ಉಡುಪಿ: ಫೈನಾನ್ಸ್ ಒಂದಕ್ಕೆ ಮ್ಯಾನೇಜರ್ ಮತ್ತು ಲೋನ್ ಆಫೀಸರ್’ಗಳೆ ಮೋಸ ಮಾಡಿರುವ ಕುರಿತು ಪ್ರಕರಣವೊಂದು ದಾಖಲಾಗಿದೆ.
ಈ ಕುರಿತು ಸ್ಪಂದನಾ ಸ್ಪೂರ್ತಿ ಫೈನಾನ್ಸಿಯಲ್ ಲಿಮಿಟೆಡ್ , ಉಡುಪಿ ಶಾಖೆಯ ಏರಿಯಾ ಮ್ಯಾನೇಜರ್ ಬಸವರಾಜ್ ಎಂಬುವವರು ದೂರು ದಾಖಲಿಸಿದ್ದಾರೆ.
ದೂರಿನ ಪ್ರಕಾರ ಬ್ಯಾಂಕ್‌ನಲ್ಲಿ ಒಂದು ವರ್ಷದಿಂದ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಬ್ದುಲ್ ಲತೀಫ್ ಖಾಸಿಂ ಮುಲ್ಲಾರವರು ಸಂಘದ ಸದಸ್ಯರಿಂದ ಕಂತಿನ ಪ್ರಕಾರ ಸಾಲದ ಹಣವನ್ನು ವಸೂಲಿ ಮಾಡುವ ಕರ್ತವ್ಯವನ್ನು ಮಾಡಿಕೊಂಡಿರುತ್ತಾರೆ. ಅಬ್ದುಲ್ ಲತೀಫ್ ಖಾಸಿಂ ಮುಲ್ಲಾರವರು ಸಂಘದ ಸದಸ್ಯರು ಕಟ್ಟಿದ ಲೋನ್ ಹಣದಲ್ಲಿ ರೂಪಾಯಿ 1,25,787 ಹಣವನ್ನು ಸ್ಪಂದನಾ ಸ್ಪೂರ್ತಿ ಫೈನಾನ್ಸಿಯಲ್ ಲಿಮಿಟೆಡ್ ಸಂಸ್ಥೆಗೆ ಪಾವತಿಸದೇ ತನ್ನ ಸ್ವಂತಕ್ಕೆ ಉಪಯೋಗಿಸಿಕೊಂಡಿರುತ್ತಾರೆ ಹಾಗೂ ಲೋನ್ ಆಫೀಸರ್‌ಗಳಾದ ಅಕ್ಷಯ್ ರವರು 49,000/- ಮತ್ತು ದೀಕ್ಷಿತ್ ರವರು 3,00,000/- ಹಣವನ್ನು ತನ್ನ ಸ್ವಂತಕ್ಕೆ ಉಪಯೋಗಿಸಿಕೊಂಡು , ಸಂಸ್ಥೆಯ ಮ್ಯಾನೇಜರ್‌ರವರೊಂದಿಗೆ ಸೇರಿಕೊಂಡು ಈ ಮೂವರೂ ಒಟ್ಟು ರೂಪಾಯಿ 4,74,787/- ಹಣವನ್ನು ಸಂಸ್ಥೆಗೆ ಕಟ್ಟದೇ ಮೋಸ ಹಾಗೂ ನಂಬಿಕೆ ದ್ರೋಹ ಮಾಡಿರುವ ಕುರಿತು ದೂರು ದಾಖಲಿಸಲಾಗಿದೆ.
ಆ.29 ರಂದು ಸಂಸ್ಥೆಯ ಹಿರಿಯ ಅಧಿಕಾರಿಗಳಾದ ಬಸವರಾಜ , ವೈಸ್ ಪ್ರೆಸಿಡೆಂಟ್ ಮತ್ತು ಸಹಾಯಕ ವೈಸ್ ಪ್ರೆಸಿಡೆಂಟ್ ಕೊಟ್ರೇಶ , ಸ್ಟೇಟ್ ವೈಸ್ ಪ್ರೆಸಿಡೆಂಟ್ ಆದ ಮಹೇಶ್ ರವರು ಸಂಸ್ಥೆಯ ಲೆಕ್ಕ ಪತ್ರಗಳನ್ನು ಪರಿಶೀಲನೆ ಮಾಡಿದಾಗ ಸಂಸ್ಥೆಯ ನಗದು ಕ್ಲೋಸಿಂಗ್ ಬ್ಯಾಲೆನ್ಸ್ ಕಡಿಮೆ ಇದ್ದ ಕಾರಣ ವಿಚಾರ ಬೆಳಕಿಗೆ ಬಂದಿದೆ. ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…