Featured

ಉಡುಪಿ: ಫೆ. 8ರಂದು ಜಿಲ್ಲಾ ರೈತ ಸಮಾವೇಶ – vishwanews24

ಉಡುಪಿ: ಫೆ. 8ರಂದು ಜಿಲ್ಲಾ ರೈತ ಸಮಾವೇಶ

ಉಡುಪಿ: ಉಡುಪಿ ಜಿಲ್ಲಾ ಕೃಷಿಕ ಸಂಘದ ಆಶ್ರಯದಲ್ಲಿ ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಈಸೀ ಲೈಫ್ ಎಂಟರ್‌ಪ್ರೈಸಸ್ ಹಾಗೂ ಎಸ್.ಆರ್.ಕೆ. ಲ್ಯಾಡರ್ಸ್ ಪುತ್ತೂರು ಇವರ ಸಹಯೋಗದಲ್ಲಿ ಜಿಲ್ಲಾ ರೈತ ಸಮಾವೇಶ -2025 ಅನ್ನು ಇದೇ ಫೆ.8ರಂದು ಉಡುಪಿ ಕುಂಜಿಬೆಟ್ಟು ಶ್ರೀ ಶಾರದಾ ಮಂಟಪ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ಹೇಳಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 10ಗಂಟೆಗೆ ಮಂಗಳೂರು ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಎಸ್. ನಾಗರಾಜ ಕೆದ್ಲಾಯ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಅಧ್ಯಕ್ಷತೆ ವಹಿಸಲಿದ್ದಾರೆ.

ವೈಜ್ಞಾನಿಕ ಅಡಿಕೆ ಬೇಸಾಯ ಬಗ್ಗೆ ವಲಯ ತೋಟಗಾರಿಕಾ ಮತ್ತು ಕೃಷಿ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ. ಧನಂಜಯ, ಆರೋಗ್ಯ ನೆಮ್ಮದಿಗಾಗಿ ಕೃಷಿ ಬಗ್ಗೆ ಉಡುಪಿ ಪೋಲಿಸ್ ಉಪಾಧೀಕ್ಷಕ ಪ್ರಭು ಡಿ.ಟಿ., ಲಾಭದಾಯಕ ಕೃಷಿಗೆ ವಿವಿಧ ತಂತ್ರಜ್ಞಾನದ ಬಗ್ಗೆ ಬ್ರಹ್ಮಾವರ ಕೃಷಿ ಮಹಾ ವಿದ್ಯಾಲಯದ ಪ್ರಾಂಶುಪಾಲರಾದ ಡಾ. ಲಕ್ಷ್ಮಣ್, ಹೈನುಗಾರಿಕೆಯಲ್ಲಿ ಕೃತಕ ಗರ್ಭಧಾರಣೆಯ ಸವಾಲುಗಳ ಬಗ್ಗೆ ಮಣಿಪಾಲದ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಪ್ರಶಾಂತ ಶೆಟ್ಟಿ, ಭತ್ತದ ಇಳುವರಿ ಹೆಚ್ಚಿಸುವ ವಿಧಾನಗಳ ಬಗ್ಗೆ ಕೃಷಿ ಸಂಶೋಧನಾ ಕೇಂದ್ರ ಬ್ರಹ್ಮಾವರದ ಡಾ.ಸುಧೀರ್ ಕಾಮತ್, ಆಹಾರ ಪದ್ಧತಿ ಮತ್ತು ಮಧುಮೇಹ ಬಗ್ಗೆ ಡಾ. ಶ್ರುತಿ ಬಲ್ಲಾಳ್ ಅಂಬಲಪಾಡಿ ಉಪನ್ಯಾಸ ನೀಡಲಿದ್ದಾರೆ ಎಂದರು.

ಕೃಷಿ ಇಲಾಖೆಯಿಂದ ಸಿಗುವ ಸರಕಾರಿ ಸೌಲಭ್ಯಗಳ ಬಗ್ಗೆ ಉಡುಪಿಯ ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ, ತೋಟಗಾರಿಕೆ ಇಲಾಖೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಉಡುಪಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ ಮತ್ತು ವಿದ್ಯುತ್ ಗ್ರಾಹಕರಿಗೆ ಅಗತ್ಯ ಮಾಹಿತಿಗಳನ್ನು ಉಡುಪಿ ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ದಿನೇಶ್ ಉಪಾಧ್ಯ ನೀಡಲಿದ್ದಾರೆ.

ಕೃಷಿ ಮಾಹಿತಿ-ಮಾರ್ಗದರ್ಶನಗಳ ಜೊತೆಗೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಆಧುನಿಕ ಕೃಷಿ ಪರಿಕರಗಳು, ಹೊಸ ಆವಿಷ್ಕೃತ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು, ವಿವಿಧ ಬೆಳೆಗಳ ಸುಧಾರಿತ ತಂತ್ರಜ್ಞಾನದಿಂದ ಬೆಳೆಸಿದ ಗಿಡಗಳು, ಬೀಜ, ಕೃಷಿ ಸಂಬಂಧಿ ಪುಸ್ತಕ ಮಳಿಗೆಗಳು ಇರುತ್ತವೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಭಟ್ ಕುದಿ, ಕಾರ್ಯದರ್ಶಿ ರವೀಂದ್ರ ಗುಜ್ಜರಬೆಟ್ಟು, ಉಪಾಧ್ಯಕ್ಷ ದಿನೇಶ್ ಶೆಟ್ಟಿ ಹೆರ್ಗಾ, ಶ್ರೀನಿವಾಸ್ ಆಚಾರ್ಯ ಬೈಲೂರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…

5 hours ago

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ -vishwanews24

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…

11 hours ago

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ -vishwanews24

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…

11 hours ago

ನಂದಿನಿ ಹಾಲಿನ ದರ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ -vishwanews24

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…

12 hours ago

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ -vishwanews24

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…

12 hours ago

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್‌ ಠಾಣಾ…

12 hours ago