ಉಡುಪಿ: ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ಪರಿಚಯವಾದ ಮಹಿಳೆಯನ್ನು ನಂಬಿದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಹಿಳೆಯೊಬ್ಬರು 11 ಲಕ್ಷಕ್ಕೂ ಹೆಚ್ಚು ಮೊತ್ತ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ.
ಕಾರ್ಕಳ ತಾಲೂಕಿನ ಮಿಯಾರಿನ ಕುಂಟಿಬೈಲಿನ 38 ವರ್ಷದ ನಿವಾಸಿಯೊಬ್ಬರಿಗೆ ಫೇಸ್ ಬುಕ್ ಮೂಲಕ ಮಾರ್ಕ್ ಸೀಮಾ ಎಂಬವರು ಪರಿಚಯವಾಗಿದ್ದರು. ಗೆಳೆತನದಲ್ಲಿ ಅವರು ತಮ್ಮ ವಿಳಾಸವನ್ನು ನೀಡಿದ್ದರು. ಅವರ ನಂಬರಿನಿಂದ ಸುನಿತಾ ಕುಮಾರಿ ಎಂಬವರು ಮಹಿಳೆಗೆ ಲಂಡನ್ ನಿಂದ ಚಿನ್ನದ ವಸ್ತು ಮತ್ತು ಪೌಂಡು ಹಣ ಪಾರ್ಸೆಲ್ ಬಂದಿದೆ ಎಂದು ಹೇಳಿ ಅದರ ಕಸ್ಟಮ್ ಚಾರ್ಜ್ ಹಾಗೂ ಐ.ಟಿ ರೈಡ್ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡಿದ್ದಾರೆ.
ಕಾರ್ಕಳದ ಮಹಿಳೆಯು ಹಂತ ಹಂತವಾಗಿ ಗೂಗಲ್‌ಪೇ ಮೂಲಕ ಒಟ್ಟು 11,94,490 ರೂ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 60/2024ಕಲಂ: 66 (ಸಿ) (ಡಿ) ಐ.ಟಿ. ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…