Featured

ಉಡುಪಿ: ಫೈನಾನ್ಸ್ ಗೆ ಮ್ಯಾನೇಜರ್ ಮತ್ತು‌ ಲೋನ್ ಆಫೀಸರ್ ಗಳಿಂದಲೇ ವಂಚನೆ ; ಪ್ರಕರಣ ದಾಖಲು – vishwanews24

ಉಡುಪಿ: ಫೈನಾನ್ಸ್’ಗೆ ಮ್ಯಾನೇಜರ್ ಮತ್ತು‌ ಲೋನ್ ಆಫೀಸರ್’ಗಳಿಂದಲೇ ವಂಚನೆ ; ಪ್ರಕರಣ ದಾಖಲು

ಉಡುಪಿ: ಫೈನಾನ್ಸ್ ಒಂದಕ್ಕೆ ಮ್ಯಾನೇಜರ್ ಮತ್ತು ಲೋನ್ ಆಫೀಸರ್’ಗಳೆ ಮೋಸ ಮಾಡಿರುವ ಕುರಿತು ಪ್ರಕರಣವೊಂದು ದಾಖಲಾಗಿದೆ.

ಈ ಕುರಿತು ಸ್ಪಂದನಾ ಸ್ಪೂರ್ತಿ ಫೈನಾನ್ಸಿಯಲ್‌ ಲಿಮಿಟೆಡ್‌ , ಉಡುಪಿ ಶಾಖೆಯ ಏರಿಯಾ ಮ್ಯಾನೇಜರ್ ಬಸವರಾಜ್ ಎಂಬುವವರು ದೂರು ದಾಖಲಿಸಿದ್ದಾರೆ.

ದೂರಿನ ಪ್ರಕಾರ ಬ್ಯಾಂಕ್‌ನಲ್ಲಿ ಒಂದು ವರ್ಷದಿಂದ ಮ್ಯಾನೇಜರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಬ್ದುಲ್‌ ಲತೀಫ್‌ ಖಾಸಿಂ ಮುಲ್ಲಾರವರು ಸಂಘದ ಸದಸ್ಯರಿಂದ ಕಂತಿನ ಪ್ರಕಾರ ಸಾಲದ ಹಣವನ್ನು ವಸೂಲಿ ಮಾಡುವ ಕರ್ತವ್ಯವನ್ನು ಮಾಡಿಕೊಂಡಿರುತ್ತಾರೆ. ಅಬ್ದುಲ್‌ ಲತೀಫ್‌ ಖಾಸಿಂ ಮುಲ್ಲಾರವರು ಸಂಘದ ಸದಸ್ಯರು ಕಟ್ಟಿದ ಲೋನ್‌ ಹಣದಲ್ಲಿ ರೂಪಾಯಿ 1,25,787 ಹಣವನ್ನು ಸ್ಪಂದನಾ ಸ್ಪೂರ್ತಿ ಫೈನಾನ್ಸಿಯಲ್‌ ಲಿಮಿಟೆಡ್‌ ಸಂಸ್ಥೆಗೆ ಪಾವತಿಸದೇ ತನ್ನ ಸ್ವಂತಕ್ಕೆ ಉಪಯೋಗಿಸಿಕೊಂಡಿರುತ್ತಾರೆ ಹಾಗೂ ಲೋನ್‌ ಆಫೀಸರ್‌ಗಳಾದ ಅಕ್ಷಯ್‌ ರವರು 49,000/- ಮತ್ತು ದೀಕ್ಷಿತ್‌ ರವರು 3,00,000/- ಹಣವನ್ನು ತನ್ನ ಸ್ವಂತಕ್ಕೆ ಉಪಯೋಗಿಸಿಕೊಂಡು , ಸಂಸ್ಥೆಯ ಮ್ಯಾನೇಜರ್‌ರವರೊಂದಿಗೆ ಸೇರಿಕೊಂಡು ಈ ಮೂವರೂ ಒಟ್ಟು ರೂಪಾಯಿ 4,74,787/- ಹಣವನ್ನು ಸಂಸ್ಥೆಗೆ ಕಟ್ಟದೇ ಮೋಸ ಹಾಗೂ ನಂಬಿಕೆ ದ್ರೋಹ ಮಾಡಿರುವ ಕುರಿತು ದೂರು ದಾಖಲಿಸಲಾಗಿದೆ.

ಆ.29 ರಂದು ಸಂಸ್ಥೆಯ ಹಿರಿಯ ಅಧಿಕಾರಿಗಳಾದ ಬಸವರಾಜ , ವೈಸ್‌ ಪ್ರೆಸಿಡೆಂಟ್‌ ಮತ್ತು ಸಹಾಯಕ ವೈಸ್‌ ಪ್ರೆಸಿಡೆಂಟ್‌ ಕೊಟ್ರೇಶ , ಸ್ಟೇಟ್‌ ವೈಸ್‌ ಪ್ರೆಸಿಡೆಂಟ್‌ ಆದ ಮಹೇಶ್‌ ರವರು ಸಂಸ್ಥೆಯ ಲೆಕ್ಕ ಪತ್ರಗಳನ್ನು ಪರಿಶೀಲನೆ ಮಾಡಿದಾಗ ಸಂಸ್ಥೆಯ ನಗದು ಕ್ಲೋಸಿಂಗ್‌ ಬ್ಯಾಲೆನ್ಸ್‌ ಕಡಿಮೆ ಇದ್ದ ಕಾರಣ ವಿಚಾರ ಬೆಳಕಿಗೆ ಬಂದಿದೆ. ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್‌ ಠಾಣೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

10 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

10 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

11 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

1 day ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

1 day ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

1 day ago