ಉಡುಪಿ: ತುಳುಕೂಟ ಉಡುಪಿ ವತಿಯಿಂದ ಇಪ್ಪತ್ತನೇ ವರ್ಷದ ಕೆಮ್ತೂರು ದೊಡ್ಡಣ್ಣ ಶೆಟ್ಟಿ ಸ್ಮರಣಾರ್ಥ ನಡೆದ ತುಳು ನಾಟಕ ಸ್ಫರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭ ಫೆ.೨೦ರಂದು ಸಂಜೆ.೫.೩೦ಕ್ಕೆ ಉಡುಪಿ ಎಂಜಿಎ0 ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿದೆ.
ಉಡುಪಿ ತುಳುಕೂಟದ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಯು.ಎ.ಇ ತುಳುವೆರ್ ಸಂಸ್ಥೆಯ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಉಡುಪಿ ಉಜ್ವಲ್ ಡೆವಲರ‍್ಸ್ ಸಂಸ್ಥೆಯ ಮುಖ್ಯಸ್ಥ ಪಿ.ಪುರುಷೋತ್ತಮ ಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಉಡುಪಿ ಎಂ.ಜಿ.ಎ0.ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ್ ಎಸ್.ನಾಯಕ್ ಮುಖ್ಯಅತಿಥಿಗಳಾಗಿ ಭಾಗವಹಿಸಲಿರುವರು. ಸಭಾಕಾರ್ಯಕ್ರಮದ ಬಳಿಕ ಈ ಸಾಲಿನ ಕೆಮ್ತೂರು ತುಳುನಾಟಕ ಪ್ರಶಸ್ತಿ ವಿಜೇತ ಮಣಿಪಾಲ ಸಂಗಮ ಕಲಾವಿದೆರ್ ತಂಡದ ಸೊರದಾಂತಿ ನಲಿಕೆ ನಾಟಕದ ಮರುಪ್ರದರ್ಶನ ನಡೆಯಲಿದೆ ಎಂದು ಉಡುಪಿ ತುಳುಕೂಟದ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಕೆಮ್ತೂರು ನಾಟಕ ಸ್ಪರ್ಧೆಯ ಸಂಚಾಲಕ ಬಿ.ಪ್ರಭಾಕರ ಭಂಡಾರಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…