ್ ಸರಳತ್ತಾಯ ಉಪಸ್ಥಿತರಿದ್ದರು.
ಇದನ್ನೂ ಓದಿ:
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…